Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 9:3 - ಕನ್ನಡ ಸತ್ಯವೇದವು C.L. Bible (BSI)

3 ನಿನ್ನ ಕಂಡು ನನ್ನ ವೈರಿಗಳು ಗೈದರು ಪಲಾಯನ I ಎದ್ದು ಬಿದ್ದು ಅವರೆಲ್ಲರೂ ಹೊಂದಿದರು ವಿನಾಶನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನ್ನ ಹಗೆಗಳು ನಿನ್ನ ಎದುರಿನಿಂದ ಹಿಂದಿರುಗಿ ಎಡವಿಬಿದ್ದು ಹಾಳಾದರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನನ್ನ ಹಗೆಗಳು ನಿನ್ನ ಎದುರಿನಿಂದ ಹಿಂದಿರುಗಿ ಎಡವಿಬಿದ್ದು ಹಾಳಾದರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನನ್ನ ವೈರಿಗಳು ನಿನ್ನ ಎದುರಿನಿಂದ ಹಿಂತಿರುಗಿ ಓಡಿಹೋದರು. ಆದರೆ ಅವರು ಬಿದ್ದು ನಾಶವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನನ್ನ ಶತ್ರುಗಳು ಹಿಂದಿರುಗಿ ಓಡುವರು; ಅವರು ನಿಮ್ಮ ಮುಂದೆ ಎಡವಿಬಿದ್ದು ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 9:3
9 ತಿಳಿವುಗಳ ಹೋಲಿಕೆ  

ಅದನು ಬೆರಣಿಯಂತೆ ಸುಟ್ಟುಹಾಕಿದವರಾದರೋ I ನಿನ್ನ ಕೋಪದೃಷ್ಟಿಯಿಂದಲೆ ನಾಶವಾಗುವರು II


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ಇವರು ಪ್ರಭುವಿನ ಸನ್ನಿಧಿಯಿಂದಲೂ ಅವರ ಪ್ರಭಾವದ ಮಹಿಮೆಯಿಂದಲೂ ಬಹಿಷ್ಕೃತರಾಗಿ, ನಿತ್ಯದಂಡನೆಗೆ ಗುರಿಯಾಗುವರು.


ನೀನಾದರೋ ದೇವಾ, ಮಹಾಭಯಂಕರನು I ಸಿಟ್ಟೇರಿದ ನಿನ್ನ ಮುಂದೆ ಯಾವನು ನಿಂತಾನು? II


ನಮ್ಮ ನಿರೀಕ್ಷೆಗೆ ಮೀರಿದ ಮಹತ್ಕಾರ್ಯಗಳನ್ನು ನಡೆಸಿ, ನಿಮ್ಮ ನಾಮಮಹಿಮೆಯನ್ನು ನಿಮ್ಮ ಶತ್ರುಗಳಿಗೆ ಪ್ರದರ್ಶಿಸಿ, ಅನ್ಯರಾಷ್ಟ್ರಗಳನ್ನು ನಡುಗಿಸಲಾರಿರಾ? ಹೌದು, ನೀವು ಇಳಿದುಬಂದು, ಬೆಟ್ಟಗುಡ್ಡಗಳು ನಡುಗಿದರೆ ಎಷ್ಟೋ ಲೇಸು.


ಪ್ರಭುವನೆ ನಿನ್ನಾಶ್ರಯವಾಗಿಸಿಕೊಂಡಿರುವುದರಿಂದ I ಪರಾತ್ಪರನನೆ ನಿನ್ನ ನಿವಾಸ ಆಗಿಸಿಕೊಂಡದ್ದರಿಂದ II


ಪ್ರಾತಃಕಾಲದಲೆ ನಿನ್ನ ಪ್ರೀತಿಯನು I ರಾತ್ರಿಕಾಲದಲೆ ನಿನ್ನ ಸತ್ಯತೆಯನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು