Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:4 - ಕನ್ನಡ ಸತ್ಯವೇದವು C.L. Bible (BSI)

4 “ಸ್ಥಾಪಿಸುವೆ ಶಾಶ್ವತವಾಗಿ ನಿನ್ನ ಸಂತತಿಯನು I ಸ್ಥಿರಪಡಿಸುವೆ ಯುಗಯುಗಕು ನಿನ್ನ ಸಿಂಹಾಸನವನು” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ‘ಶಾಶ್ವತವಾಗಿ ನಿನ್ನ ಸಂತತಿಯನ್ನು ಸ್ಥಾಪಿಸುವೆನು, ತಲತಲಾಂತರಗಳಿಗೂ ನಿನ್ನ ಸಿಂಹಾಸನವನ್ನು ಸ್ಥಿರಪಡಿಸುವೆನು ಎಂದು ಹೇಳಿದ್ದೇನೆ’” ಎಂಬುವುದೇ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಒಡಂಬಡಿಕೆಮಾಡಿಕೊಂಡು ಆಣೆಯಿಟ್ಟು - ಶಾಶ್ವತವಾಗಿ ನಿನ್ನ ಸಂತತಿಯನ್ನು ಸ್ಥಾಪಿಸುವೆನು, ತಲತಲಾಂತರಗಳಿಗೂ ನಿನ್ನ ಸಿಂಹಾಸನವನ್ನು ಸ್ಥಿರಪಡಿಸುವೆನು ಎಂದು ಹೇಳಿದ್ದೇನೆ ಎಂಬದೇ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ‘ದಾವೀದನೇ, ನಿನ್ನ ಕುಟುಂಬವನ್ನು ಶಾಶ್ವಾತಗೊಳಿಸುವೆನು, ನಿನ್ನ ರಾಜ್ಯವನ್ನೂ ಶಾಶ್ವತಗೊಳಿಸುವೆನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ‘ಎಂದೆಂದಿಗೂ ನಿಮ್ಮ ಸಂತತಿಯನ್ನು ಸ್ಥಿರಪಡಿಸುವೆನು ತಲತಲಾಂತರಕ್ಕೂ ನಿಮ್ಮ ಸಿಂಹಾಸನವನ್ನು ಕಟ್ಟುವೆನು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:4
23 ತಿಳಿವುಗಳ ಹೋಲಿಕೆ  

“ನನ್ನ ನೇಮನಿಯಮಗಳನು ನಿನ್ನ ಮಕ್ಕಳು ಅನುಸರಿಸುವರಾದರೆ I ಕೂರುವರು ಸದಾಕಾಲ ಅವರ ಮಕ್ಕಳ ನಿನ್ನಾ ಸಿಂಹಾಸನದ ಮೇಲೆ” II


ಅವನೇ ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟುವನು. ಅವನು ನನಗೆ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು; ಇಸ್ರಯೇಲರಲ್ಲಿ ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು,” ಎಂಬುದಾಗಿ ಹೇಳಿದರು.


ಇಸ್ರಯೇಲ್ ಸಿಂಹಾಸನದ ಮೇಲೆ ನಿನ್ನ ಸಂತಾನದವರು ತಪ್ಪದೆ ಕುಳಿತುಕೊಳ್ಳುವರು ಎಂಬುದಾಗಿ ನಿನ್ನ ತಂದೆ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.


“ಯೇಸುವೆಂಬ ನಾನೇ ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ನಿಮಗೆ ಸಾಕ್ಷಿನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ನಾನು ದಾವೀದಕುಲಪುತ್ರ. ಅದೇ ವಂಶದ ಕುಡಿ; ಉದಯಕಾಲದ ಉಜ್ವಲ ನಕ್ಷತ್ರ!


ಮಗದೊಂದು ಕಡೆ ಯೆಶಾಯನು ಹೀಗೆನ್ನುತ್ತಾನೆ: “ಜೆಸ್ಸೆಯನ ವಂಶಜನು ಬರುವನು ಅನ್ಯಜನಾಂಗಗಳನ್ನು ಆಳುವವನು ಉದಯಿಸುವನು ಆ ಜನಾಂಗಗಳು ಆತನಲ್ಲೇ ಭರವಸೆಯನ್ನಿಡುವುವು.”


ಅಂದು, ಸರ್ವೇಶ್ವರ ಜೆರುಸಲೇಮಿನ ನಿವಾಸಿಗಳನ್ನು ಕೋಟೆಯಂತೆ ಕಾಪಾಡುವರು. ಈ ಕಾರಣ, ಅವರಲ್ಲಿ ದುರ್ಬಲನು ದಾವೀದನಂತೆ ಬಲಾಢ್ಯನಾಗುವನು. ದಾವೀದನವಂಶ ದೇವದೂತರಂತೆ, ಹೌದು, ದೇವರಂತೆ, ಅವರಿಗೆ ಮುಂದಾಳಾಗುವುದು.


ರವಿಯಂತಿರುವುದು ಎನ್ನ ಮುಂದೆ ಅವನ ಗಾದಿ I ಚಿರ ಶಾಶ್ವತವಾಗಿರುವುದು ಅವನ ಸಂತತಿ II


ಉಳಿಸುವೆನು ಅವನ ಸಂತಾನವನು ನಿರಂತರವಾಗಿ I ಅವನ ಸಿಂಹಾಸನವಿರುವುದು ಗಗನದಂತೆ ಸ್ಥಿರವಾಗಿ II


ಪ್ರಭು, ಕೀರ್ತಿಸುವೆನು ಸದಾ ನಿನ್ನಚಲ ಪ್ರೀತಿಯನು I ಸಾರುವೆನು ತಲತಲಾಂತರಕು ನಿನ್ನ ಸತ್ಯತೆಯನು II


ಶಾಶ್ವತವಾಗಲಿ ಶ್ರೀನಾಮ ಆತನಿಗೆ I ಬೆಳಗಲಿ ಆತನ ಕೀರ್ತಿ ಸೂರ್ಯನಿರುವವರೆಗೆ I ಆತನಾಶೀರ್ವಾದ ಕೋರಲಿ ಸರ್ವರು ತಮಗೆ I ಶುಭವೆನ್ನಲಿ ಸಕಲ ರಾಷ್ಟ್ರಗಳು ಆತನಿಗೆ II


ನಿಮ್ಮ ದಾಸನ ಮನೆತನವನ್ನು ಆಶೀರ್ವದಿಸಿರಿ; ಸದಾಕಾಲ ನಿಮ್ಮ ಅನುಗ್ರಹ ಅದರ ಮೇಲಿರಲಿ. ಸರ್ವೇಶ್ವರಾ, ಸರ್ವೇಶ್ವರಾ, ವಾಗ್ದಾನ ಮಾಡಿದವರು ತಾವೇ. ತಮ್ಮ ಆಶೀರ್ವಾದದಿಂದ ತಮ್ಮ ದಾಸನಾದ ನನ್ನ ಮನೆತನದಲ್ಲಿ ನಿತ್ಯ ಸೌಭಾಗ್ಯ ನೆಲಸಿರಲಿ!” ಎಂದನು.


“ಇಸ್ರಯೇಲ್ ದೇವರಾದ ಸರ್ವೇಶ್ವರ ನನ್ನ ತಂದೆಯ ಮನೆಯವರೆಲ್ಲರಲ್ಲಿ ನನ್ನನ್ನೇ ಸದಾ ಇಸ್ರಯೇಲರ ಅರಸನಾಗಿರುವುದಕ್ಕೆ ಆರಿಸಿಕೊಂಡರು; ಯೆಹೂದಕುಲ ರಾಜಕುಲವಾಗಬೇಕೆಂದು ನೇಮಿಸಿ ಆ ಕುಲದಲ್ಲಿ ನನ್ನ ತಂದೆಯ ಕುಟುಂಬವನ್ನು ಆರಿಸಿಕೊಂಡರು. ನನ್ನ ತಂದೆಯ ಎಲ್ಲ ಮಕ್ಕಳಲ್ಲಿ ನನ್ನನ್ನೇ ಮೆಚ್ಚಿ, ಇಸ್ರಯೇಲರೆಲ್ಲರ ಅರಸನನ್ನಾಗಿ ಮಾಡಿದರು.


ನೆನೆಸಿಕೊ ಪ್ರಭು, ನಿನ್ನ ಅಪಮಾನಿತ ಸೇವಕನನು I ಸ್ಮರಿಸಿಕೊ ಆತ ಹೊತ್ತಿರುವ ಪರರ ನಿಂದೆಯನು II


ದಾವೀದನಿಗೆ ಪ್ರಭು ಆಣೆಯಿಟ್ಟು ಇಂತೆಂದ: I ಆಣೆಯಿಟ್ಟು ಕೊಟ್ಟಾ ಮಾತಿಗೆ ತಪ್ಪಲಾರನಾತ: I “ನಿನ್ನ ಸಿಂಹಾಸನದಲಿ ಕೂರಿಸುವೆನು ನಿನ್ನ ತನುಜನೊಬ್ಬನನು” II


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು