Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:45 - ಕನ್ನಡ ಸತ್ಯವೇದವು C.L. Bible (BSI)

45 ಮುಪ್ಪಾಗಿಸಿರುವೆ ಅವನನು ಕಾಲಕ್ಕೆ ಮುಂಚೆ I ನಿನ್ನ ನಿಮಿತ್ತ ಅವನನು ಆವರಿಸಿದೆ ಲಜ್ಜೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಅವನ ಯೌವನದ ದಿನಗಳನ್ನು ಬೇಗ ಮುಗಿಸಿ, ನಾಚಿಕೆಯು ಅವನನ್ನು ಕವಿಯುವಂತೆ ಮಾಡಿದ್ದಿ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಅವನ ಯೌವನವನ್ನು ಬೇಗ ಮುಗಿಸಿ ನಾಚಿಕೆಯು ಅವನನ್ನು ಕವಿಯುವಂತೆ ಮಾಡಿದ್ದೀ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ನೀನು ಅವನ ಜೀವಿತವನ್ನು ಮೊಟಕುಗೊಳಿಸಿ ಅವನಿಗೆ ಅವಮಾನ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಅವನ ಯೌವನದ ದಿವಸಗಳು ಕಡಿಮೆಯಾಗಿದೆ. ನಾಚಿಕೆ ಎಂಬ ವಸ್ತ್ರ ಅವನನ್ನು ಮುಚ್ಚಲು ನೀವು ಅನುಮತಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:45
9 ತಿಳಿವುಗಳ ಹೋಲಿಕೆ  

ಮಾನಭಂಗವಾಗಲಿ ನನ್ನಾ ನಿಂದಕರಿಗೆ I ಬಟ್ಟೆಯಂತೆ ಅವರಿಗಂಟಿಕೊಳ್ಳಲಿ ಹೇಸಿಗೆ II


ನನ್ನ ಕಣ್ಮುಂದಿದೆ ಈ ಅವಮಾನ ದಿನವೆಲ್ಲ I ಲಜ್ಜೆಯಿಂದ ನಾ ಮುಖ ಮುಚ್ಚಿಕೊಳ್ಳುವಂತಾಗಿದೆಯಲ್ಲಾ II


ಇದನ್ನು ನನ್ನ ಶತ್ರುಗಳು ನೋಡುವರು. “ನಿನ್ನ ದೇವರಾದ ಸರ್ವೇಶ್ವರನೆಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.


ನಡುಹಾದಿಯಲೆ ಕುಂದಿಸಿಹನು ಪ್ರಭು ನನ್ನ ಬಲವನು I ಕಡಿಮೆಮಾಡಿಬಿಟ್ಟಿಹನು ಆತ ನನ್ನ ಆಯುಷ್ಯವನು II


ನಿಮ್ಮ ಸ್ವಕೀಯ ಜನರು ಸ್ವಲ್ಪಕಾಲ ಮಾತ್ರ ಅನುಭವಿಸಿದಾ ನಿಮ್ಮ ಪವಿತ್ರ ಗರ್ಭಗುಡಿಯನ್ನು ನಮ್ಮ ವೈರಿಗಳು ತುಳಿದು ಹಾಳುಮಾಡಿದರಲ್ಲಾ !


ಆಶಾಭಂಗವು ದಹಿಸಿಬಿಡಲಿ ನನ್ನ ಪ್ರಾಣ ಕಂಟಕರನು I ನಿಂದಾಪಮಾನ ಕವಿದುಬಿಡಲಿ ನನಗೆ ಕೇಡು ಬಗೆವವರನು II


ಇಸ್ರಯೇಲರು ಅಂದಿನಿಂದ ಇಂದಿನವರೆಗೂ ದಾವೀದನ ಕುಟುಂಬದವರೊಡನೆ ಸಮಾಧಾನವಾಗಲೇ ಇಲ್ಲ.


ಅಯ್ಯಯ್ಯೋ, ಸ್ವಾಮಿಯೆ ಸಿಟ್ಟುಗೊಂಡಿರುವನಲ್ಲಾ ! ಸಿಯೋನ್ ಕುವರಿಗೆ ಕಾರ್ಮೋಡ ಕವಿದಂತೆ ಮಾಡಿರುವನಲ್ಲಾ ! ಇಸ್ರಯೇಲಿನ ವೈಭವವನ್ನು ಆಗಸದಿಂದ ನೆಲಕ್ಕೆಸೆದುಬಿಟ್ಟಿರುವನಲ್ಲಾ ! ಆ ಸಿಟ್ಟಿನ ದಿನದಂದು ತನ್ನ ಪಾದಪೀಠವಾದ ದೇವಾಲಯವನ್ನೂ ನೆನೆಯದೆಹೋದನಲ್ಲಾ !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು