Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:38 - ಕನ್ನಡ ಸತ್ಯವೇದವು C.L. Bible (BSI)

38 ಇಂತೆಂದ ನೀನೆ ತ್ಯಜಿಸಿರುವೆ ನಿನ್ನಾಭಿಷಿಕ್ತನನು I ತಳ್ಳಿಬಿಟ್ಟಿರುವೆ ಕೋಪಾವೇಶದಿಂದ ಅವನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಹೀಗೆ ಹೇಳಿದ ನೀನು ನಿನ್ನ ಅಭಿಷಿಕ್ತನ ಮೇಲೆ ಕೋಪಗೊಂಡವನಾಗಿ, ಅವನನ್ನು ಅಸಹ್ಯಿಸಿ ತಳ್ಳಿಬಿಟ್ಟಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಹೀಗೆ ಹೇಳಿದ ನೀನು ನಿನ್ನ ಅಭಿಷಿಕ್ತನ ಮೇಲೆ ರೇಗಿದವನಾಗಿ ಅವನನ್ನು ಅಸಹ್ಯಿಸಿ ತಳ್ಳಿಬಿಟ್ಟಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಆದರೆ ನೀನು ಅಭಿಷೇಕಿಸಿದ ರಾಜನ ಮೇಲೆ ನೀನು ಕೋಪಗೊಂಡಿದ್ದರಿಂದಲೇ ಅವನನ್ನು ಒಬ್ಬಂಟಿಗನನ್ನಾಗಿ ಬಿಟ್ಟುಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆದರೆ ನೀವು ತಿರಸ್ಕರಿಸಿ ಬಿಟ್ಟುಬಿಟ್ಟ, ನಿಮ್ಮ ಅಭಿಷಿಕ್ತನಿಗೆ ವಿರೋಧವಾಗಿ ಬೇಸರವಾದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:38
19 ತಿಳಿವುಗಳ ಹೋಲಿಕೆ  

“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ಇದ ಕಂಡು ಸರ್ವೇಶ್ವರ ಬೇಸರಗೊಂಡ ತನ್ನಾ ಕುವರಕುವರಿಯರ ನಡತೆಯ ನೋಡಿ ನೊಂದುಕೊಂಡ.


ಕೆರಳಿತು ಕೋಪ ಆ ಜನರ ಮೇಲೆ ಪ್ರಭುವಿಗೆ I ತನ್ನವರಾ ನಡತೆ ಅಸಹ್ಯವಾಯಿತು ಆತನಿಗೆ II


ನಿಂದಿಸುತಿಹರು ಪ್ರಭು, ವೈರಿಗಳು ನಿನ್ನಭಿಷಿಕ್ತನನು I ಹೆಜ್ಜೆಹೆಜ್ಜೆಗು ಅವಮಾನಿಸುತಿಹರು ಶತ್ರುಗಳವನನು I ಆಮೆನ್, ಆಮೆನ್, ಪ್ರಭುವಿಗೆ ಸರ್ವದಾ ಧನ್ಯವಾದವು II


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಕೆಲಸದಿಂದ ತೆಗೆದುಹಾಕಿದೆ. ಅನಂತರ ನನಗೆ ಕುರಿಗಳ ಬಗ್ಗೆ ಅಸಹ್ಯವಾಯಿತು. ಕುರಿಗಳು ಸಹ ನನ್ನ ಬಗ್ಗೆ ಬೇಸರಗೊಂಡವು.


ತಮ್ಮ ಮಾತಿಗೆ ಕಿವಿಗೊಡದ ಈ ಜನರನ್ನು ಸರ್ವೇಶ್ವರ ತಳ್ಳಿಬಿಡುವರು. ಇತರ ಜನಾಂಗಗಳ ಮಧ್ಯೆ ಅವರು ಅಲೆಮಾರಿಗಳಂತೆ ಇರುವರು.


ಯಾವನನ್ನು ಕುರಿತು ನಾವು: “ನಮ್ಮ ಬಾಳಿನ ಉಸಿರು, ದೇವರಿಂದ ಅಭಿಷಿಕ್ತನು, ಇವನ ಆಶ್ರಯದಿಂದಲೆ ರಾಷ್ಟ್ರಗಳ ನಡುವೆ ನಮಗೆ ಉಳಿವು” ಎಂದುಕೊಂಡೆವೋ ಅಂಥವನೇ ಸಿಕ್ಕಿಬಿದ್ದಿದ್ದಾನೆ ಹಗೆಗಳು ತೋಡಿದ ಗುಳಿಯೊಳಗೆ!


ಸ್ವಾಮಿ ತಿರಸ್ಕರಿಸಿಬಿಟ್ಟಿದ್ದಾನೆ ತನ್ನ ಬಲಿಪೀಠವನ್ನೇ ಅಸಹ್ಯಗೊಂಡು ತೊರೆದುಬಿಟ್ಟಿದ್ದಾನೆ ತನ್ನ ಪವಿತ್ರಸ್ಥಾನವನ್ನೇ ಸಿಯೋನ್ ಅರಮನೆಯ ಗೋಡೆಗಳನ್ನು ಕೆಡವಲು ಬಿಟ್ಟಿದ್ದಾನೆ ಹಗೆಗಳನ್ನೇ. ಹಬ್ಬಹರಿದಿನಗಳ ಜಯಘೋಷವೋ ಎಂಬಂತೆ ಘೋಷಣೆ ಹಾಕುತ್ತಿದ್ದಾರಲ್ಲಾ ಶತ್ರುಗಳು ಸರ್ವೇಶ್ವರನ ಮಂದಿರದಲ್ಲೆ !


ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಿಮ್ಮೊಡನೆ ವ್ಯಾಜ್ಯ ನನಗೆ ಅಸಾಧ್ಯ. ಆದರೂ ನಿಮ್ಮೊಡನೆ ಚರ್ಚಿಸಬೇಕೆಂದಿರುವೆ ಈ ನ್ಯಾಯ : ದುರುಳರ ಬಾಳು ಬೆಳಗುತ್ತಿರುವುದು ಏಕೆ? ದ್ರೋಹಿಗಳೆಲ್ಲರು ನೆಮ್ಮದಿಯಾಗಿರುವುದು ಏಕೆ?


ನಿನ್ನ ಮಂದಿರದಲಿ ಕಳೆದ ದಿನವೊಂದು I ತಿಳಿವೆನು ಸಾವಿರ ದಿನಕೂ ಮೇಲೆಂದು II


ರಣರೌದ್ರನಾದನು ಇದನರಿತ ದೇವನು I ತೊರೆದನು ಅಸಹ್ಯದಿಂದ ಇಸ್ರಯೇಲರನು II


ಕೈಬಿಟ್ಟುಬಿಡುವನೋ ಪ್ರಭು ಸದಾಕಾಲಕು? I ಕೃಪೆಯನು ತೋರನೋ ಮತ್ತೆಂದೆಂದಿಗೂ? II


ದೇವಾ ನೀ, ನಮ್ಮನು ಕೈ ಬಿಟ್ಟಿರುವುದು ಸರಿಯೋ? I ನಮ್ಮ ಸೈನ್ಯ ಸಮೇತ ನೀ ಬರದೆಹೋದೆಯೋ? II


ಕೈಬಿಟ್ಟೆ ದೇವಾ, ನಮ್ಮನು ಕೈಬಿಟ್ಟೆ I ಕೋಪದಿಂದೆಮ್ಮನು ತಳ್ಳಿ ಕೆಡವಿಬಿಟ್ಟೆ I ಉದ್ಧಾರವಾಗ್ವೆವು ನೀ ಮರಳಿ ಬೆಂಗೊಡೆ II


‘ನಿನ್ನಲ್ಲಿ ನನಗೆ ಇಷ್ಟವಿಲ್ಲ,’ ಎಂದು ತೋರಿದರೆ ತಮಗೆ ಸರಿಕಂಡಂತೆ ಮಾಡಲಿ. ಅವರ ಚಿತ್ತದಂತೆ ಆಗಲಿ,” ಎಂದನು.


ಮಳೆಯಾಗಲಿ, ಮಂಜಾಗಲಿ ಬೀಳದಿರಲಿ ಆ ಗಿಲ್ಬೋವ ಗುಡ್ಡಗಳ ಮೇಲೆ ಅದರ ಮೇಲಿನ ಹೊಲಗಳು ಬೆಳೆಕೊಡದಿರಲಿ ನೈವೇದ್ಯಕೆ. ಏಕೆನೆ ಅಲ್ಲಿ ಬಿದ್ದಿವೆ ಯುದ್ಧವೀರರ ಕತ್ತಿಗುರಾಣಿ ಅಭಿಷಿಕ್ತನಲ್ಲದವನ ಗುರಾಣಿಯಂತೆ ಆ ಸೌಲನ ಗುರಾಣಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು