Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:5 - ಕನ್ನಡ ಸತ್ಯವೇದವು C.L. Bible (BSI)

5 ಪ್ರಸಿದ್ಧಪಡಿಸುವುದು ಪ್ರಭು, ಗಗನವು ನಿನ್ನ ಮಹತ್ತನು I ಸಂಕೀರ್ತಿಸುವುದು ಸ್ವರ್ಗೀಯ ಸಭೆ, ನಿನ್ನ ಸತ್ಯತೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನೇ, ಗಗನವು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವುದು; ನಿನ್ನ ಸತ್ಯವನ್ನು ಪರಿಶುದ್ಧರ ಸಭೆಯಲ್ಲಿ ಕೀರ್ತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನೇ, ಗಗನವು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವದು; ನಿನ್ನ ಸತ್ಯತೆಯನ್ನು ಪರಿಶುದ್ಧರ ಸಭೆಯಲ್ಲಿ ಕೀರ್ತಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನೇ, ನಿನ್ನ ಮಹತ್ಕಾರ್ಯಗಳ ಕುರಿತು ಆಕಾಶಮಂಡಲವು ಸ್ತುತಿಸುತ್ತಿದೆ. ಪರಿಶುದ್ಧರ ಸಭೆಯು ಅವುಗಳ ಕುರಿತು ಹಾಡಿಕೊಂಡಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರೇ, ಆಕಾಶಗಳು ನಿಮ್ಮ ಅದ್ಭುತಗಳನ್ನೂ ಪರಿಶುದ್ಧರ ಸಭೆಯಲ್ಲಿ ನಿಮ್ಮ ನಂಬಿಗಸ್ತಿಕೆಯನ್ನೂ ಕೊಂಡಾಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:5
24 ತಿಳಿವುಗಳ ಹೋಲಿಕೆ  

ಘೋಷಿಸುತ್ತದೆ ಗಗನಮಂಡಲ ಆತನ ನೀತಿಯನು I ಕಾಣುತ್ತವೆ ಸಕಲ ಜನಾಂಗ ಆತನ ಮಹಿಮೆಯನು II


ಆಕಾಶಮಂಡಲ ಸಾರುತಿದೆ ದೇವರ ಮಹಿಮೆಯನು I ತಾರಾಮಂಡಲ ತೋರುತಿದೆ ದೇವರ ಕೈಕೃತಿಗಳನು II


ಜಯ ಜಯಕಾರ ಮಾಡು ಓ ಆಕಾಶವೇ, ಜಯಘೋಷ ಮಾಡು ಭೂ ತಳವೇ, ಹರ್ಷಧ್ವನಿಗೈಯಿರಿ ಬೆಟ್ಟಗುಡ್ಡಗಳೇ ವನವೃಕ್ಷಗಳೇ. ವಿಮೋಚಿಸಿದನು ಸರ್ವೇಶ್ವರ ಯಕೋಬನನು, ಇಸ್ರಯೇಲನ್ನು ರಕ್ಷಿಸಿ ಪ್ರಚಾರಗೊಳಿಸಿದನು ತನ್ನ ಮಹಿಮೆಯನು.


ದೇವನೇ ಸತ್ಯಸ್ವರೂಪಿ, ನ್ಯಾಯಾಧಿಪತಿ I ಇದನು ಸಾರಿ ಹೇಳಲಿ ಆಕಾಶ ಪ್ರಕೃತಿ II


ಈ ಸೇವಾಕಾರ್ಯವನ್ನು ಅವರು ಸ್ವಾರ್ಥಸಾಧನೆಗಾಗಿ ಅಲ್ಲ, ನಿಮಗೋಸ್ಕರವಾಗಿಯೇ ಮಾಡುತ್ತಿರುವುದಾಗಿ ಅವರಿಗೆ ತಿಳಿಸಲಾಗಿತ್ತು. ಅವರು ಪ್ರವಾದಿಸಿದ ಘಟನೆಗಳು ಈಗ ಸಂಭವಿಸಿವೆ ಎಂಬುದನ್ನು ಸ್ವರ್ಗದಿಂದ ಕಳುಹಿಸಲಾದ ಪವಿತ್ರಾತ್ಮರ ಶಕ್ತಿಯಿಂದ, ಶುಭಸಂದೇಶವನ್ನು ಸಾರಿದವರ ಮುಖಾಂತರ ನಿಮಗೆ ಪ್ರಕಟಿಸಲಾಗಿದೆ. ದೇವದೂತರು ಸಹ ವೀಕ್ಷಿಸಲು ಅಪೇಕ್ಷಿಸುವಂಥ ಸಂಗತಿಗಳಿವು.


ಪ್ರಭು ಯೇಸು ತಮ್ಮ ಪ್ರಭಾವಯುತ ದೂತರೊಂದಿಗೆ ಸ್ವರ್ಗದಿಂದ ಪ್ರತ್ಯಕ್ಷರಾಗುವಾಗ, ಬೆಂಕಿಯ ಜ್ವಾಲೆಗಳು ಕಂಡುಬರುವುವು; ದೇವರನ್ನು ಅರಿತು ಅಲ್ಲಗಳೆದವರಿಗೂ ನಮ್ಮ ಪ್ರಭು ಯೇಸುವಿನ ಶುಭಸಂದೇಶಕ್ಕೆ ಅವಿಧೇಯರಾಗಿ ವರ್ತಿಸಿದವರಿಗೂ ತಕ್ಕ ಪ್ರತೀಕಾರವಾಗುವುದು.


ಹೀಗೆ ಧರ್ಮಸಭೆಯ ಮೂಲಕ ದೇವರ ಬಹುರೂಪದ ಜ್ಞಾನವು ಅಶರೀರ ಶಕ್ತಿಗಳ ಅಧಿಕಾರಿಗಳಿಗೂ ಅಧಿಪತಿಗಳಿಗೂ ಈಗಿನ ಕಾಲದಲ್ಲಿ ತಿಳಿಯಬೇಕೆಂಬುದೇ ಅವರ ಉದ್ದೇಶವಾಗಿತ್ತು.


ಆ ಸಿಂಹಾಸನದ ಸಮ್ಮುಖದಿಂದ ಪ್ರಜ್ವಲ ಪ್ರವಾಹವೊಂದು ಉಕ್ಕಿ ಹರಿದುಬಂದಿತು. ಲಕ್ಷೋಪಲಕ್ಷ ದೂತರು ಆತನಿಗೆ ಸೇವೆಸಲ್ಲಿಸುತ್ತಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ತೀರ್ಪುನೀಡಲು ಕುಳಿತುಕೊಂಡರು. ಪಟ್ಟಿಪುಸ್ತಕಗಳನ್ನು ತೆರೆಯಲಾಯಿತು.


ಸ್ವರ್ಗೀಯ ಸಭೆಯಲಿ ಪ್ರತಿಭಾವಂತನು ದೇವನು II ಸುತ್ತಣದೆಲ್ಲ ಪರಿವಾರಕ್ಕಿಂತ ಬಹು ಭೀಕರನು II


“ಕೂಗಿ ನೋಡು, ಯಾರಿದ್ದಾರೆ ಉತ್ತರಕೊಡುವವರು ನಿನಗೆ? ಈಗ ಯಾರ ಕಡೆಗೆ, ಯಾವ ದೇವದೂತರ ಕಡೆಗೆ ತಿರುಗುವೆ?


ಸರ್ವೇಶ್ವರ ಸೀನಾಯ್ ಬೆಟ್ಟದಿಂದ ಬಂದರು, ಸೇಯೀರ್ ಎಂಬ ಸೀಮೆಯೊಳಗಿಂದ ಉದಯಿಸಿದರು, ಪಾರಾನ್ ಎಂಬ ಪರ್ವತದಿಂದ ಪ್ರಜ್ವಲಿಸಿದರು, ಲಕ್ಷಾಂತರ ಸಂತರ ಮಧ್ಯೆಯಿಂದ ದಯಮಾಡಿದರು. ಅಗ್ನಿಸದೃಶವಾದ ಧರ್ಮಶಾಸ್ತ್ರ ಅವರ ಬಲಪಾರ್ಶ್ವದಲ್ಲಿತ್ತು.


ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ನನಗಾಗಿ ಒಂದು ದೇವಾಲಯವನ್ನು ಕಟ್ಟುವವನು ಅವನೇ. ನಾನು ಅವನ ಸಿಂಹಾಸನವನ್ನು ಸ್ಥಿರಪಡಿಸುವೆನು.


ಸಲ್ಲಿಸುವೆನಾಗ ದಿನಬಿಡದೆ ನಿನಗೆ ಹರಕೆಗಳನು I ಸಂಕೀರ್ತಿಸುವೆನು ಸದಾ ನಿನ್ನ ಶ್ರೀನಾಮವನು II


ಅವನ ಕುವರರು ತೊರೆದರಾದರೆ ನನ್ನ ಧರ್ಮಶಾಸ್ತ್ರವನು I ಉಲ್ಲಂಘಿಸಿ ನಡೆದರಾದರೆ ನನ್ನ ಆಜ್ಞಾವಿಧಿಗಳನು II


ಅಮರವಾಗಿರುವುದು ಚಂದ್ರನಂತೆ I ಆಗಸದಾ ಪ್ರಮಾಣ ಸಾಕ್ಷಿಯಂತೆ” II


ದಾವೀದನಿಗೆ ಪ್ರಭು ಆಣೆಯಿಟ್ಟು ಇಂತೆಂದ: I ಆಣೆಯಿಟ್ಟು ಕೊಟ್ಟಾ ಮಾತಿಗೆ ತಪ್ಪಲಾರನಾತ: I “ನಿನ್ನ ಸಿಂಹಾಸನದಲಿ ಕೂರಿಸುವೆನು ನಿನ್ನ ತನುಜನೊಬ್ಬನನು” II


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು