Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 9:9 - ಕನ್ನಡ ಸತ್ಯವೇದವು C.L. Bible (BSI)

9 ದಲಿತರಿಗೆ ಪ್ರಭು ದುರ್ಗಸ್ಥಾನ I ಆಪತ್ತಿನಲ್ಲಿ ಆಶ್ರಯ ಸ್ಥಾನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನು ಕುಗ್ಗಿದವರಿಗೆ ಆಶ್ರಯವೂ, ಆಪತ್ಕಾಲದಲ್ಲಿ ದುರ್ಗವೂ ಆಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನು ಕುಗ್ಗಿಹೋದವರಿಗೆ ಆಶ್ರಯವೂ ಆಪತ್ಕಾಲದಲ್ಲಿ ದುರ್ಗವೂ ಆಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ಕುಗ್ಗಿಹೋದವರಿಗೆ ಆಶ್ರಯಸ್ಥಾನವೂ ಇಕ್ಕಟ್ಟಿನಲ್ಲಿರುವವರಿಗೆ ಆಶ್ರಯದುರ್ಗವೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರು ಕುಗ್ಗಿದವರಿಗೆ ಆಶ್ರಯವಾಗಿರುವರು, ಇಕ್ಕಟ್ಟಿನ ದಿವಸಗಳಲ್ಲಿ ಭದ್ರಕೋಟೆಯಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 9:9
26 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ನಾಮ ಬಲವಾದ ಗೋಪುರ; ಅದರೊಳಗೆ ಓಡಿ ಆಶ್ರಯ ಪಡೆದರೆ ಸುಭದ್ರ.


ಒಳ್ಳೆಯವನು ಸರ್ವೇಶ್ವರ ಸಂಕಟದಲಿ ಆಶ್ರಯದುರ್ಗ ಮೊರೆಹೊಕ್ಕವರನು ಚೆನ್ನಾಗಿ ಬಲ್ಲನಾತ.


ನೀನೆ ನನಗೆ ಮರೆಯು, ಆಪತ್ತಿನಲಾಸರೆಯು I ನನ್ನನು ಆವರಿಸುವ ಉದ್ಧಾರಕ ನಾದವು II


ದೇವರೆಮಗೆ ಆಶ್ರಯ ದುರ್ಗ I ಸಂಕಟದಲಿ ಸಿದ್ಧ ಸಹಾಯಕ II


ಜನರೇ, ಸದಾ ಭರವಸೆ ಇಡಿ ದೇವನಲಿ I ತೋಡಿಕೊಳ್ಳಿ ನಿಮ್ಮ ಅಳಲನು ಆತನಲಿ II


ಸಜ್ಜನರ ಜೀವೋದ್ಧಾರ ಪ್ರಭುವಿನಿಂದ I ಆಪತ್ಕಾಲದಲಿ ಆಶ್ರಯ ಆತನಿಂದ II


ಪ್ರಭುವೇ ನನ್ನ ಕಲ್ಲುಕೋಟೆ, ನನಗೆ ವಿಮೋಚಕ I ಆತನೇ ನನ್ನ ದೇವ, ನನ್ನಾಶ್ರಯ ದುರ್ಗ I ಆತನೆನಗೆ ಗುರಾಣಿ, ಗಿರಿ, ರಕ್ಷಣಾಶೃಂಗ II


“ಓ ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆ.


ನಾನು ನಿನಗೆ ಪವಿತ್ರಾಲಯ ಆಗಿರುವೆನು. ಆದರೆ ಇಸ್ರಯೇಲಿನ ಎರಡು ಕುಲಗಳಿಗೆ ಎಡವುವ ಕಲ್ಲಾಗುವೆನು, ಮುಗ್ಗರಿಸುವ ಬಂಡೆಯಾಗುವೆನು. ಜೆರುಸಲೇಮಿನ ನಿವಾಸಿಗಳನ್ನು ಹಿಡಿಯುವ ಬಲೆಯೂ ಬೋನೂ ಆಗುವೆನು.


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದುರ್ಗವು II


ಸಂಕಟ ಬಂದಾಗ, ಪ್ರಭು ನಿನಗೆ ಕಿವಿಗೊಡಲಿ I ಯಕೋಬ ದೇವರ ನಾಮ, ನಿನ್ನ ಕಾಪಾಡಲಿ II


ಆದಿಯಿಂದ ದೇವರೇ ನಿಮಗೆ ಶ್ರೀನಿವಾಸ ಆತನ ಹಸ್ತವೇ ನಿಮಗೆ ನಿತ್ಯಾಧಾರ! ಶತ್ರುಗಳನು ಹೊರಡಿಸುವನು ನಿಮ್ಮ ಬಳಿಯಿಂದ ಅವರನು ಸಂಹರಿಸಲು ಆಜ್ಞಾಪಿಸಿಹನು ಆತ.


ದೇವರ ವಾಗ್ದಾನ ಮತ್ತು ಶಪಥ ಇವೆರಡೂ ಅಚಲವಾದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಮೋಸಮಾಡುವವರೇ ಅಲ್ಲ. ಇದರಿಂದಾಗಿ, ದೇವರ ಆಶ್ರಯಕ್ಕಾಗಿ ಧಾವಿಸಿಬಂದಿರುವ ನಾವು, ನಮ್ಮ ಮುಂದಿರಿಸಿರುವ ನಂಬಿಕೆ ನಿರೀಕ್ಷೆಯಲ್ಲಿ ಸ್ಥಿರವಾಗಿ ನಿಲ್ಲಲು ಬಲವಾದ ಪ್ರೋತ್ಸಾಹ ದೊರೆತಂತಾಯಿತು.


ಪ್ರತಿಯೊಬ್ಬನೂ ಬಿರುಗಾಳಿಗೆ ತಡೆಯಂತೆ, ಬಿರುಮಳೆಗೆ ಬಿಡಾರದಂತೆ, ಮರುಭೂಮಿಯಲ್ಲಿ ಜಲಧಾರೆಯಂತೆ, ಬೆಂಗಾಡಿನಲ್ಲಿ ಭಾರಿಬಂಡೆಯ ನೆರಳಿನಂತೆ ಇರುವನು.


ಶತ್ರುವಿರುದ್ಧ ಸಹಾಯಮಾಡಯ್ಯಾ I ಮಾನವನ ನೆರವು ನಮಗೆ ಬರಡಯ್ಯಾ II


ಅಕ್ಕಪಕ್ಕದಲಿ ಸಹಾಯಕರಾರೂ ಇಲ್ಲ I ಆಶ್ರಯರಹಿತ, ಹಿತಚಿಂತಕರಾರೂ ನನಗಿಲ್ಲ II


ಅದರ ಕೋಟೆಕೊತ್ತಲಗಳ ನಡುವೆ ದೇವನು I ತಾನೇ ಸುಭದ್ರ ದುರ್ಗವೆಂದು ತೋರಿಹನು II


ಉಲ್ಲಾಸಿಸಲಿ ಹೊಲಗದ್ದೆಗಳು ಪೈರುಪಚ್ಚೆಗಳು I ಹರ್ಷಧ್ವನಿಗೈಯಲಿ ಕಾಡಿನ ಫಲವೃಕ್ಷಗಳು II


ಮಾನವರ ಹೃನ್ಮನವನರಿತಿಹ ಸತ್ಯಸ್ವರೂಪಿ ದೇವಾ, I ದುರುಳರ ಕೆಡುಕನಳಿಸಯ್ಯಾ, ಸತ್ಯವಂತರನು ನೀ ಉಳಿಸಯ್ಯಾ II


ನಿನ್ನ ಕೀರ್ತಿಸಲಿ ದೇವಾ, ಜನರು I ಸಂಕೀರ್ತಿಸಲಿ ಅವರೆಲ್ಲರೂ II


ಪ್ರಭು ರಾಜನೆಂದು ಸಾರಿರಿ ರಾಷ್ಟ್ರಗಳಿಗೆ I ಕದಲದ ಸ್ಥಿರತೆಯನು ಇತ್ತಿಹನು ಧರೆಗೆ I ನ್ಯಾಯವಾದ ತೀರ್ಪು ಕೊಡುವನು ಜನಾಂಗಕೆ II


ಏಕೆನೆ ಬರುವನಾತ ಇಹಲೋಕಕೆ ನ್ಯಾಯತೀರಿಸಲು I ಜಗಕು, ಜನತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು