Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:33 - ಕನ್ನಡ ಸತ್ಯವೇದವು C.L. Bible (BSI)

33 ಆದರೆ ನನ್ನೊಲವು ಅವನನ್ನು ಕೈಬಿಡದು I ನನ್ನ ಪ್ರಾಮಾಣಿಕತೆಗದು ಚ್ಯುತಿಯಾಗದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆದರೂ ನಾನು ಅವನಲ್ಲಿಟ್ಟಿರುವ ಕೃಪೆಯನ್ನು ತಪ್ಪಿಸುವುದಿಲ್ಲ; ನನ್ನ ನಂಬಿಗಸ್ತಿಕೆಯಿಂದ ಜಾರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆದರೂ ನಾನು ಅವನಲ್ಲಿಟ್ಟಿರುವ ಕೃಪೆಯನ್ನು ತಪ್ಪಿಸುವದಿಲ್ಲ; ನನ್ನ ನಂಬಿಗಸ್ತಿಕೆಯಿಂದ ಜಾರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆದರೆ ಅವರ ಮೇಲೆ ನನಗಿರುವ ಪ್ರೀತಿಯು ಎಂದಿಗೂ ನಿಂತುಹೋಗುವುದಿಲ್ಲ. ನಾನು ಅವರಿಗೆ ಯಾವಾಗಲೂ ನಂಬಿಗಸ್ತನಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆದರೂ ನನ್ನ ಪ್ರೀತಿ, ಕರುಣೆಯನ್ನು ಆತನಿಂದ ಸಂಪೂರ್ಣವಾಗಿ ತೊಲಗಿಸೆನು. ಇಲ್ಲವೆ ನನ್ನ ನಂಬಿಗಸ್ತಿಕೆಯಿಂದ ನಾನು ಜಾರಿಹೋಗೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:33
13 ತಿಳಿವುಗಳ ಹೋಲಿಕೆ  

ಆದರೆ ನನ್ನ ಕೃಪೆ, ನಿನ್ನ ಕಣ್ಮುಂದೆಯೇ ಸೌಲನನ್ನು ಬಿಟ್ಟು ಹೋದಹಾಗೆ, ಅವನನ್ನು ಬಿಟ್ಟುಹೋಗುವುದಿಲ್ಲ.


ದೇವರ ವಾಗ್ದಾನ ಮತ್ತು ಶಪಥ ಇವೆರಡೂ ಅಚಲವಾದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಮೋಸಮಾಡುವವರೇ ಅಲ್ಲ. ಇದರಿಂದಾಗಿ, ದೇವರ ಆಶ್ರಯಕ್ಕಾಗಿ ಧಾವಿಸಿಬಂದಿರುವ ನಾವು, ನಮ್ಮ ಮುಂದಿರಿಸಿರುವ ನಂಬಿಕೆ ನಿರೀಕ್ಷೆಯಲ್ಲಿ ಸ್ಥಿರವಾಗಿ ನಿಲ್ಲಲು ಬಲವಾದ ಪ್ರೋತ್ಸಾಹ ದೊರೆತಂತಾಯಿತು.


ಇಸ್ರಯೇಲರ ನಿತ್ಯಾಧಾರವಾದ ಅವರು ಸುಳ್ಳಾಡುವವರಲ್ಲ; ಮಾತನ್ನು ಹಿಂತೆಗೆದುಕೊಳ್ಳುವವರಲ್ಲ; ಏಕೆಂದರೆ ಅವರು ಮನಸ್ಸು ಬದಲಾಯಿಸುವಂಥ ಮನುಷ್ಯರಲ್ಲ,” ಎಂದು ಹೇಳಿದನು.


ನಾನು ನನ್ನ ಹೆಸರಿಗಾಗಿ ಆರಿಸಿಕೊಂಡ ಜೆರುಸಲೇಮ್ ಪಟ್ಟಣದಲ್ಲಿ ನನ್ನ ದಾಸ ದಾವೀದನ ದೀಪ ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.


ತನ್ನ ದಾಸ ದಾವೀದನ ನಿಮಿತ್ತ ಹಾಗು ತಾವು ಇಸ್ರಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಜೆರುಸಲೇಮ್ ಪಟ್ಟಣದ ನಿಮಿತ್ತ ಅವನಿಗೆ ಒಂದೇ ಒಂದು ಕುಲವನ್ನು ಉಳಿಸಿ, ಬೇರೆ ಹತ್ತು ಕುಲಗಳನ್ನು ನಿನಗೆ ಕೊಡುತ್ತೇನೆಂದು ಹೇಳಿದ್ದಾರೆ.


ಆದರೆ ಇಡೀ ಸಾಮ್ರಾಜ್ಯವನ್ನು ಕಿತ್ತುಕೊಳ್ಳುವುದಿಲ್ಲ; ನನ್ನ ದಾಸ ದಾವೀದನ ನಿಮಿತ್ತ ಹಾಗು ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣದ ನಿಮಿತ್ತ ನಿನ್ನ ಮಗನಿಗೆ ಒಂದು ಕುಲವನ್ನು ಉಳಿಸುವೆನು,” ಎಂದು ಸರ್ವೇಶ್ವರ ಹೇಳಿದರು.


ಅವನು ನನ್ನ ಹೆಸರಿನಲ್ಲಿ ಒಂದು ದೇವಾಲಯವನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ಸ್ಥಿರಪಡಿಸುವೆನು.


ಶತ್ರುಗಳೆಲ್ಲರನ್ನು ತಮ್ಮ ಪಾದಪೀಠವಾಗಿಸಿಕೊಳ್ಳುವ ತನಕ ಅವರು ರಾಜ್ಯವಾಳಬೇಕಾಗಿದೆ.


ಭಂಗಪಡಿಸಿರುವೆ ದಾಸನೊಡನೆ ಮಾಡಿದ ಒಡಂಬಡಿಕೆಯನು I ಮಣ್ಣುಪಾಲಾಗಿಸಿರುವೆ ಅವನ ಪಟ್ಟದ ಆ ಕಿರೀಟವನು II


ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ಅವನು ತಪ್ಪುಮಾಡಿದಾಗ, ಮಗನಿಗೆ ತಂದೆ ಬೆತ್ತದ ರುಚಿತೋರಿಸುವಂತೆ ನಾನು ಅವನನ್ನು ಶಿಕ್ಷಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು