Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 9:18 - ಕನ್ನಡ ಸತ್ಯವೇದವು C.L. Bible (BSI)

18 ದರಿದ್ರರನು ದೇವರು ಎಂದಿಗು ಮರೆಯುವುದಿಲ್ಲ I ನಿರ್ಗತಿಕರ ನಿರೀಕ್ಷೆ ಕೈಗೂಡದೆ ಇರುವುದಿಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವುದಿಲ್ಲ; ದೀನರ ನಿರೀಕ್ಷೆಯು ಕೆಡುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವದಿಲ್ಲ; ದೀನರ ನಿರೀಕ್ಷಣೆಯು ಕೆಡುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಕೆಲವೊಮ್ಮೆ, ಇಕ್ಕಟ್ಟಿನಲ್ಲಿರುವವರನ್ನು ದೇವರು ಮರೆತಿರುವಂತೆ ಕಾಣುತ್ತದೆ; ಕುಗ್ಗಿಹೋದ ಅವರಿಗೆ ನಿರೀಕ್ಷೆಯೇ ಇಲ್ಲದಂತೆ ಕಂಡರೂ ದೇವರು ಅವರನ್ನು ಮರೆತುಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ದೇವರು ಬಡವರನ್ನು ಎಂದೆಂದಿಗೂ ಮರೆಯುವುದಿಲ್ಲ; ಕುಗ್ಗಿದವರ ನಿರೀಕ್ಷೆ ಎಂದೆಂದಿಗೂ ನಾಶವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 9:18
15 ತಿಳಿವುಗಳ ಹೋಲಿಕೆ  

ಬಡವರ ಬವಣೆ ತಿಳಿಯಿತೆನಗೆ; ದಲಿತರ ನರಳಾಟ ಕೇಳಿಸಿತೆನಗೆ I ಎದ್ದು ಬರುವೆ, ಹಗೆಗಳಿಂದವರನು ಉದ್ಧರಿಸುವೆ” ಇದು ಪ್ರಭುವಿನ ಹೇಳಿಕೆ II


ಆಗ ನಿನ್ನ ಭವಿಷ್ಯ ಶುಭದಾಯಕವಾಗಿರುವುದು, ನಿನ್ನ ನಿರೀಕ್ಷೆ ಸಾರ್ಥಕವಾಗುವುದು.


ಅಂತೆಯೇ ಜ್ಞಾನ ನಿನ್ನ ಆತ್ಮಕ್ಕೆ ಸಿಹಿಯೆಂದು ತಿಳಿ; ಅದನ್ನು ಪಡೆದೆಯಾದರೆ ನಿನ್ನ ಭವಿಷ್ಯ ಶುಭಕರ, ನಿನ್ನ ನಿರೀಕ್ಷೆ ಆಗದು ನಿರರ್ಥಕ.


ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?


ಆಲಿಸಿದಾತನು ಬಂಧಿತರ ಗೋಳಾಟವನು I ಬಿಡಿಸಿಹನು ಮರಣತೀರ್ಪಿಗೆ ಗುರಿಯಾದವರನು II


ಯೇಸುಸ್ವಾಮಿ ತಮ್ಮ ಶಿಷ್ಯರ ಕಡೆಗೆ ದೃಷ್ಟಿಸಿ ನೋಡಿ ಹೀಗೆಂದು ಬೋಧಿಸಿದರು: “ದೀನದಲಿತರೇ, ನೀವು ಭಾಗ್ಯವಂತರು! ದೇವರ ಸಾಮ್ರಾಜ್ಯ ನಿಮ್ಮದು.


ತೃಪ್ತಿಪಡಿಸಿರುವನಾತ ಹಸಿದವರನು ಮೃಷ್ಟಾನ್ನದಿ I ಹೊರದೂಡಿರುವನು ಸಿರಿವಂತರನು ಬರೀಗೈಯಲಿ II


ನಿಂತಿರುವನು ಪ್ರಭು ಬಡವನ ಬಲಗಡೆ I ವಿಧಿಸುವವರಿಂದ ತಪ್ಪಿಸುವನು ಮರಣದಂಡನೆ II


ತಿರಸ್ಕರಿಸನಾತ ನಿರ್ಗತಿಕರ ಮೊರೆಯನು I ನೆರವೇರಿಸದೆ ಬಿಡನು ಅವರ ಕೋರಿಕೆಯನು II


ದೀನದಲಿತರನಾತ ಉದ್ಧರಿಸಲಿ I ಬಡಬಗ್ಗರಿಗೆ ನ್ಯಾಯ ದೊರಕಿಸಲಿ I ಪ್ರಜಾಹಿಂಸಕರನು ಸದೆಬಡಿಯಲಿ II


ಸ್ವಾಮಿ ದೇವಾ, ನೀನೇ ನನ್ನ ಭರವಸೆ I ಬಾಲ್ಯದಿಂದಲೂ ನೀನೇ ನನ್ನ ನಂಬಿಕೆ II


ರಕ್ತಪಾತ ಲೆಕ್ಕಿಸಿ ಸೇಡು ತೀರಿಸುವಾತ I ದೀನದಲಿತರ ಮೊರೆಯನೆಂದಿಗು ಮರೆಯನಾತ II


ದೇವನ ನೆನೆಯದವರೇ, ನೀಡಿರಿ ಗಮನವನು I ಇಲ್ಲವಾದರೆ ಛಿನ್ನಛಿನ್ನವಾಗಿಸಿಬಿಟ್ಟೇನು I ನನ್ನ ಕೈಯಿಂದ ತಪ್ಪಿಸುವವರಾರು ನಿಮ್ಮನು? II


ದೇವಾ, ದುಷ್ಟರನು ಸಂಹರಿಸಿಬಿಟ್ಟರೆ ಎಷ್ಟೋ ಉಚಿತ I ಕೊಲೆಪಾತಕರು ನನ್ನಿಂದ ತೊಲಗಿಹೋದರೆ ಎಷ್ಟೋ ಹಿತ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು