Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 9:1 - ಕನ್ನಡ ಸತ್ಯವೇದವು C.L. Bible (BSI)

1 ಮನಃಪೂರ್ವಕವಾಗಿ ಪ್ರಭು, ನಿನ್ನ ಕೊಂಡಾಡುವೆನು I ನಿನ್ನದ್ಭುತಕಾರ್ಯಗಳೆಲ್ಲವನು ನಾ ವರ್ಣಿಸುವೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ಪೂರ್ಣಹೃದಯದಿಂದ ನಿನ್ನನ್ನು ಕೊಂಡಾಡುವೆನು. ನಿನ್ನ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನನ್ನ ಪೂರ್ಣಹೃದಯದಿಂದ ನಾನು ನಿಮ್ಮನ್ನು ಸ್ತುತಿಸುವೆನು; ನಿಮ್ಮ ಅದ್ಭುತ ಕಾರ್ಯಗಳನ್ನೆಲ್ಲಾ ನಾನು ವರ್ಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 9:1
22 ತಿಳಿವುಗಳ ಹೋಲಿಕೆ  

ಮಾಡುವೆ ದೇವಾ, ನಿನ್ನ ಗುಣಗಾನವನು ಶ್ರದ್ಧೆಯಿಂದ I ಘನಪಡಿಸುವೆ ಸ್ವಾಮಿ, ನಿನ್ನ ಶ್ರೀನಾಮವನು ಅನವರತ II


ಪ್ರಸಿದ್ಧಪಡಿಸಿರಿ ಆತನ ಘನತೆಯನು ರಾಷ್ಟ್ರಗಳಿಗೆ I ಆತನದ್ಭುತ ಕಾರ್ಯಗಳನು ಸಕಲ ಜನಾಂಗಗಳಿಗೆ II


ಅಲ್ಲೆಲೂಯI ಸಜ್ಜನರ ಸಂಘದೊಳು, ಸಭಾಸದಸ್ಯರೊಳು ಕೂಡಿ I ಹೊಗಳುವೆ ಪ್ರಭುವನು ಮನಃಪೂರ್ವಕವಾಗಿ ಹಾಡಿ II


ದನಿಯೆತ್ತಿ ನಿನಗೆ ಧನ್ಯಗೀತೆ ಹಾಡುವೆನಯ್ಯಾ I ನಿನ್ನದ್ಭುತ ಕಾರ್ಯಗಳೆಲ್ಲವನು ಘೋಷಿಸುವೆನಯ್ಯಾ II


ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ.


ನಾ ಸೃಷ್ಟಿಸಿದ ಆಪ್ತ ಜನಕೆ ನೀಡುವೆನು ಜಲಪಾನವನು; ಎಂದೇ ಸ್ತುತಿಸಿಕೊಂಡಾಡುವರು ನನ್ನನು.”


ಸತ್ಯಸ್ವರೂಪನಾದ ಸ್ವಾಮಿಗೆ ನನ್ನ ವಂದನೆ I ಪರಾತ್ಪರ ಪ್ರಭುವಿನ ನಾಮಕ್ಕೆ ಸ್ತುತಿಸಂಕೀರ್ತನೆ II


ಆತನ ದಾಸ ಇಸ್ರಯೇಲನ ಸಂತತಿಯವರೇ I ಆತನಾರಿಸಿಕೊಂಡ ಯಕೋಬನ ವಂಶದವರೇ II


ಹೃದಯಪೂರ್ವಕ ವಂದನೆ ಪ್ರಭು ನಿನಗೆ I ದೇವರುಗಳೆದುರಿಗೆ ನನ್ನ ಕೀರ್ತನೆ ನಿನಗೆ II


ತೆರೆವಂತೆ ಮಾಡು ಪ್ರಭು ನನ್ನ ತುಟಿಗಳನು I ಸಾರುವುದೆನ್ನ ಬಾಯಿ ನಿನ್ನ ನುಡಿಗಳನು II


ಅವನು, “ ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಆತ್ಮದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು ಮತ್ತು ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು’ ಎಂದಿದೆ,” ಎಂದು ಉತ್ತರಕೊಟ್ಟನು.


ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.


ಆ ದಿನದಂದು ಹಾಡುವುದು ಜನತೆ ಹೀಗೆಂದು : “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ.


ತುಂಬಿರುವುವು ನಿನ್ನೊಳು ಒಂಟೆಗಳ ಗುಂಪುಗಳು ಮಿದ್ಯಾನಿನ, ಏಫದ ಪ್ರಾಯದ ಒಂಟೆಗಳು. ಬರುವರೆಲ್ಲರು ಶೆಬದಿಂದ, ತರುವರು ಬಂಗಾರ, ಧೂಪಗಳನು ಸಾರುವರೆಲ್ಲರು ಸರ್ವೇಶ್ವರನ ಸ್ತುತ್ಯಕಾರ್ಯಗಳನು.


ವರ್ಣಿಸಬಲ್ಲವನಾರು ಆತನ ಮಹತ್ಕಾರ್ಯಗಳನು? I ಯೋಗ್ಯರೀತಿಯಲಿ ಹೊಗಳಬಲ್ಲವರಾರು ಆತನನು? II


ಆಗ ಸಿಯೋನ್ ನಗರಿಯ ದ್ವಾರದಲೆ ನಿಲ್ಲುವೆನು I ನಿನ್ನ ಗುಣಾತಿಶಯಗಳನು ಪ್ರಸಿದ್ಧಪಡಿಸುವೆನು I ನೀನಿತ್ತ ಮುಕ್ತಿಗಾಗಿ ಆನಂದಗೊಳ್ಳುವೆನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು