Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 9:5 - ಕನ್ನಡ ಸತ್ಯವೇದವು C.L. Bible (BSI)

5 ಭ್ರಷ್ಟರನು ದಂಡಿಸಿದೆ, ರಾಷ್ಟ್ರಗಳನು ಖಂಡಿಸಿದೆ I ಎಂದೆಂದೂ ಹೆಸರಿಲ್ಲದಂತೆ ಅವರನು ಅಳಿಸಿಹಾಕಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀನು ಜನಾಂಗಗಳನ್ನು ಹೆದರಿಸಿ ದುಷ್ಟರನ್ನು ನಾಶ ಮಾಡಿದ್ದಿ, ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀನು ಜನಾಂಗಗಳನ್ನು ಭಂಗಿಸಿ ದುಷ್ಟರನ್ನು ನಾಶಮಾಡಿದ್ದೀ; ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದೀ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀನು ಜನಾಂಗಗಳನ್ನು ಟೀಕಿಸಿ ಆ ದುಷ್ಟರನ್ನು ನಾಶಮಾಡಿದೆ. ನೀನು ಅವರ ಹೆಸರುಗಳನ್ನು ಜೀವಿತರ ಪಟ್ಟಿಯಿಂದ ಶಾಶ್ವತವಾಗಿ ಅಳಿಸಿಹಾಕಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ರಾಷ್ಟ್ರಗಳನ್ನು ಖಂಡಿಸಿ ದುಷ್ಟರನ್ನು ದಂಡಿಸಿದ್ದೀರಿ; ಅವರ ಹೆಸರನ್ನು ಯುಗಯುಗಾಂತರಗಳವರೆಗೂ ಅಳಿಸಿಬಿಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 9:5
24 ತಿಳಿವುಗಳ ಹೋಲಿಕೆ  

ಸಜ್ಜನರ ಸ್ಮರಣೆ ಮಂಗಳಕರ; ದುರ್ಜನರ ಹೆಸರು ಅಸಹ್ಯಕರ.


ರಾಷ್ಟ್ರಗಳನ್ನು ಹೊಡೆದುರುಳಿಸುವಂಥ ಹರಿತವಾದ ಖಡ್ಗವೊಂದು ಆತನ ಬಾಯಿಂದ ಹೊರಟಿತು. ಆತನು ಕಬ್ಬಿಣದ ದಂಡದಿಂದ ಅವುಗಳ ಆಳ್ವಿಕೆ ನಡೆಸುವನು. ಸರ್ವಶಕ್ತ ದೇವರ ರೋಷವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.


ನಾನು ಕಾರ್ಯತತ್ಪರನಾಗುವ ದಿನದಂದು ನೀವು ದುಷ್ಟರನ್ನು ತುಳಿದುಬಿಡುವಿರಿ. ಅವರು ನಿಮ್ಮ ಕಾಲಡಿಯ ಧೂಳಿಯಾಗುವರು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಇವರು ನನ್ನ ಆಜ್ಞೆಗೆ ಬಗ್ಗದವರು. ಬಿಡು, ನಾನು ಅವರನ್ನು ನಾಶಮಾಡಿ ಅವರ ಹೆಸರನ್ನು ಭೂಮಿಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾಬಲಿಷ್ಠ ಜನಾಂಗವೊಂದು ನಿನ್ನಿಂದುಂಟಾಗುವಂತೆ ಮಾಡುವೆನು,’ ಎಂದು ಹೇಳಿದರು.


ಸಜ್ಜನರ ಬೆಳಕು ಪ್ರಜ್ವಲಿಸುವುದು; ದುರ್ಜನರ ದೀಪವು ಆರಿಹೋಗುವುದು.


ಈ ಪರಿ ಮುಯ್ಯಿತೀರಿಸಲಿ ಜನಾಂಗಗಳಿಗೆ I ವಿಧಿಸಲಿ ದಂಡನೆಯನು ಅನ್ಯರಾಷ್ಟ್ರಗಳಿಗೆ II


“ಅವರ ದೇವರೆಲ್ಲಿ?” ಎಂದು ಮ್ಲೇಚ್ಛರು ಆಡಿಕೊಳ್ಳುವುದೇಕೆ? I ಆಗಲಿ ಪ್ರತೀಕಾರ ನಿನ್ನ ಸೇವಕರ ರಕ್ತ ಸುರಿಸಿದವರಿಗೆ I ಆಗರ್ಥವಾಗುವುದವರಿಗೆ; ಕಾಣಲಿ ಅದು ನಮ್ಮ ಕಣ್ಗಳಿಗೆ II


ಓಡಿಸಿದನು ಅವರಿಗೆದುರಾಗಿದ್ದ ಜನಾಂಗಗಳನು I ಸೊತ್ತಾಗಿ ಹಂಚಿದನು ಇಸ್ರಯೇಲರಿಗಾ ನಾಡನು I ನೆಲೆಗೊಳಿಸಿದನಾ ಜನಾಂಗದ ಬಿಡಾರದಲಿ ಇವರನು II


ಅಹೀತೋಫೆಲನು ತನ್ನ ಆಲೋಚನೆ ನಡೆಯಲಿಲ್ಲವೆಂದು ತಿಳಿದು, ಕತ್ತೆಗೆ ತಡಿಹಾಕಿಸಿ ಕುಳಿತುಕೊಂಡು ತನ್ನ ಊರಿಗೆ ಹೋಗಿದ್ದನು. ಮನೆಯ ವ್ಯವಸ್ಥೆಮಾಡಿ ಅನಂತರ ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು.


ಹುಸಿ ನುಡಿವವರನು ಪ್ರಭು, ನೀ ನಾಶಮಾಡುವೆ I ಹಿಂಸಕರನು, ವಂಚಕರನು ನೀ ಹೇಸಿಬಿಡುವೆ II


ದೊಂಬಿಯೇಳುವುದೇತಕೆ ಅನ್ಯದೇಶವಿದೇಶಗಳು? I ಕುತಂತ್ರ ಹೂಡುವುದೇಕೆ ಅನ್ಯಜಾತಿಜನಾಂಗಗಳು? II


ಆದುದರಿಂದ ಸೌಲನು ಭಯಭೀತನಾಗಿ ತನ್ನ ಆಯುಧವಾಹಕನಿಗೆ, “ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು; ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನ್ನನ್ನು ತಿವಿದು ಅಪಕೀರ್ತಿಯನ್ನುಂಟುಮಾಡಬಹುದು,” ಎಂದು ಹೇಳಿದನು. ವಾಹಕನು ಹೆದರಿ, “ಒಲ್ಲೆ” ಎಂದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು.


ಆಗ ದಾವೀದನು ಅಬೀಗೈಲಳಿಗೆ, “ಈ ದಿನ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನಿನ್ನನ್ನು ಕಳುಹಿಸಿದ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!


ನಾಬಾಲನು ಸತ್ತನೆಂಬ ವರ್ತಮಾನವನ್ನು ದಾವೀದನು ಕೇಳಿದನು. “ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿ ತೀರಿಸಿದಂಥ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನನ್ನು ಕೆಟ್ಟತನದಿಂದ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದ್ದಾರೆ,” ಎಂದನು. ಅನಂತರ ಅವನು, ಅಬೀಗೈಲಳು ತನಗೆ ಹೆಂಡತಿಯಾಗಬೇಕೆಂದು ದೂತರನ್ನು ಕಳುಹಿಸಿದನು.


ತೀಡುವನು ಕತ್ತಿಯನು, ಹೂಡುವನು ಬಾಣವನು I ಪಡೆಯದಿರೆ ದುರುಳನು ಮನಪರಿವರ್ತನೆಯನು II


ನನ್ನ ಸಿಂಹಾಸನವನ್ನು ಏಲಾಮಿನಲ್ಲಿ ಸ್ಥಾಪಿಸಿ ಆ ನಾಡಿನ ಅರಸನನ್ನೂ ಅಧಿಕಾರಿಗಳನ್ನೂ ಅಳಿಸಿಬಿಡುವೆನು.


“ಸ್ವಾಮೀ, ನೀನೇ ನನ್ನ ಪರವಾಗಿ ವಾದಿಸಿದೆ ನನ್ನ ಪ್ರಾಣವನ್ನು ಉಳಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು