Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 9:19 - ಕನ್ನಡ ಸತ್ಯವೇದವು C.L. Bible (BSI)

19 ಎದ್ದೇಳು ಪ್ರಭೂ, ಜಯ ದೊರಕದಿರಲಿ ನರಮಾನವನಿಗೆ I ನಡೆಯಲಿ ನಿನ್ನ ಮುಂದೆಯೆ ನ್ಯಾಯನಿರ್ಣಯ ಜನಾಂಗಗಳಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು. ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು. ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೋವನೇ, ಎದ್ದೇಳು! ಜನಾಂಗಗಳಿಗೆ ನ್ಯಾಯತೀರಿಸು. ಅವರು ಬಲಿಷ್ಠರಾಗಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆಹೋವ ದೇವರೇ ಎದ್ದೇಳಿರಿ, ಮನುಷ್ಯರು ನನ್ನ ಮೇಲೆ ವಿಜಯ ಸಾಧಿಸದಿರಲಿ; ರಾಷ್ಟ್ರಗಳಿಗೆ ನಿಮ್ಮ ಮುಂದೆಯೇ ನ್ಯಾಯತೀರ್ಪಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 9:19
23 ತಿಳಿವುಗಳ ಹೋಲಿಕೆ  

ಎದ್ದೇಳು ದೇವ, ಕಾಪಾಡ ಬಾ ಪ್ರಭುವೆ I ವೈರಿಗಳ ದವಡೆ ಬಡಿದವನು ನೀನಲ್ಲವೇ I ದುರುಳರ ಹಲ್ಲುದುರಿಸಿದವನು ನೀನಲ್ಲವೆ? II


ಎದ್ದು ಬಂದು ಪ್ರಭು ನಿನ್ನ ನೆರವನ್ನೊದಗಿಸು I ನಿನ್ನಚಲ ಪ್ರೇಮದಿಂದ ನಮ್ಮನು ಉದ್ಧರಿಸು II


ಪ್ರಭೂ, ಎದ್ದೇಳು, ನಿದ್ರಿಸಬೇಡ I ನಮ್ಮನು ಎಂದೆಂದಿಗೂ ತೊರೆಯಬೇಡ II


ಎದ್ದೇಳು ಪ್ರಭು, ದಲಿತನನು ಮರೆಯದಿರಯ್ಯಾ I ಆತನನು ರಕ್ಷಿಸಲು ದೇವಾ, ಕೈಚಾಚಯ್ಯಾ II


ಹೇ ಪ್ರಭು, ಎಚ್ಚರಗೊಳ್ಳು : ನ್ಯಾಯವನು ದೇವಾ, ನಿರ್ಣಯಿಸು I ಕೋಪದಿಂದೆದ್ದು ವಿರೋಧಿಗಳ ಕ್ರೋಧವನು ಭಂಗಪಡಿಸು II


ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: “ಸ್ವಲ್ಪತಾಳಿರಿ, ನಾನು ತಪ್ಪನ್ನು ನಿಮಗೆ ತೋರಿಸುವ ದಿನಕ್ಕಾಗಿ ಕಾದಿರಿ. ರಾಷ್ಟ್ರಗಳನ್ನು ಒಂದಾಗಿಸಲು, ರಾಜ್ಯಗಳನ್ನು ಒಂದುಗೂಡಿಸಲು ನಿರ್ಧರಿಸಿದ್ದೇನೆ; ಹೀಗೆ ಅವುಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನು ಸುರಿಸಲು ತೀರ್ಮಾನಿಸಿದ್ದೇನೆ. ಲೋಕವೆಲ್ಲವು ನನ್ನ ಕೋಪಾಗ್ನಿಯಿಂದ ಧ್ವಂಸವಾಗುವುದು.


ಎಚ್ಚರಗೊಳ್ಳು ಸರ್ವೇಶ್ವರನ ಭುಜವೇ, ಎಚ್ಚರಗೊಂಡು ಬಲವನು ತಂದುಕೊ ಭುಜವೇ, ಪೂರ್ವಕಾಲದೊಳು ಪುರಾತನ ಪೀಳಿಗೆಯೊಳು ಎಚ್ಚರಗೊಂಡಂತೆ ಎಚ್ಚೆತ್ತುಕೊ ಈಗಲು. ರಹಬನ್ನು ಛೇದಿಸಿಬಿಟ್ಟ ಭುಜ ನೀನಲ್ಲವೆ? ಘಟಸರ್ಪವನು ಅಪ್ಪಳಿಸಿದ ಭುಜ ನೀನಲ್ಲವೆ?


ಈ ಪರಿ ಮುಯ್ಯಿತೀರಿಸಲಿ ಜನಾಂಗಗಳಿಗೆ I ವಿಧಿಸಲಿ ದಂಡನೆಯನು ಅನ್ಯರಾಷ್ಟ್ರಗಳಿಗೆ II


ಸುರಿ ರೌದ್ರವನು ನಿನ್ನನರಿಯದಾ ಮ್ಲೇಚ್ಛರ ಮೇಲೆ I ನಿನ್ನ ಶ್ರೀನಾಮವನು ಉಚ್ಚರಿಸದಾ ರಾಜ್ಯಗಳ ಮೇಲೆ II


ರಾಷ್ಟ್ರಗಳನ್ನು ಹೊಡೆದುರುಳಿಸುವಂಥ ಹರಿತವಾದ ಖಡ್ಗವೊಂದು ಆತನ ಬಾಯಿಂದ ಹೊರಟಿತು. ಆತನು ಕಬ್ಬಿಣದ ದಂಡದಿಂದ ಅವುಗಳ ಆಳ್ವಿಕೆ ನಡೆಸುವನು. ಸರ್ವಶಕ್ತ ದೇವರ ರೋಷವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.


ಈಜಿಪ್ಟಿನ ಮನೆತನದವರು ಬರದೆಹೋದರೆ, ಪರ್ಣಕುಟೀರಗಳ ಹಬ್ಬವನ್ನು ಆಚರಿಸಲು ಬರದ ರಾಷ್ಟ್ರಗಳಿಗೆ ಸರ್ವೇಶ್ವರ ವಿಧಿಸುವ ದಂಡನೆ ಅವರಿಗೂ ತಗಲುವುದು.


ನನ್ನ ಮಾತನ್ನು ಕೇಳದ ರಾಷ್ಟ್ರಗಳಿಗೆ ಉಗ್ರಕೋಪದಿಂದ ಮುಯ್ಯಿತೀರಿಸುವೆನು.”


“ರಾಷ್ಟ್ರಗಳು ಎಚ್ಚೆತ್ತು ಸರ್ವೇಶ್ವರಸ್ವಾಮಿಯ ನ್ಯಾಯತೀರ್ಪಿನ ಕಣಿವೆಗೆ ಇಳಿಯಲಿ. ಸುತ್ತಮುತ್ತ ನೆರೆದಿರುವ ರಾಷ್ಟ್ರಗಳಿಗೆ ನ್ಯಾಯತೀರಿಸಲು ಅಲ್ಲಿ ನಾನು ಆಸೀನನಾಗಿರುವೆನು.


ಸರ್ವೇಶ್ವರಾ, ನಿಮ್ಮನ್ನು ಅರಿತುಕೊಳ್ಳದವರ ಮೇಲೆ ನಿಮ್ಮ ನಾಮವನ್ನು ಉಚ್ಚರಿಸದವರ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿದುಬಿಡಿ. ಅವರು ಯಕೋಬ್ಯರನ್ನು ಕಬಳಿಸಿದ್ದಾರೆ ಹೌದು, ಪೂರ್ತಿಯಾಗಿ ಕಬಳಿಸಿಬಿಟ್ಟಿದ್ದಾರೆ ಅವರ ನಿವಾಸಗಳನ್ನು ನಾಶಮಾಡಿದ್ದಾರೆ.


ಶೋಭಿಸು ಎಫ್ರಯಿಮ್, ಬೆನ್ಯಮಿನ್, ಮನಸ್ಸೆ ಕುಲಗಳ ಮುಂದೆ I ತೋರ್ಪಡಿಸು ನಿನ್ನ ಶೌರ್ಯವನು, ಬಂದು ಜಯಪ್ರದನಾಗು ನಮಗೆ II


ಆಸನು ತನ್ನ ದೇವರಾದ ಸರ್ವೇಶ್ವರನಿಗೆ, “ಸರ್ವೇಶ್ವರಾ, ಬಲಿಷ್ಠನು ಬಲಹೀನನ ಮೇಲೆ ಬೀಳುವಾಗ, ನಿಮ್ಮ ಹೊರತು ರಕ್ಷಕನಿಲ್ಲ. ನಿಮ್ಮಲ್ಲಿ ಭರವಸೆ ಇಟ್ಟು ನಿಮ್ಮ ಹೆಸರಿನಲ್ಲಿ ಈ ಮಹಾ ಸೇನೆಗೆ ವಿರುದ್ಧ ಯುದ್ಧಕ್ಕೆ ಬಂದಿದ್ದೇವೆ. ಸರ್ವೇಶ್ವರಾ, ನಮ್ಮ ದೇವರು ನೀವು; ನರರು ನಿಮ್ಮನ್ನು ಎದುರಿಸಿ ಗೆಲ್ಲಬಾರದು,” ಎಂದು ಮೊರೆ ಇಟ್ಟನು.


ಕಾಯುವನಾತ ತನ್ನ ಭಕ್ತರನು ಹೆಜ್ಜೆ ಹೆಜ್ಜೆಗು ದುರುಳರಾದರೋ ಮುಳುಗಿ ಮೌನ ತಾಳುವರು ಅಂಧಕಾರದೊಳು. ಕೇವಲ ಭುಜಬಲದಿಂದ ಜಯಹೊಂದಲಾರನು ನರಮಾನವನು!


ಅವನು ಯಕೋಬನಿಗೆ, “ಇನ್ನು ಮೇಲೆ ನೀನು ಯಕೋಬ ಎನಿಸಿಕೊಳ್ಳುವುದಿಲ್ಲ; ದೇವರ ಸಂಗಡ ಹಾಗು ಮನುಷ್ಯರ ಸಂಗಡ ಹೋರಾಡಿ ಗೆದ್ದವನಾದ್ದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರುಂಟಾಗುವುದು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು