Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 9:8 - ಕನ್ನಡ ಸತ್ಯವೇದವು C.L. Bible (BSI)

8 ಜಗಕೆ ನ್ಯಾಯ ತೀರಿಸುವನು ನೀತಿಗನುಸಾರ I ಜನಾಂಗಕೆ ತೀರ್ಪು ಕೊಡುವನು ಸತ್ಯಕ್ಕನುಸಾರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು; ಆತನು ಜನಾಂಗಗಳಿಗೆ ಸತ್ಯಕ್ಕನುಸಾರವಾಗಿ ತೀರ್ಪುಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯತೀರಿಸುವವನು; ಆತನು ಜನಾಂಗಗಳಿಗೆ ಸತ್ಯವಾಗಿಯೇ ತೀರ್ಪುಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆತನು ಭೂನಿವಾಸಿಗಳಿಗೆಲ್ಲಾ ನ್ಯಾಯವಾಗಿ ತೀರ್ಪುಮಾಡುವನು. ಆತನು ಜನಾಂಗಗಳಿಗೆಲ್ಲಾ ಯಥಾರ್ಥವಾಗಿ ತೀರ್ಪುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವರು; ಪ್ರಜೆಗಳಿಗೆ ಯಥಾರ್ಥವಾದ ತೀರ್ಪು ನೀಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 9:8
15 ತಿಳಿವುಗಳ ಹೋಲಿಕೆ  

ಪ್ರಭು ಧರೆಗೆ ನ್ಯಾಯತೀರಿಸಲು ಬಂದೇ ಬರುವನು ಖರೆಯಾಗಿ I ಜಗಕು, ಜನತೆಗು ತೀರ್ಪಿಡುವನು ನೀತಿನಿಯಮಾನುಸಾರವಾಗಿ II


ಏಕೆನೆ ಬರುವನಾತ ಇಹಲೋಕಕೆ ನ್ಯಾಯತೀರಿಸಲು I ಜಗಕು, ಜನತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು II


ನಾನು ಬೋಧಿಸುವ ಶುಭಸಂದೇಶದ ಪ್ರಕಾರ, ದೇವರು ಯೇಸುಕ್ರಿಸ್ತರ ಮುಖಾಂತರ ಮಾನವನ ಗುಟ್ಟುಗಳನ್ನು ರಟ್ಟುಮಾಡಿ, ತೀರ್ಪುಕೊಡುವ ದಿನ ಬಂದೇ ಬರುತ್ತದೆ. ಆ ದಿನ ಇದೆಲ್ಲಾ ಸಂಭವಿಸುತ್ತದೆ.


ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”


ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


ಶಕ್ತಿಸ್ವರೂಪಿಯೇ, ನ್ಯಾಯಪ್ರಿಯ ರಾಜನೇ I ನ್ಯಾಯನೀತಿ, ಯಥಾರ್ಥತೆಗೆ ಸ್ಥಾಪಕ ನೀನೆ I ಇಸ್ರಯೇಲ ವಂಶಕ್ಕಿದನು ಮನದಟ್ಟಾಗಿಸಿದವ ನೀನೆ II


ನ್ಯಾಯತೀರ್ಪು ಮರಳಿ ತಿರುಗುವುದು ನೀತಿಯತ್ತ I ನೇರಮನಸ್ಕರೆಲ್ಲ ಮಾಡುವರು ಅದನು ಸಮರ್ಥ II


ದೇವನೇ ಸತ್ಯಸ್ವರೂಪಿ, ನ್ಯಾಯಾಧಿಪತಿ I ಇದನು ಸಾರಿ ಹೇಳಲಿ ಆಕಾಶ ಪ್ರಕೃತಿ II


ಯುಗಯುಗಾಂತರಕ್ಕೂ ರಾಜ್ಯವಾಳುವವನು ಸರ್ವೇಶ್ವರನೇ!


ಪ್ರಭುವಿನ ಶ್ರೀಸಾಮ್ರಾಜ್ಯವು ಅನವರತ I ಆತನ ನಾಡಲಿ ಮುಗಿಯಿತು ಅನ್ಯಜನರ ಉಳಿತ II


ಜಲಪ್ರಳಯದೊಳು ಪ್ರಭು ಆಸೀನನಾಗಿಹನು I ಯುಗಯುಗಾಂತರಕು ಅರಸನಾಗಿ ಆಳುವನು II


ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು