Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:48 - ಕನ್ನಡ ಸತ್ಯವೇದವು C.L. Bible (BSI)

48 ಸಾಯದೆಯೇ ಜೀವಿಸಬಲ್ಲ ನರನಾರು? I ಆ ತಳದಿಂದ ತಪ್ಪಿಸಿಕೊಳ್ಳುವವನಾರು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ತಮ್ಮನ್ನು ಪಾತಾಳಕ್ಕೆ ತಪ್ಪಿಸಿಕೊಂಡು, ಮರಣಹೊಂದದೆ ಚಿರಂಜೀವಿಯಾಗಿರುವವರು ಯಾರು? ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ತನ್ನನ್ನು ಪಾತಾಳಕ್ಕೆ ತಪ್ಪಿಸಿಕೊಂಡು ಮರಣಹೊಂದದೆ ಚಿರಂಜೀವಿಯಾಗಿರುವ ಮನುಷ್ಯನು ಯಾವನಿದ್ದಾನೆ? ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಮರಣ ಹೊಂದದೆ ಚಿರಂಜೀವಿಯಾಗಿರುವವನು ಯಾರೂ ಇಲ್ಲ. ಯಾವ ವ್ಯಕ್ತಿಯೂ ಸಮಾಧಿಯಿಂದ ತಪ್ಪಿಸಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಮರಣವನ್ನು ಕಾಣದೆ ಬದುಕುವಂಥವರು ಯಾರು? ಸಮಾಧಿಯ ಶಕ್ತಿಯಿಂದ ಪ್ರಾಣವನ್ನು ತಪ್ಪಿಸಿಕೊಳ್ಳುವಂಥವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:48
15 ತಿಳಿವುಗಳ ಹೋಲಿಕೆ  

ನನ್ನನ್ನಾದರೊ ಸ್ವಾಗತಿಸುವನು ದೇವನು I ಪಾತಾಳದ ಹಿಡಿತದಿಂದ ಬಿಡಿಸುವನು II


ವಿಶ್ವಾಸವಿದ್ದುದರಿಂದಲೇ ಹನೋಕನು ಮೃತ್ಯುವಿಗೆ ತುತ್ತಾಗದಂತೆ ದೇವರ ಬಳಿಗೆ ಒಯ್ಯಲ್ಪಟ್ಟನು. ದೇವರು ಆತನನ್ನು ಕರೆದುಕೊಂಡಿದ್ದರಿಂದ ಆತನು ಯಾರಿಗೂ ಕಾಣಸಿಗಲಿಲ್ಲ. ಆತನು ಹೀಗೆ ಒಯ್ಯಲ್ಪಡುವುದಕ್ಕೆ ಮುಂಚೆ ದೇವರಿಗೆ ಮೆಚ್ಚುಗೆಯಾಗಿದ್ದನು ಎಂಬುದಕ್ಕೆ ಸಾಕ್ಷ್ಯಾಧಾರವಿದೆ.


ಮಣ್ಣಿನ ದೇಹ ತನ್ನ ಭೂಮಿಗೆ ಸೇರಿಹೋಗುವುದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. (ಇಷ್ಟರೊಳಗೆ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ).


ಜೀವಿತರಿಗೆ ಖಂಡಿತವಾಗಿ ಸಾಯುತ್ತೇವೆಂಬ ತಿಳುವಳಿಕೆಯಾದರೂ ಉಂಟು. ಸತ್ತವರಿಗಾದರೋ ಯಾವ ತಿಳುವಳಿಕೆಯೂ ಇಲ್ಲ; ಅವರಿಗೆ ಇನ್ನು ಮೇಲೆ ಯಾವ ಪ್ರತಿಫಲವೂ ಇಲ್ಲ; ಅವರ ಹೆಸರನ್ನೂ ಜನರು ಮರೆತುಬಿಡುತ್ತಾರೆ.


ನನ್ನ ಮಾತಿಗೆ ಶರಣಾಗಿ ನಡೆಯುವವನು ನಿತ್ಯಮರಣಕ್ಕೆ ತುತ್ತಾಗನು, ಎಂದು ಸತ್ಯವಾಗಿ ನಿಮಗೆ ಹೇಳುತ್ತೇನೆ,” ಎಂದರು.


ಆತ್ಮವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಹಾಗೆಯೇ ತಮ್ಮ ಮರಣ ದಿನವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಸಾವೆಂಬ ಸಮರಕ್ಕೆ ವಿರಾಮವಿಲ್ಲ; ಅಂತೆಯೇ ದುಷ್ಟತನದ ಮೂಲಕ ಅದರಿಂದ ತಪ್ಪಿಸಿಕೊಳ್ಳಲಾಗದು.


ನನ್ನನು ಮರಣಕ್ಕೆ ಗುರಿಮಾಡುವೆಯೆಂದು ತಿಳಿದಿದೆ ಸಮಸ್ತಜೀವಿಗಳು ತೆರಳುವ ಮಂದಿರಕ್ಕೆ ಸೇರಿಸುವೆಯೆಂದು ಗೊತ್ತೇ ಇದೆ.


ಏಕೆನೆ, ದೂಡಲಾರೆ ಪಾತಾಳಕೆ ನೀನೆನ್ನ ಜೀವಾತ್ಮವನು, ಕೊಳೆಯಬಿಡಲಾರೆ ನೀನೊಲಿದಾತನನು.


ತಲೆಬಾಗುವರಾತನಿಗೆ ಧರೆಯ ಗರ್ವಿಗಳೆಲ್ಲರು I ಅಡ್ಡಬೀಳುವರವನಿಗೆ ಮರ್ತ್ಯಮಾನವರೆಲ್ಲರು II


ಪ್ರತಿಯೊಬ್ಬ ಮಾನವನು ಸಾಯುವುದು ಒಂದೇ ಸಾರಿ. ಅನಂತರ ಅವನು ನ್ಯಾಯತೀರ್ಪಿಗೆ ಗುರಿಯಾಗಬೇಕು.


ಪ್ರಭು ಯೇಸುವನ್ನು ಪುನರುತ್ಥಾನಗೊಳಿಸಿದ ದೇವರು ನಮ್ಮನ್ನು ಯೇಸುಕ್ರಿಸ್ತರೊಡನೆ ಪುನರುತ್ಥಾನಗೊಳಿಸಿ ತಮ್ಮ ಸಾನ್ನಿಧ್ಯಕ್ಕೆ ಬರಮಾಡಿಕೊಳ್ಳುವರು ಎಂಬುದನ್ನು ನಾವು ಬಲ್ಲೆವು. ಅಂತೆಯೇ ನಿಮ್ಮನ್ನೂ ಬರಮಾಡಿಕೊಳ್ಳುವರು.


ನರಮಾನವನು ಮೆರೆದಾಡುವನು ಮಾಯೆಯಂತೆ I ಅವನ ಸಡಗರವೆಲ್ಲವೂ ನಿರರ್ಥಕದಂತೆ I ಕೂಡಿಪನಾತ ಸಿರಿ ಅದು ಯಾರದಾಗುವುದೆಂದು ಅರಿಯದೆ II


ನಿನ್ನ ದಾಸ ನಾನೆಷ್ಟು ದಿನ ಕಾದಿರಬೇಕಯ್ಯಾ I ನನ್ನ ಹಿಂಸಕರಿಗೆಂದು ಶಿಕ್ಷೆ ವಿಧಿಸುವೆಯಯ್ಯಾ? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು