Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 9:14 - ಕನ್ನಡ ಸತ್ಯವೇದವು C.L. Bible (BSI)

14 ಆಗ ಸಿಯೋನ್ ನಗರಿಯ ದ್ವಾರದಲೆ ನಿಲ್ಲುವೆನು I ನಿನ್ನ ಗುಣಾತಿಶಯಗಳನು ಪ್ರಸಿದ್ಧಪಡಿಸುವೆನು I ನೀನಿತ್ತ ಮುಕ್ತಿಗಾಗಿ ಆನಂದಗೊಳ್ಳುವೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಲುಗಳಲ್ಲಿ ಹರ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಗ ಜೆರುಸಲೇಮಿನ ದ್ವಾರಗಳ ಬಳಿಯಲ್ಲಿ ನಿನ್ನನ್ನು ಸಂಕೀರ್ತಿಸುವೆನು. ನೀನು ನನ್ನನ್ನು ರಕ್ಷಿಸಿದ್ದರಿಂದ ಹರ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಚೀಯೋನೆಂಬ ನಗರ ದ್ವಾರಗಳಲ್ಲಿ ನಿಮ್ಮ ಸ್ತುತಿಯನ್ನು ಸಾರುವೆನು. ನಿಮ್ಮ ರಕ್ಷಣೆಯಲ್ಲಿ ಆನಂದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 9:14
27 ತಿಳಿವುಗಳ ಹೋಲಿಕೆ  

ನಿನ್ನಚಲ ಪ್ರೀತಿಯಲ್ಲಿದೆ ನನಗಿದೆ ವಿಶ್ವಾಸ I ನಿನ್ನ ರಕ್ಷಣೆ ತಂದಿದೆ ನನ್ನ ಮನಕೆ ಹರುಷ II


ವರ್ಣಿಸಬಲ್ಲವನಾರು ಆತನ ಮಹತ್ಕಾರ್ಯಗಳನು? I ಯೋಗ್ಯರೀತಿಯಲಿ ಹೊಗಳಬಲ್ಲವರಾರು ಆತನನು? II


ಜೀವೋದ್ಧಾರವನು ಮರಳಿ ಸವಿಯುವಂತೆ ಮಾಡು I ವಿಧೇಯನಾಗಿ ನಡೆವ ಸಿದ್ಧಮನಸ್ಸನು ನೀಡು II


ಆಗೆನ್ನ ಮನವು ಆನಂದಗೊಳ್ಳುವುದು ಪ್ರಭುವಿನಲಿ I ಆಹ್ಲಾದಗೊಳ್ಳುವುದು ಆತನಿತ್ತಾ ರಕ್ಷಣೆಯಲಿ II


ಜಯಘೋಷ ಮಾಡುವೆವು, ನಿನ್ನ ಗೆಲುವಿನ ನಿಮಿತ್ತ I ಧ್ವಜ ಹಾರಿಪೆವು, ಎಮ್ಮ ದೇವನ ನಾಮದ ನಿಮಿತ್ತ I ನಿನ್ನ ಕೋರಿಕೆಗಳೆಲ್ಲವನು, ಕೈಗೂಡಿಸಲಿ ಆತ II


“ನಿನ್ನನ್ನು ಪರಿಹಾಸ್ಯಮಾಡಿ ತಿರಸ್ಕರಿಸುತಿಹಳು ಕನ್ಯೆಯಾದ ಸಿಯೋನಿನ ಕುವರಿಯು, ನಿನ್ನ ಹಿಂದೆ ತಲೆಯಾಡಿಸಿ ಮೂದಲಿಸುತಿಹಳು ಜೆರುಸಲೇಮಿನ ಆ ಕುವರಿಯು.


ಅರಸಗೆ ಹರ್ಷವಾಯಿತು ಪ್ರಭು, ನೀ ತೋರಿದ ಪರಾಕ್ರಮಕ್ಕಾಗಿ I ಪರಮಾನಂದಗೊಂಡನವನು, ನೀನಿತ್ತ ವಿಜಯೋತ್ಸವಕ್ಕಾಗಿ II


ಹನ್ನಳು ಹೀಗೆಂದು ಭಜಿಸಿದಳು: “ಆನಂದಿಸುತ್ತಿದೆ ನನ್ನ ಮನ ಸರ್ವೇಶ್ವರನಲಿ ಉನ್ನತೋನ್ನತವಾಗಿದೆ ನನ್ನ ಶಕ್ತಿ ಆ ದೇವನಲಿ ನನಗಿದೆ ಶತ್ರುಗಳನ್ನೂ ಧಿಕ್ಕರಿಸುವ ಶಕ್ತಿ ನನಗಿತ್ತಿರುವನಾ ಸಂತಸದಾಯಕ ಮುಕ್ತಿ.


“ಎನ್ನ ಮನ ಮಾಡುತ್ತಿದೆ ಸರ್ವೇಶ್ವರನ ಸ್ತುತಿ I ಉಲ್ಲಾಸಿಸುತ್ತಿದೆ ಮುಕ್ತಿದಾತ ದೇವನಲಿ II


ಸಂತೋಷಿಸುವೆ ನಾನು ಸರ್ವೇಶ್ವರನಲಿ ಆನಂದಿಸುವೆ ನನ್ನ ಉದ್ಧಾರಕ ದೇವನಲಿ.


ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನ್ ನಗರಿಯೇ, ಎದ್ದು ಒಕ್ಕಣೆಮಾಡು. ಇದಕ್ಕಾಗಿ ನಿನ್ನ ಕೊಂಬನ್ನು ಕಬ್ಬಿಣವಾಗಿಸುವೆನು. ನಿನ್ನ ಗೊರಸನ್ನು ಕಂಚನ್ನಾಗಿ ಮಾಡುವೆನು. ಅನೇಕ ರಾಷ್ಟ್ರಗಳನ್ನು ನೀನು ತುಳಿದು ಧ್ವಂಸಮಾಡುವೆ. ಅವುಗಳನ್ನು ಕೊಳ್ಳೆಹೊಡೆದು ತಂದ ಸ್ವತ್ತನ್ನು ಸರ್ವೇಶ್ವರಸ್ವಾಮಿಗೆ ಮೀಸಲಾಗಿಡುವೆ. ಅವುಗಳಿಂದ ಬಂದ ಆಸ್ತಿಯನ್ನು ಲೋಕದೊಡೆಯನಿಗೆ ಪ್ರತ್ಯೇಕಿಸಿಡುವೆ.”


ಇಗೋ, ಸಮೀಪಿಸುತ್ತಿದೆ ನೀವು ಮುಕ್ತಿಹೊಂದುವದಿನ ಆತನೊಂದಿಗಿದೆ ಆತ ನೀಡುವ ಬಹುಮಾನ ಆತನ ಮುಂದಿದೆ ಆತ ಗಳಿಸಿದ ವರಮಾನ. ಇದನು ತಿಳಿಯಹೇಳಿರಿ ಸಿಯೋನೆಂಬಾಕೆಗೆ ಸರ್ವೇಶ್ವರನ ಆಜ್ಞೆಯಿದು ಜಗದ ದಿಗಂತದವರೆಗೆ.


ಉದ್ಧರಿಸುವಾ ಒರತೆಗಳಿಂದ ಸೇದುವಿರಿ ನೀರನು ಹರುಷದಿಂದ.


ಆಗ ಸಲ್ಲಿಸುವೆವು ಸದಾಕಾಲ ಕೃತಜ್ಞತೆಯನು ನಿನಗೆ I ಸ್ಮರಿಸುವೆವು ನಿನ್ನ ಮಹಿಮೆಯನು ತಲತಲಾಂತರದವರೆಗೆ I ಹೇ ದೇವಾ, ನಾವು ನಿನ್ನ ಪ್ರಜೆ, ನೀ ಪಾಲಿಸುವ ಮಂದೆ II


ತೆರೆವಂತೆ ಮಾಡು ಪ್ರಭು ನನ್ನ ತುಟಿಗಳನು I ಸಾರುವುದೆನ್ನ ಬಾಯಿ ನಿನ್ನ ನುಡಿಗಳನು II


ಜನಸಮೂಹದೊಡನೆ ನಾ ಜಯಜಯಕಾರ ಮಾಡುತ I ಸ್ತುತಿಗೀತೆಗಳ ಹಾಡುತ, ತೀರ್ಥಯಾತ್ರೆ ಗೈಯುತ I ದೇಗುಲಕೆ ತೆರಳಿದಾ ಸವಿನೆನಪು ಮನಕರಗಿಪುದು ನಿರುತ II


ಮಹಾಸಭೆಯಲ್ಲಾಗ ನಿನ್ನನು ಕೊಂಡಾಡುವೆ I ಬಹುಜನರ ಮುಂದೆ ನಿನ್ನ ಗುಣಗಾನ ಮಾಡುವೆ II


ಪ್ರಭು, ನೀನೆ ಸ್ಪೂರ್ತಿ, ತುಂಬುಸಭೆಯಲಿ ನಾ ಮಾಳ್ಪ ಸ್ತುತಿಗೆ I ಭಕ್ತಜನರ ಮುಂದೆ ನಾ ಸಲ್ಲಿಸುವೆ, ನಿನಗೆ ಹೊತ್ತ ಹರಕೆ II


ಸೋದರರಿಗೆ, ಸಾರುವೆ ನಿನ್ನ ನಾಮ ಮಹಿಮೆಯನ್ನು I ತುಂಬಿದ ಸಭೆಯಲಿ ಮಾಡುವೆ, ನಿನ್ನ ಸ್ತುತಿಯನ್ನು II


ಆಗ ಸರ್ವೇಶ್ವರ, “ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಾನು ಕಣ್ಣಾರೆ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡಿಸಿಕೊಳ್ಳುವವರ ಬಗ್ಗೆ ಅವರು ಇಟ್ಟ ಮೊರೆ ನನಗೆ ಕೇಳಿಸಿದೆ. ಅವರ ಕಷ್ಟದುಃಖವನ್ನೆಲ್ಲಾ ನಾನು ಬಲ್ಲೆ.


ಈಗ ಕೇಳು; “ಇಸ್ರಯೇಲರ ಮೊರೆ ನನಗೆ ಮುಟ್ಟಿದೆ. ಈಜಿಪ್ಟಿನವರು ಅವರಿಗೆ ಕೊಡುತ್ತಿರುವ ಉಪದ್ರವವನ್ನು ನಾನು ನೋಡಿದ್ದೇನೆ.


ಜೀವಾತ್ಮ ನಾ ಬಳಲಿ ತತ್ತರಿಸುತ್ತಿರುವೆ I ಎಲ್ಲಿಯತನಕ ಪ್ರಭು ನೀ ಕೈಬಿಟ್ಟಿರುವೇ II


ನಾನಾದರೊ ಕೀರ್ತಿಸುವೆನು ಯಕೋಬ ದೇವರನು I ಮಾಡುವೆನು ಅನವರತ ಆತನ ಗುಣಗಾನವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು