Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 9:12 - ಕನ್ನಡ ಸತ್ಯವೇದವು C.L. Bible (BSI)

12 ರಕ್ತಪಾತ ಲೆಕ್ಕಿಸಿ ಸೇಡು ತೀರಿಸುವಾತ I ದೀನದಲಿತರ ಮೊರೆಯನೆಂದಿಗು ಮರೆಯನಾತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವ ಆತನು ಕುಗ್ಗಿಹೋದವರ ಮೊರೆಯನ್ನು ಮರೆಯದೆ ಅವರನ್ನು ಜ್ಞಾಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರು ಪ್ರಾಣಹತ್ಯೆ ಮಾಡುವವರನ್ನು ಮುಯ್ಯಿತೀರಿಸಲು ಜ್ಞಾಪಕಮಾಡಿಕೊಳ್ಳುವರು; ಬಾಧೆಗೆ ಒಳಗಾಗಿರುವ ದೀನರ ಕೂಗನ್ನು ಅವರು ಅಲಕ್ಷ್ಯಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 9:12
21 ತಿಳಿವುಗಳ ಹೋಲಿಕೆ  

ಆಗ ಸರ್ವೇಶ್ವರ, “ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಾನು ಕಣ್ಣಾರೆ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡಿಸಿಕೊಳ್ಳುವವರ ಬಗ್ಗೆ ಅವರು ಇಟ್ಟ ಮೊರೆ ನನಗೆ ಕೇಳಿಸಿದೆ. ಅವರ ಕಷ್ಟದುಃಖವನ್ನೆಲ್ಲಾ ನಾನು ಬಲ್ಲೆ.


ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು I ಸರ್ವಾಪತ್ತಿನಿಂದವನು ಮುಕ್ತಗೊಂಡನು II


ದೇವಜನರ, ಪೂಜ್ಯಪ್ರವಾದಿಗಳ ರಕ್ತಪಾತಕರಿಗೆ ಕುಡಿಯಲು ನೀನಿತ್ತೆ ಆ ರಕ್ತವ ನೇ ಅವರ ಕೃತ್ಯಕ್ಕದುವೇ ತಕ್ಕ ಸಂಭಾವನೆ,” ಎಂದು ಹಾಡುವುದನ್ನು ನಾನು ಕೇಳಿಸಿಕೊಂಡೆ.


ನಿಮ್ಮ ರಕ್ತಸುರಿಸಿ ಪ್ರಾಣತೆಗೆಯುವವರೆಗೆ ಮುಯ್ಯಿತೀರಿಸುವೆನು - ಮೃಗವಾಗಿದ್ದರೆ ಅದಕ್ಕೂ, ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿತೀರಿಸುವೆನು.


ಇಗೋ, ಸರ್ವೇಶ್ವರ ಜಗದ ಜನಕ್ಕೆ ಅವರವರ ಪಾಪದ ಫಲವನ್ನು ಉಣಿಸಲು ತಮ್ಮ ನಿವಾಸದಿಂದ ಹೊರಟಿರುವರು. ಭೂಮಿ ತನ್ನಲ್ಲಿ ಇಂಗಿದ ರಕ್ತವನ್ನು ಬೆಳಕಿಗೆ ತರುವುದು; ಭೂನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಚದು.


ತೃಣೀಕರಿಸನು, ತಿರಸ್ಕರಿಸನು ದಲಿತನನು I ವಿಮುಖನಾಗನು, ಪ್ರಾರ್ಥನೆಗೆ ಕಿವಿಗೊಡುವನು II


ಆಗ ಇಸ್ರಯೇಲರ ಸಂಕಟದ ನಿಮಿತ್ತ ಸರ್ವೇಶ್ವರ ಬಹಳವಾಗಿ ನೊಂದುಕೊಂಡರು.


ತಿರಸ್ಕರಿಸನಾತ ನಿರ್ಗತಿಕರ ಮೊರೆಯನು I ನೆರವೇರಿಸದೆ ಬಿಡನು ಅವರ ಕೋರಿಕೆಯನು II


ದೀನ ಕೋರಿಕೆಯನು ಪ್ರಭು, ತೀರಿಸುವೆ I ಹುರಿದುಂಬಿಸಿ, ಅವರ ಮೊರೆಗೆ ಕಿವಿಗೊಡುವೆ II


ಹೌದು ದೇವಾ, ನೀ ವಿಚಾರಿಪವನು; ದುಃಖದುಗುಡ ಲೆಕ್ಕಿಸುವವನು I ತಬ್ಬಲಿಗಳಿಗೆ ತಂದೆ ನೀನು, ನಿರ್ಗತಿಕ ನಿನಗೆ ಶರಣಾಗತನು II


ಅವುಗಳಿಗಾಗಿ ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದುದರಿಂದ ಸರ್ವೇಶ್ವರನ ಅಪ್ಪಣೆಯ ಪ್ರಕಾರ ಈ ಶಿಕ್ಷೆ ಅವರಿಗೆ ವಿಧಿಸಲಾಯಿತು.


ಈಗ ಕೇಳು; “ಇಸ್ರಯೇಲರ ಮೊರೆ ನನಗೆ ಮುಟ್ಟಿದೆ. ಈಜಿಪ್ಟಿನವರು ಅವರಿಗೆ ಕೊಡುತ್ತಿರುವ ಉಪದ್ರವವನ್ನು ನಾನು ನೋಡಿದ್ದೇನೆ.


ಹೀಗೆ, ಪುನೀತ ಹೇಬೆಲನ ರಕ್ತ ಮೊದಲ್ಗೊಂಡು ಬಲಿಪೀಠಕ್ಕೂ ಗರ್ಭಗುಡಿಗೂ ನಡುವೆ ನೀವು ಕೊಲೆಮಾಡಿದ ಬರಕೀಯನ ಮಗ ಜಕರೀಯನ ರಕ್ತದವರೆಗೆ ಪೃಥ್ವಿಯಲ್ಲಿ ಸುರಿಸಲಾದ ಎಲ್ಲಾ ಸತ್ಪುರುಷರ ರಕ್ತದ ಹೊಣೆ ನಿಮ್ಮದೇ.


ತನ್ನ ಸಹಸ್ರಾರು, ಲಕ್ಷಾಂತರ ರಥಗಳ ಸಮೇತ I ಸೀನಾಯಿಂದ ದೇಗುಲಕೆ ಪ್ರಭುವಿನ ಸಮಾಗಮನ II


ನೆನಸಿಕೊ ಆದಿಯಲೆ ನೀ ಸಂಪಾದಿಸಿಕೊಂಡ ಸಭೆಯನು I ಸ್ಮರಿಸಿಕೊ ಸೊತ್ತಾಗಿ ನೀ ರಕ್ಷಿಸಿಕೊಂಡ ಗೋತ್ರವನು I ಜ್ಞಾಪಿಸಿಕೊ ನಿನ್ನ ಸದನವಾಗಿದ್ದ ಸಿಯೋನ್ ಶಿಖರವನು II


ಚೂರು ಚೂರು ಮಾಡಿಹನಲ್ಲಿ ಥಳಥಳಿಸುವ ಬಾಣಗಳನು I ಖಡ್ಗ, ಗುರಾಣಿ ಎಂಬೆಲ್ಲ ಯುದ್ಧಾಯುಧಗಳನು II


ಆರಿಸಿಕೊಂಡಿಹನು ಪ್ರಭು ಸಿಯೋನ್ ನಗರವನು I ಅಪೇಕ್ಷಿಸಿಹನು ತನ್ನ ನಿವಾಸಕ್ಕಾಗಿ ಅದನು II


ಇಗೋ, ನನ್ನನ್ನೂ ನನಗೆ ಸ್ವಾಮಿ ದಯಪಾಲಿಸಿರುವ ಮಕ್ಕಳನ್ನೂ ನೋಡು. ಸಿಯೋನ್ ಶಿಖರದಲ್ಲಿ ವಾಸವಾಗಿರುವ ಸೇನಾಧೀಶ್ವರಸ್ವಾಮಿಯೇ ಇಸ್ರಯೇಲರಿಗೆ ನೀಡುವ ಸೂಚನೆಗಳು ಹಾಗೂ ಜೀವಂತ ಸಂಕೇತಗಳು ನಾವೇ ಆಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು