Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 9:2 - ಕನ್ನಡ ಸತ್ಯವೇದವು C.L. Bible (BSI)

2 ಪರಾತ್ಪರನೇ, ಮಾಡುವೆನು ನಿನ್ನ ನಾಮಸ್ತುತಿ I ಹರ್ಷಾನಂದಗೊಳ್ವೆನು‍ ದೇವಾ, ನಿನ್ನಲ್ಲತಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪರಾತ್ಪರನಾದ ದೇವರೇ, ನಾನು ನಿನ್ನಲ್ಲಿ ಸಂತೋಷಿಸಿ ಉತ್ಸಾಹಗೊಳ್ಳುವೆನು; ನಿನ್ನ ಹೆಸರನ್ನು ಕೀರ್ತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಪರಾತ್ಪರನೇ, ನಿನ್ನಲ್ಲಿ ನಾನು ಸಂತೋಷಿಸಿ ಉತ್ಸಾಹಪಡುವೆನು; ನಿನ್ನ ಹೆಸರನ್ನು ಕೀರ್ತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವರೇ, ನಿನ್ನಲ್ಲಿ ನಾನು ಸಂತೋಷಿಸುತ್ತಾ ಉಲ್ಲಾಸಪಡುವೆನು. ಮಹೋನ್ನತನೇ, ನಿನ್ನ ಹೆಸರನ್ನೇ ಸಂಕೀರ್ತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ನಿಮ್ಮಲ್ಲಿ ಆನಂದಿಸಿ ಉಲ್ಲಾಸಪಡುವೆನು; ಮಹೋನ್ನತರೇ, ನಾನು ನಿಮ್ಮ ಹೆಸರನ್ನು ಕೊಂಡಾಡಿ ಹಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 9:2
18 ತಿಳಿವುಗಳ ಹೋಲಿಕೆ  

ಇವರು ಅರಿಯಲಿ ಪ್ರಭುವೆಂಬ ನಾಮ ನಿನ್ನದೆಂದು I ಧರೆಯಲ್ಲೆಲ್ಲಾ ಸರ್ವೋನ್ನತ ನೀನೇ ಎಂದು II


ದೊರಕುವುದು ದೇವಾ, ನಿನ್ನಾಶೀರ್ವಾದ ಸಜ್ಜನರಿಗೆ I ಕವಚವಾದಂತಿಹುದು ನಿನ್ನ ಕರುಣೆ ಅಂಥವರಿಗೆ II ಎಂದೇ ಹರ್ಷಾನಂದಗೊಳ್ವರು ನಿನ್ನನಾಶ್ರಯಿಸಿದವರೆಲ್ಲರು I ನೀ ರಕ್ಷಿಸೆ, ಉಲ್ಲಾಸಗೊಳ್ಳುವರು ನಿನ್ನ ನಾಮಪ್ರಿಯರೆಲ್ಲರು II


ಸತ್ಯಸ್ವರೂಪನಾದ ಸ್ವಾಮಿಗೆ ನನ್ನ ವಂದನೆ I ಪರಾತ್ಪರ ಪ್ರಭುವಿನ ನಾಮಕ್ಕೆ ಸ್ತುತಿಸಂಕೀರ್ತನೆ II


ಸರ್ವಾಧಿಕಾರಿ ನೀನು ಲೋಕಕ್ಕೆಲ್ಲಾ I ಮಹೋನ್ನತನು ನೀನು ದೇವರುಗಳಿಗೆಲ್ಲಾ II


ಪ್ರಭುವೇ ಶಕ್ತಿ, ಎನಗೆ ರಕ್ಷೆ, ಎನ್ನೆದೆಯ ನಂಬುಗೆ I ಎನ್ನ ಮನಃಪೂರ್ವಕ ಕೀರ್ತನೆ, ಆತನಿತ್ತ ನೆರವಿಗೆ II


ಪ್ರಭುವಿನಲ್ಲಿ ನೀವು ಸತತವೂ ಆನಂದಿಸಿರಿ. ಆನಂದಿಸಬೇಕೆಂದು ಮತ್ತೆ ಒತ್ತಿ ಹೇಳುತ್ತೇನೆ.


ಸಜ್ಜನರೇ, ಪ್ರಭುವಿನಲಿ ಆನಂದಿಸಿರಿ I ಆತನ ಶ್ರೀನಾಮವನು ಕೊಂಡಾಡಿರಿ II


ಹೇ ಪ್ರಭೂ, ನಿನ್ನ ಗುಣಗಾನ ಮಂಗಳಕರ I ಪರಾತ್ಪರನೆ, ನಿನ್ನ ನಾಮಭಜನೆ ಹಿತಕರ II


ಪರಾತ್ಪರ ದೇವರು ನಿಮ್ಮ ತಂದೆಯಾದ ನೆಬೂಕದ್ನೆಚ್ಚರ್ ಅವರಿಗೆ ರಾಜ್ಯ ಮಹತ್ವವನ್ನು ಹಾಗೂ ಮಾನ ಸನ್ಮಾನಗಳನ್ನು ದಯಪಾಲಿಸಿದ್ದರು.


ನಿನ್ನ ಕಾರ್ಯಗಳಿಂದ ಪ್ರಭು, ನನ್ನನ್ನು ಆನಂದಗೊಳಿಸಿರುವೆ I ನಿನ್ನಾ ಕಾರ್ಯಗಳ ನೋಡಿ, ನಾನು ಉಲ್ಲಾಸದಿಂದ ಹಾಡುವೆ II


ಬರುವೆನಾಗ ನಿನ್ನ ಬಲಿಪೀಠದ ಬಳಿಗೆ I ನನ್ನಾನಂದ ನಿಧಿಯಾದ ನಿನ್ನ ಸನ್ನಿಧಿಗೆ I ವೀಣೆ ನುಡಿಸಿ ದೇವಾ, ನಿನ್ನ ಸ್ತುತಿಸಲಿಕೆ II


ಸುತ್ತಲು ನೆರೆದಿಹ ಶತ್ರುಗಳ ನಡುವೆ ತಲೆಯೆತ್ತಿ ನಡೆವೆನು I ದೇವಾಲಯದೊಳು ಜಯಜಯ ಘೋಷದೊಡನೆ ಬಲಿಗಳನರ್ಪಿಸುವೆನು I ಪ್ರಭುವಿಗೆ ಹಾಡುವೆನು, ವಾದ್ಯ ನುಡಿಸುತ ಕೊಂಡಾಡುವೆನು II


ದನಿಯೆತ್ತಿ ನಿನಗೆ ಧನ್ಯಗೀತೆ ಹಾಡುವೆನಯ್ಯಾ I ನಿನ್ನದ್ಭುತ ಕಾರ್ಯಗಳೆಲ್ಲವನು ಘೋಷಿಸುವೆನಯ್ಯಾ II


ಮಾಡುವೆ ದೇವಾ, ನಿನ್ನ ಗುಣಗಾನವನು ಶ್ರದ್ಧೆಯಿಂದ I ಘನಪಡಿಸುವೆ ಸ್ವಾಮಿ, ನಿನ್ನ ಶ್ರೀನಾಮವನು ಅನವರತ II


ಪ್ರಸಿದ್ಧಪಡಿಸಿರಿ ಆತನ ಘನತೆಯನು ರಾಷ್ಟ್ರಗಳಿಗೆ I ಆತನದ್ಭುತ ಕಾರ್ಯಗಳನು ಸಕಲ ಜನಾಂಗಗಳಿಗೆ II


ಹೃದಯಪೂರ್ವಕ ವಂದನೆ ಪ್ರಭು ನಿನಗೆ I ದೇವರುಗಳೆದುರಿಗೆ ನನ್ನ ಕೀರ್ತನೆ ನಿನಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು