Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 9:16 - ಕನ್ನಡ ಸತ್ಯವೇದವು C.L. Bible (BSI)

16 ಪ್ರಭುವಿತ್ತ ನ್ಯಾಯತೀರ್ಪೇ ಆತನಿಗೆ ಪ್ರಚಾರಕ I ದುಷ್ಟರು ಗೈದ ಕುಯುಕ್ತಿಯೇ ಅವರಿಗೆ ಸಂಹಾರಕ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನು ಅವರನ್ನು ಅವರ ಕುಯುಕ್ತಿಯಲ್ಲಿಯೇ ಸಿಕ್ಕಿಸಿದ್ದರಿಂದ ಆತನ ನೀತಿಯು ಪ್ರಖ್ಯಾತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರು ತಮ್ಮ ನ್ಯಾಯಕೃತ್ಯಗಳಲ್ಲಿ ಪ್ರಸಿದ್ಧರಾಗಿದ್ದಾರೆ; ದುಷ್ಟರು ತಮ್ಮ ಕೈಕೆಲಸದಲ್ಲಿ ಸಿಕ್ಕಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 9:16
26 ತಿಳಿವುಗಳ ಹೋಲಿಕೆ  

ನಾನು ಈಜಿಪ್ಟಿನವರಿಗೆ ವಿರುದ್ಧ ಕೈಯೆತ್ತಿ ಅವರ ಮಧ್ಯೆಯಿಂದ ಇಸ್ರಯೇಲರನ್ನು ಹೊರತಂದಾಗ ನಾನು ಸರ್ವೇಶ್ವರನೆಂಬುದನ್ನು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು.


ಅನೇಕರು ಎಡವಿಬೀಳುವರು, ಮುಗ್ಗರಿಸಿ ಮೂಳೆ ಮುರಿದುಕೊಳ್ಳುವರು, ಬೋನಿಗೆ ಸಿಕ್ಕಿಕೊಳ್ಳುವರು, ಬಲೆಗೆ ಬೀಳುವರು.”


ಮಾತಿನ ದೋಷದಿಂದ ಕೆಡುಕನು ಬೋನಿಗೆ ಬೀಳುವನು; ನೀತಿವಂತನು ಆಪತ್ತಿನಿಂದ ತಪ್ಪಿಸಿಕೊಳ್ಳುವನು.


ಆಗ ಅದೋನೀಬೆಜೆಕನು, “ಎಪ್ಪತ್ತು ಮಂದಿ ಅರಸರ ಕೈಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿದೆ; ನನ್ನ ಊಟದ ಮೇಜಿನ ಕೆಳಗೆ ಬೀಳುತ್ತಿದ್ದ ಚೂರುಪಾರುಗಳನ್ನು ಅವರು ತಿನ್ನುತ್ತಿದ್ದರು; ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾರೆ,” ಎಂದನು. ಅವನನ್ನು ಜೆರುಸಲೇಮಿಗೆ ಕರೆತರಲು ಅವನು ಅಲ್ಲೇ ನಿಧನನಾದನು.


ನಾನು ಫರೋಹನ ಹೃದಯವನ್ನು ಕಠಿಣವಾಗಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ಆ ಫರೋಹನನ್ನೂ ಅವನ ಸೈನ್ಯವನ್ನೂ ಗೆದ್ದು ನಾನು ಪ್ರಖ್ಯಾತಿ ಹೊಂದುವೆನು. ನಾನೇ ಸರ್ವೇಶ್ವರ ಎಂಬುದು ಈಜಿಪ್ಟಿನವರಿಗೆ ಗೊತ್ತಾಗುವುದು.” ಸರ್ವೇಶ್ವರನ ಆಜ್ಞೆಯಂತೆಯೇ ಇಸ್ರಯೇಲರು ನಡೆದುಕೊಂಡರು.


ನಿನ್ನ ಮಾತಿನ ಬಲೆಗೆ ಸಿಕ್ಕಿಹಾಕಿಕೊಂಡಿರುವೆ; ನಿನ್ನ ವಾಗ್ದಾನವು ನಿನ್ನನ್ನು ಸೆರೆಹಿಡಿದಿದೆ.


ಸಿಯೋನ್ ಪಟ್ಟಣಿಗರು ಹರ್ಷಗೊಳ್ಳಲಿ I ಯೆಹೂದ್ಯ ನಗರಗಳು ಆನಂದಪಡಲಿ I ನಿನ್ನ ನ್ಯಾಯವನು ನೆನಪಿಸಿಕೊಳ್ಳಲಿ II


ನಿನಗೊಪ್ಪಿಗೆಯಾಗಲಿ ನನ್ನ ಬಾಯಮಾತು, ಹೃದಯಧ್ಯಾನ I ನೀನೆನ್ನ ಪ್ರಭು, ನನಗೆ ಉದ್ಧಾರಕ, ನನಗಾಶ್ರಯಧಾಮ II


ಅಗ್ನಿಗಂಧಕಗಳನು ದುರುಳರ ಮೇಲೆ ಮಳೆಗರೆಯಲಿ I ಉರಿಗಾಳಿಯೆ ಅವರ ಪಾಲಿನ ಧೂಮಪಾನವಾಗಲಿ II


ಕಿವಿಗೊಡು ಪ್ರಭು, ಎನ್ನ ನುಡಿಗೆ I ಬಗೆಗೊಡು ಎನ್ನಾತ್ಮದ ಮೊರೆಗೆ II


ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ದೇವರು ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಈ ಅಸ್ಸೀರಿಯನ ಕೈಯಿಂದ ಬಿಡಿಸಿರಿ.”


ಅವರು ಈ ದಿನ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವರು. ನಾನು ನಿನ್ನನ್ನು ಕೊಂದು, ನಿನ್ನ ತಲೆಯನ್ನು ಕಡಿದು, ಫಿಲಿಷ್ಟಿಯ ಸೈನ್ಯದ ಶವಗಳನ್ನು ಆಕಾಶದ ಪಕ್ಷಿಗಳಿಗೂ ವನ್ಯಮೃಗಗಳಿಗೂ ಹಂಚಿಕೊಡುವೆನು. ಇದರಿಂದ ಇಸ್ರಯೇಲರ ಸಂಗಡ ದೇವರಿದ್ದಾರೆಂಬುದು ಜಗತ್ತಿಗೆಲ್ಲಾ ತಿಳಿದುಬರುವುದು.


ಸರ್ವೇಶ್ವರ ಈಜಿಪ್ಟಿನವರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಯೇಲರು ನೋಡಿ ಸರ್ವೇಶ್ವರನಿಗೆ ಭಯಪಟ್ಟು ಅವರಲ್ಲೂ ಅವರ ದಾಸ ಮೋಶೆಯಲ್ಲೂ ನಂಬಿಕೆಯಿಟ್ಟರು.


ಫರೋಹನು ಸಮೀಪಿಸುತ್ತಿರುವುದನ್ನು ಇಸ್ರಯೇಲರು ಕಣ್ಣೆತ್ತಿ ನೋಡಿದರು. ತಮ್ಮನ್ನು ಬೆನ್ನಟ್ಟಿ ಬಂದಿದ್ದ ಈಜಿಪ್ಟಿನವರನ್ನು ಕಂಡು ಬಹಳವಾಗಿ ಭಯಪಟ್ಟು ಸರ್ವೇಶ್ವರನಿಗೆ ಮೊರೆಯಿಟ್ಟರು.


ಆದುದರಿಂದಲೇ ಸರ್ವೇಶ್ವರ ನಿಮಗೆ ;ಆಜ್ಞೆಯ ಮೇಲೆ ಅಜ್ಞೆ, ಸೂತ್ರದ ಮೇಲೆ ಸೂತ್ರ, ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ’ ಎಂದು ಹೇಳಿ ಪಾಠಕಲಿಸುವರು. ಆಗ ನೀವು ನಡೆ ನಡೆದೂ ಎಡವಿ ಬೀಳುವಿರಿ, ಗಾಯಗೊಳ್ಳುವಿರಿ. ಉರುಲಿಗೆ ಸಿಕ್ಕಿಬೀಳುವಿರಿ, ಬಂಧನಕ್ಕೊಳಗಾಗುವಿರಿ.


ನನ್ನನ್ನು ಸುತ್ತುವರೆದಿರುವವರು ತಲೆಯೆತ್ತದಿರಲಿ I ಅವರಾಡುವ ಕೇಡು ಅವರ ತಲೆಯ ಮೇಲೇ ಎರಗಲಿ II


ವರ್ಣಿಸುವುದುಚಿತ ವೀಣಾ ಸ್ವರಮಂಡಲದಿಂದ I ಕೊಳಲ ದನಿಯಿಂದ, ಕಿನ್ನರಿಯ ನಾದಸ್ವರದಿಂದ II


ಕತ್ತರಿಬೋನು ಅವನ ಹಿಮ್ಮಡಿಯನ್ನು ಕಚ್ಚುವುದು ಆ ಕಳ್ಳ ಉರುಲು ಅವನನ್ನು ಸಿಕ್ಕಿಸಿಕೊಳ್ಳುವುದು.


ತಾನು ಮಾಡಿದ ಕುತಂತ್ರ ತನ್ನ ತಲೆಗೆ ಗಂಡಾಂತರ I ತಾನು ಕೊಟ್ಟ ಉಪದ್ರವ ತನ್ನ ಬುರುಡೆಗೆ ಅವಾಂತರ II


ಇದಾದ ಮೇಲೆ ರಾಜ ದಾರ್ಯಾವೆಷನು ಜಗದಲ್ಲಿ ವಾಸಿಸುವ ಸಕಲ ದೇಶ-ಕುಲ-ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿದನು: ನಿಮಗೆ ಹೆಚ್ಚೆಚ್ಚು ಸುಖಶಾಂತಿ ಲಭಿಸಲಿ!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು