Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 9:6 - ಕನ್ನಡ ಸತ್ಯವೇದವು C.L. Bible (BSI)

6 ನಿಶ್ಶೇಷವಾಗಿ ಹೋದರು ವಿರೋಧಿಗಳು I ನಾಶವಾಗಿ ಹೋದವು ಅವರ ನಗರಗಳು I ಇಲ್ಲವಾದವು ಅವರ ಯಾವ ನೆನಪುಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಶತ್ರುಗಳು ನಿಶ್ಶೇಷವಾದರು; ನೀನು ಕೆಡವಿದ ಅವರ ಪಟ್ಟಣಗಳು ಸಂಪೂರ್ಣವಾಗಿ ಹಾಳಾದವು. ಅವರ ಸ್ಮರಣೆಯೇ ಇಲ್ಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಶತ್ರುಗಳು ನಿಶ್ಶೇಷವಾದರು; ನೀನು ಕೆಡವಿಸಿದ ಅವರ ಕೋಟೆಗಳು ಸಂಪೂರ್ಣವಾಗಿ ಹಾಳಾದವು. ಅವರ ಸ್ಮರಣೆಯೇ ಇಲ್ಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ವೈರಿಗಳು ಇಲ್ಲವಾದರು. ನೀನು ಅವರ ನಗರಗಳನ್ನು ನಾಶಮಾಡಿದೆ! ಈಗ ಹಾಳಾದ ಕಟ್ಟಡಗಳು ಮಾತ್ರ ಉಳಿದಿವೆ; ದುಷ್ಟರನ್ನು ಜ್ಞಾಪಕಕ್ಕೆ ತರುವ ಯಾವುದೂ ಉಳಿದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ವೈರಿಯನ್ನು ವಿನಾಶವು ನಿರಂತರವಾಗಿ ಬೆನ್ನಟ್ಟಿದೆ, ನೀವು ಅವರ ಪಟ್ಟಣಗಳನ್ನು ಕೆಡವಿದ್ದೀರಿ; ಅವರ ಸ್ಮರಣೆಯು ಅವರೊಂದಿಗೇ ನಾಶವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 9:6
27 ತಿಳಿವುಗಳ ಹೋಲಿಕೆ  

ನನ್ನ ಶತ್ರುಗಳೇ, ನನ್ನನ್ನು ನೋಡಿ ಹಿಗ್ಗಬೇಡಿ. ನಾನು ಬಿದ್ದುಹೋದರೂ, ಎದ್ದೇಳುವೆನು; ಕತ್ತಲೆಯಲ್ಲಿ ಕುಳಿತಿದ್ದರೂ ಸರ್ವೇಶ್ವರ ನನಗೆ ಬೆಳಕಾಗುವರು.


ಅದಕ್ಕೆ ಮೋಶೆ ಆ ಜನರಿಗೆ, “ಅಂಜಬೇಡಿ, ಸುಮ್ಮನಿರಿ, ಈ ದಿನ ಸರ್ವೇಶ್ವರ ನಿಮ್ಮನ್ನು ಹೇಗೆ ರಕ್ಷಿಸುತ್ತಾರೆಂದು ನೋಡಿ! ಈ ದಿನ ನೀವು ನೋಡುವ ಈಜಿಪ್ಟಿನವರನ್ನು ಇನ್ನೆಂದಿಗೂ ನೋಡುವುದಿಲ್ಲ.


ಪಿಶಾಚಿಯೂ ಸೈತಾನನೂ ಆಗಿರುವ ಘಟಸರ್ಪವನ್ನು, ಅಂದರೆ ಪುರಾತನ ಸರ್ಪವನ್ನು, ಆತನು ಹಿಡಿದು ಒಂದು ಸಾವಿರ ವರ್ಷಗಳ ಕಾಲ ಬಂಧನದಲ್ಲಿಟ್ಟನು.


ಕಟ್ಟಕಡೆಗೆ ನಿರ್ಮೂಲವಾಗುವ ಶತ್ರುವೆಂದರೆ ಮೃತ್ಯುವೇ.


ಇದನ್ನು ನನ್ನ ಶತ್ರುಗಳು ನೋಡುವರು. “ನಿನ್ನ ದೇವರಾದ ಸರ್ವೇಶ್ವರನೆಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.


“ಲೋಕವನ್ನೆಲ್ಲಾ ನಾಶಮಾಡುವ ಎಲೈ ನಾಶಕ ಪರ್ವತವೇ, ನಾನು ನಿನಗೆ ವಿರುದ್ಧನಾಗಿದ್ದೇನೆ. ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಬಂಡೆಯ ಮೇಲಿಂದ ಕೆಳಕ್ಕೆ ಉರುಳಿಸುವೆನು. ಸುಟ್ಟ ಬೆಟ್ಟವನ್ನಾಗಿಸುವೆನು.


ಇದನ್ನೆಲ್ಲಾ ಬಹುಕಾಲದ ಹಿಂದೆ ಗೊತ್ತು ಮಾಡಿದವನು ನಾನೇ, ಪೂರ್ವಕಾಲದಲ್ಲಿ ನಿರ್ಣಯಿಸಿದುದನ್ನು ಈಗ ನೆರವೇರಿಸಿದ್ದೇನೆ. ಕೋಟೆ ನಗರಗಳನ್ನು ನೀನು ಹಾಳು ದಿಬ್ಬಗಳನ್ನಾಗಿಸಿದೆ, ಆದರೆ ಸಾಧ್ಯವಾಯಿತಿದು ನನ್ನಿಂದಲೇ, ನಿನಗಿದು ತಿಳಿಯದೆಹೋಯಿತೆ?


ನಗರಗಳನು ಕೆಡವಿಸಿದವನು, ನಾಡನು ಕಾಡಾಗಿಸಿದವನು, ಖೈದಿಗಳನು ಬಂಧನದಿಂದ ಬಿಡಿಸಿದವನು ಈತನೇ ಅಲ್ಲವೆ?’ ಎಂದಾಡಿಕೊಳ್ವರು.


ಜಗದೆಲ್ಲೆಡೆ ಕದನ ಕಾಳಗ ನಿಲ್ಲಿಸಿಹನು I ಬಿಲ್ಲು ಭಲ್ಲೆಗಳನು ಮುರಿದು ಹಾಕಿದನು I ರಥಗಳನು ಬೆಂಕಿಯಿಂದ ಸುಟ್ಟುಹಾಕಿದನು II


ದುರ್ಜನರಿಗಾದರೋ ಪ್ರಭು ವಿಮುಖನು I ಅವರ ಹೆಸರನು ಧರೆಯಿಂದ ಅಳಿಸುವನು II


ವಿರೋಧಿಗಳ ಬಾಯನು ಮುಚ್ಚಿಸಿದೆ ಬಾಲ ಬಾಲೆಯರ ಬಾಯಿಂದಲೆ I ಹಗೆಗಳನು ದುರ್ಗದಂತೆ ತಡೆದೆ ಮೊಲೆಗೂಸುಗಳ ನಾಲಿಗೆಯಿಂದಲೆ II


ಎನ್ನ ಬೆನ್ನಟ್ಟಿ ಬರಲಿ ವೈರಿ, ಕಾಲಿಂದೆನ್ನ ಮೆಟ್ಟಿ ತುಳಿಯಲಿ I ಎನ್ನ ಮಾನವನು ಮಣ್ಣುಪಾಲಾಗಿಸಲಿ, ನನ್ನನು ಸೋಲಿಸಿಬಿಡಲಿ II


“ಕೇಳು, ಇದನ್ನೆಲ್ಲಾ ಬಹುಕಾಲದ ಹಿಂದೆ ಗೊತ್ತುಮಾಡಿದವನು ನಾನೇ, ಪೂರ್ವಕಾಲದಲ್ಲಿ ನಿರ್ಣಯಿಸಿದುದನ್ನು ಈಗ ನೆರವೇರಿಸಿದ್ದೇನೆ. ಕೋಟೆ ನಗರಗಳನ್ನು ನೀನು ಹಾಳುದಿಬ್ಬಗಳನ್ನಾಗಿಸಿದೆ. ಆದರೆ ಸಾಧ್ಯವಾಯಿತಿದು ನನ್ನಿಂದಲೇ; ನಿನಗಿದು ತಿಳಿಯದೆ ಹೋಯಿತೆ?


ಇಸ್ರಯೇಲ್ ಯೋಧರು ಸೋತರು; ಸೌಲನೂ ಅವನ ಮಕ್ಕಳೂ ಸತ್ತರು ಎಂಬ ಸಮಾಚಾರವನ್ನು ಕಣಿವೆಯ ಆಚೆಯಲ್ಲೂ ಜೋರ್ಡನಿನ ಆಚೆಯಲ್ಲೂ ವಾಸವಾಗಿದ್ದ ಇಸ್ರಯೇಲರು ಕೇಳಿ ತಮ್ಮ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು.


ದಾವೀದನೂ ಅವನ ಜನರೂ ಮಾರನೆಯ ದಿನ ಚಿಕ್ಲಗ್ ಊರನ್ನು ಸೇರಿದರು. ಅಷ್ಟರೊಳಗೆ ಅಮಾಲೇಕ್ಯರು ದಂಡೆತ್ತಿ ದಕ್ಷಿಣಪ್ರಾಂತ್ಯಕ್ಕೂ ಚಿಕ್ಲಗ್ ಊರಿಗೂ ಬಂದು ಚಿಕ್ಲಗ್ ಊರನ್ನು ಸುಟ್ಟು ಹಾಳುಮಾಡಿದ್ದರು.


ಭಯಭೀತಿ ಅವರನ್ನು ಆವರಿಸಿದೆ ನಿನ್ನ ಭುಜಬಲ ನೋಡಿ ಸ್ತಬ್ದರಾಗಿಹರವರು ಕಲ್ಲಿನಂತೆ.


ಅವನ ಸ್ಮರಣೆ ಅಳಿದುಹೋಗುವುದು ಜಗದಲಿ ಇಲ್ಲವಾಗುವುದು ಅವನ ಹೆಸರು ನಾಡಿನಲಿ.


ಕಿವಿಗೊಡುವನು ಪ್ರಭು ಸಜ್ಜನರ ಮೊರೆಗೆ I ನೆರವೀವನವರ ಕಷ್ಟನಿವಾರಣೆಗೆ II


ಮಡಿದುಹೋದರು ಆ ಒಡೆಯರೆಲ್ಲ ಮರಳಿ ಅವರ ಪ್ರೇತಗಳು ಎದ್ದುಬರುವಂತಿಲ್ಲ. ನೀನವರನು ಬಡಿದು ನಸುಕಿಹಾಕಿರುವೆ ಅವರ ನೆನಪನೆ ಅಳಿಸಿಹಾಕಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು