ಕೀರ್ತನೆಗಳು 9:13 - ಕನ್ನಡ ಸತ್ಯವೇದವು C.L. Bible (BSI)13 ಮೃತ್ಯುವಿನ ಬಾಯಿಂದೆನ್ನ ಬದುಕಿಸುವ ಪ್ರಭು, ಕನಿಕರಿಸು I ವೈರಿ-ವಿರೋಧಿಗಳೆನಗೆ ಗೈದ ಕಿರುಕುಳವನು, ನೀ ಗಮನಿಸು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ; ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಯೆಹೋವನೇ, ನನ್ನನ್ನು ಕನಿಕರಿಸು. ಇಗೋ, ವೈರಿಗಳು ನನಗೆ ಕೇಡುಮಾಡುತ್ತಿದ್ದಾರೆ. ‘ಮರಣ ದ್ವಾರ’ದಿಂದ ತಪ್ಪಿಸಿ ಕಾಪಾಡು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೆಹೋವ ದೇವರೇ, ನನ್ನ ವೈರಿಗಳು ನನ್ನನ್ನು ಹಿಂಸಿಸುವುದನ್ನು ನೋಡಿರಿ. ನನ್ನನ್ನು ಕರುಣಿಸಿ, ಮರಣ ದ್ವಾರದಿಂದ ನನ್ನನ್ನು ಮೇಲಕ್ಕೆತ್ತಿರಿ. ಅಧ್ಯಾಯವನ್ನು ನೋಡಿ |
ಅಹಾಬನಿಗೆ ಸರ್ವೇಶ್ವರ, ‘ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು,’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲವೆ?’ ಎಂದಿದ್ದರು. ಸರ್ವೇಶ್ವರನ ಆ ನುಡಿ ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲೇ ಹಾಕಿಬಿಡು,” ಎಂದು ಹೇಳಿದನು.