Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:40 - ಕನ್ನಡ ಸತ್ಯವೇದವು C.L. Bible (BSI)

40 ಸೀಳಿಬಿಟ್ಟಿರುವೆ ಅವನಾ ಪೌಳಿಗೋಡೆಗಳನು I ಹಾಳುಮಾಡಿಬಿಟ್ಟಿರುವೆ ಕೋಟೆಕೊತ್ತಲಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಅವನ ದೇಶದ ಮೇರೆಗಳನ್ನು ಕೆಡವಿ, ಕೋಟೆಗಳನ್ನು ಹಾಳುಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಅವನ ದೇಶದ ಮೇರೆಗಳನ್ನು ಕೆಡವಿ ದುರ್ಗಗಳನ್ನು ಹಾಳುಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಅವನ ಪಟ್ಟಣದ ಗೋಡೆಗಳನ್ನು ಕೆಡವಿಹಾಕಿದೆ; ಅವನ ರಕ್ಷಣಾದುರ್ಗಗಳನ್ನೆಲ್ಲಾ ನಾಶಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಅವನ ಗೋಡೆಗಳನ್ನೆಲ್ಲಾ ಮುರಿದು, ಅವನ ಕೋಟೆಗಳನ್ನು ಹಾಳುಮಾಡಲು ಅನುಮತಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:40
10 ತಿಳಿವುಗಳ ಹೋಲಿಕೆ  

ಕಿತ್ತುಹಾಕಿದೆಯೇಕೆ ಅದರ ಬೇಲಿಯನು? I ತರಿದುಬಿಡುವವರಲ್ಲವೆ ದಾರಿಗರು ಅದನು? II


ಸ್ವಾಮಿ ಯಕೋಬಿನ ನಿವಾಸಿಗಳನ್ನು ನಾಶಪಡಿಸಿಹನು, ರೌದ್ರದಿಂದ ಯೆಹೂದ ಕೋಟೆಗಳನ್ನು ನೆಲಸಮವಾಗಿಸಿಹನು, ರಾಜ್ಯವನ್ನೂ ಅದರ ಪಾಲಕರನ್ನೂ ನೀಚಸ್ಥಿತಿಗೆ ಇಳಿಸಿಹನು.


ಸ್ವಾಮಿಯೇ ಶತ್ರುವಾಗಿ ಕಬಳಿಸಿದ ಇಸ್ರಯೇಲನ್ನು ನಾಶಮಾಡಿದ ಅದರ ಅರಮನೆಗಳೆಲ್ಲವನ್ನು ನೆಲಸಮಗೊಳಿಸಿದ ಅದರ ಕೋಟೆಕೊತ್ತಲಗಳನ್ನು ಯಥೇಚ್ಛವಾಗಿಸಿದ ಯೆಹೂದ ನಾಡಿನ ಗೋಳಾಟವನ್ನು.


ನೀವು ಆತನಿಗೂ ಆತನ ಎಲ್ಲ ಆಸ್ತಿಪಾಸ್ತಿಗೂ ಬೇಲಿ ಹಾಕಿ ಭದ್ರಪಡಿಸಿದ್ದೀರಲ್ಲವೇ? ಆತನು ಕೈ ಹಾಕಿದ ಕೆಲಸ ಸಫಲವಾಗುವಂತೆ ಮಾಡಿದ್ದೀರಲ್ಲವೆ? ಎಂದೇ ಆತನ ಸಿರಿಸಂಪತ್ತು ಈ ನಾಡಿನಲ್ಲಿ ಬೆಳೆಯುತ್ತಾ ಬಂದಿದೆ.


ಆ ಕಾಲದಲ್ಲಿ ಯಾರಿಗೂ ನಿರ್ಭಯವಾಗಿ ತಿರುಗಾಡುವುದಕ್ಕೆ ಆಗುತ್ತಾ ಇರಲಿಲ್ಲ. ನಾಡಿನ ನಿವಾಸಿಗಳೆಲ್ಲರೂ ಕಳವಳಗೊಂಡಿದ್ದರು.


ನನ್ನ ಘನತೆಯನ್ನು ಸುಲಿದುಬಿಟ್ಟಿದ್ದಾನೆ ನನ್ನ ಕಿರೀಟವನ್ನು ಕಿತ್ತುಹಾಕಿದ್ದಾನೆ.


ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ, ರೋಷಾಗ್ನಿಯನ್ನು ಕಾರಿ, ಕ್ರೂರಿಗಳನ್ನು ಹಾಳುಮಾಡುವುದರಲ್ಲಿ ಗಟ್ಟಿಗರಾದವರ ಕೈಗೆ ಸಿಕ್ಕಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು