Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:47 - ಕನ್ನಡ ಸತ್ಯವೇದವು C.L. Bible (BSI)

47 ಎಷ್ಟು ಅಲ್ಪವಾದುದೆನ್ನ ಜೀವಮಾನಕಾಲ I ಎಷ್ಟು ನಶ್ವರ ನೀ ನಿರ್ಮಿಸಿದ ಮಾನವ ಕುಲ! II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ನನ್ನ ಆಯುಷ್ಯವು ಎಷ್ಟು ಅಲ್ಪವೆಂದೂ, ಎಂಥಾ ವ್ಯರ್ಥ ಜೀವಿತಕ್ಕಾಗಿ ಮನುಷ್ಯರನ್ನು ನಿರ್ಮಿಸಿದ್ದಿ ಎಂದೂ ಜ್ಞಾಪಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ನನ್ನ ಆಯುಷ್ಯವು ಎಷ್ಟು ಅಲ್ಪವೆಂದೂ ಎಂಥಾ ವ್ಯರ್ಥಕ್ಕಾಗಿಯೇ ಮನುಷ್ಯರನ್ನು ನಿರ್ಮಿಸಿದ್ದೀ ಎಂದೂ ಜ್ಞಾಪಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ನಮ್ಮ ಜೀವಿತಕಾಲ ಸ್ವಲ್ಪವೆಂಬುದನ್ನು ಜ್ಞಾಪಿಸಿಕೊ. ನಾವು ಸ್ವಲ್ಪಕಾಲ ಬದುಕಿ ಸಾಯುವುದಕ್ಕಾಗಿಯೇ ನೀನು ನಮ್ಮನ್ನು ಸೃಷ್ಟಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ನನ್ನ ಆಯುಸ್ಸು ಎಷ್ಟು ಕಡಿಮೆ ಎಂದು ಜ್ಞಾಪಕಮಾಡಿಕೊಳ್ಳಿರಿ. ನಿರ್ಮಿಸಿದ ಎಲ್ಲಾ ಮನುಷ್ಯರೂ ವ್ಯರ್ಥವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:47
9 ತಿಳಿವುಗಳ ಹೋಲಿಕೆ  

“ಹೆಣ್ಣಿನಿಂದ ಹುಟ್ಟಿದ ಮನುಷ್ಯನು ಅಲ್ಪಾಯುಷ್ಯನು, ದುಃಖಭರಿತನು.


ಜೇಡಿಮಣ್ಣಿನಿಂದ ನನ್ನನ್ನು ಮಾಡಿದೆಯೆಂದು ನೆನೆಸಿಕೊ ಆದರೆ ಈಗ ಮರಳಿ ಮಣ್ಣಾಗುವಂತೆ ಮಾಡುವಿಯೋ?


ನೆನೆಸಿಕೊಳ್ಳೋ ದೇವಾ, ನನ್ನ ಜೀವ ಕೇವಲ ಉಸಿರು ನನ್ನ ಕಣ್ಣುಗಳು ಇನ್ನು ಕಾಣವು ನಲಿವು.


ನಿಮ್ಮ ಜೀವಮಾನ ಎಷ್ಟುಮಾತ್ರದ್ದು? ಈಗ ಕಾಣಿಸಿಕೊಂಡು ಆಮೇಲೆ ಕಾಣದೆಹೋಗುವ ಹೊಗೆಯಂತೆ ಅದು.


ಮಾನವನು ಕೇವಲ ಉಸಿರಿಗೆ ಸಮಾನ I ಮರೆಯಾಗುವ ನೆರಳು ಅವನ ಜೀವನ II


ನಿನ್ನ ದಾಸ ನಾನೆಷ್ಟು ದಿನ ಕಾದಿರಬೇಕಯ್ಯಾ I ನನ್ನ ಹಿಂಸಕರಿಗೆಂದು ಶಿಕ್ಷೆ ವಿಧಿಸುವೆಯಯ್ಯಾ? II


ನಿನ್ನ ಕೋಪತಾಪ ಹೇ ಪ್ರಭೂ, ಇನ್ನೆಷ್ಟರವರೆಗೆ? I ಉರಿಯುತ್ತಿರಬೇಕೆ ಸದಾ ನಿನ್ನ ರೋಷಾಗ್ನಿಯ ಧಗೆ? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು