Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 9:20 - ಕನ್ನಡ ಸತ್ಯವೇದವು C.L. Bible (BSI)

20 ಮೂಡಿಸು ಹೇ ಪ್ರಭೂ, ಅವರಲಿ ಭಯಭ್ರಾಂತಿಯನು I ಕಲಿಸು ಜನಾಂಗಕೆ ತಾವು ಹುಲು ಮಾನವರೆಂಬುದನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು; ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು; ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋವನೇ, ಅವರಿಗೆ ಭಯಹುಟ್ಟಿಸು; ತಾವು ಕೇವಲ ಮನುಷ್ಯರೆಂಬುದನ್ನು ಅವರು ಗ್ರಹಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೆಹೋವ ದೇವರೇ, ಅವರನ್ನು ಭಯದಲ್ಲಿರಿಸಿರಿ; ರಾಷ್ಟ್ರಗಳು ತಾವು ಮನುಷ್ಯರೇ ಎಂದು ತಿಳಿದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 9:20
14 ತಿಳಿವುಗಳ ಹೋಲಿಕೆ  

ಈಜಿಪ್ಟಿನವರು ಕೇವಲ ಮನುಷ್ಯರೇ ಹೊರತು ದೇವರಲ್ಲ. ಅವರ ಅಶ್ವಗಳು ಮೂಳೆಮಾಂಸವೇ ಹೊರತು ಆಧ್ಯಾತ್ಮಿಕ ದಿವ್ಯಶಕ್ತಿಯಲ್ಲ. ಸರ್ವೇಶ್ವರ ಕೈಯೆತ್ತುವಾಗ ಅದಕ್ಕೆ ವಿರುದ್ಧ ಸಹಾಯ ಮಾಡಿದ ಅವನು ಮುಗ್ಗರಿಸುವನು. ಆ ಸಹಾಯ ಪಡೆದ ಅವನು ಬಿದ್ದುಹೋಗುವನು. ಎಲ್ಲರೂ ಒಟ್ಟಿಗೆ ಅಳಿದುಹೋಗುವರು.


ನರಮಾನವರೆಲ್ಲರು ಬರೇ ಉಸಿರು I ನರಾಧಿಪತಿಗಳು ತೀರಾ ಹುಸಿಯು I ತ್ರಾಸಿನಲಿ ತೂಗಲು ಅವರೆಲ್ಲರು I ಉಸಿರಿಗಿಂತಲೂ ಅತ್ಯಂತ ಹಗುರು II


ನಾನು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡುವೆನು. ಹೀಗೆ ನಾನು ಅವರಿಗೆ ಒಳಿತನ್ನು ಮಾಡುವುದನ್ನು ಬಿಡೆನು. ನನ್ನ ಬಗ್ಗೆ ಅವರ ಹೃದಯದಲ್ಲಿ ಭಯಭಕ್ತಿ ನೆಲಸುವಂತೆ ಮಾಡುವೆನು. ಆಗ ಅವರು ನನ್ನನ್ನು ಬಿಟ್ಟು ಅಗಲಿಹೋಗರು.


ಅರಸರ ದರ್ಪವನಡಗಿಸಿಬಿಡುವನು I ಭೂಪತಿಗಳಿಗೋ ಕಂಪನ ಕೊಡುವನು II


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಮೆಂಫೀಸ್‍ನ ವಿಗ್ರಹಗಳನ್ನೆಲ್ಲ ಒಡೆದು, ಕೊನೆಗಾಣಿಸುವೆನು; ಈಜಿಪ್ಟ್ ದೇಶದಲ್ಲಿ ಇನ್ನು ಯಾವ ಪ್ರಭುವೂ ಇರನು; ನಾನು ಆ ದೇಶಕ್ಕೆ ಭಯವನ್ನೊಡ್ಡುವೆನು.


ನಿನ್ನನ್ನು ಸಂಹರಿಸುವವನೆದುರಿಗೆ ನಿಂತು, ‘ನಾನು ದೇವರು’ ಎಂದು ಹೇಳಬಲ್ಲೆಯಾ? ಹತಿಸುವವನ ಕೈಗೆ ನೀನು ಎಂದಿಗೂ ದೇವರಲ್ಲ, ನರಪ್ರಾಣಿಯೇ!


ಲೋಕದಲ್ಲಿರುವ ಎಲ್ಲ ಜನಗಳಿಗೂ ಇಂದಿನಿಂದ ನಿಮ್ಮ ಬಗ್ಗೆ ದಿಗಿಲೂ ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಗಡಗಡನೆ ನಡುಗಿ ಸಂಕಟಪಡುವರು,’ ಎಂದು ಹೇಳಿದರು.


ನೀವು ಹೋಗುವ ಎಲ್ಲ ಕಡೆಯಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನು ಹುಟ್ಟಿಸಿ, ಕಳವಳವನ್ನು ಉಂಟುಮಾಡಿ, ನಿಮ್ಮನ್ನು ವಿರೋಧಿಸುವವರು ಓಡಿಹೋಗುವಂತೆ ಮಾಡುವೆನು.


“ನರಪುತ್ರನೇ, ನೀನು ಟೈರ್ ನಗರದ ರಾಜನಿಗೆ ಹೀಗೆ ನುಡಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಗರ್ವದಿಂದ ‘ಆಹಾ, ನಾನೆ ದೇವರು, ಸಮುದ್ರ ಮಧ್ಯೆ ದೇವರ ಆಸನವನ್ನೇ ಅಲಂಕರಿಸಿದ್ದೇನೆ’, ಎಂದುಕೊಂಡೆ. ನೀನು ನಿನ್ನ ದೇವರಿಗೆ ಸಮನಾಗಿಸಿಕೊಂಡೆಯೋ? ನೀನು ಎಂದಿಗೂ ದೇವರಲ್ಲ, ನೀನೊಬ್ಬ ನರಪ್ರಾಣಿಯಷ್ಟೆ.


ಭಯಭೀತಿ ಅವರನ್ನು ಆವರಿಸಿದೆ ನಿನ್ನ ಭುಜಬಲ ನೋಡಿ ಸ್ತಬ್ದರಾಗಿಹರವರು ಕಲ್ಲಿನಂತೆ.


ಆಸನು ಅವನನ್ನು ಎದುರುಗೊಳ್ಳಲು ಹೋದನು. ಮಾರೇಷದ ಬಳಿಯಲ್ಲಿದ್ದ ಚೆಫಾತಾ ಬಯಲಿನಲ್ಲಿ ಉಭಯರೂ ವ್ಯೂಹಕಟ್ಟಿದರು.


ಜಯ ವಿಜಯ ಲಭಿಸುವುದು ಪ್ರಭುವಿನಿಂದಲೆ I ನಿನ್ನಾಶೀರ್ವಾದವಿರಲಿ, ಪ್ರಭು, ಪ್ರಜೆಯ ಮೇಲೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು