Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 90:10 - ಕನ್ನಡ ಸತ್ಯವೇದವು C.L. Bible (BSI)

10 ನಮ್ಮ ಆಯುಷ್ಕಾಲ ಎಪ್ಪತ್ತು ವರುಷ I ಹೆಚ್ಚಾಗಿದ್ದರೆ ಬಲ, ಎಂಬತ್ತು ವರುಷ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ, ಬಲ ಹೆಚ್ಚಿದರೆ ಎಂಭತ್ತು; ಕಷ್ಟಸಂಕಟಗಳೇ ಅದರ ಆಡಂಬರ. ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ; ಬಲ ಹೆಚ್ಚಿದರೆ ಎಂಭತ್ತು. ಕಷ್ಟಸಂಕಟಗಳೇ ಅದರ ಆಡಂಬರ ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ; ಬಲಹೆಚ್ಚಿದರೆ ಎಂಭತ್ತು ವರ್ಷ. ಕಷ್ಟಸಂಕಟಗಳೇ ಅದರ ಆಡಂಬರ. ಬಹುಬೇಗನೆ ನಮ್ಮ ಜೀವಿತಗಳು ಕೊನೆಗೊಳ್ಳುತ್ತವೆ! ನಾವು ಹಾರಿ ಹೋಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಮ್ಮ ಜೀವನದ ದಿನಗಳು ಎಪ್ಪತ್ತು ವರ್ಷ, ಬಲದಿಂದಿದ್ದರೆ ಎಂಬತ್ತು ವರ್ಷ. ಆದಾಗ್ಯೂ ಅವುಗಳ ಉತ್ತಮ ವರ್ಷಗಳು ಕಷ್ಟವೂ ಪ್ರಯಾಸವೂ ಆಗಿವೆ. ನಮ್ಮ ದಿನಗಳು ಬೇಗ ತೀರಿಹೋಗುತ್ತವೆ. ನಾವು ಹಾರಿಹೋಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 90:10
17 ತಿಳಿವುಗಳ ಹೋಲಿಕೆ  

ನಿಮ್ಮ ಜೀವಮಾನ ಎಷ್ಟುಮಾತ್ರದ್ದು? ಈಗ ಕಾಣಿಸಿಕೊಂಡು ಆಮೇಲೆ ಕಾಣದೆಹೋಗುವ ಹೊಗೆಯಂತೆ ಅದು.


ನೆನೆದುಕೊಂಡನಾತ ಅವರು ಕೇವಲ ನರರೆಂದು I ತಿಳಿದುಕೊಂಡನು ಮರಳಿಬಾರದ ಉಸಿರವರೆಂದು II


ಈಗ ನಾನು ಎಂಬತ್ತು ವರ್ಷದವನು. ಒಳ್ಳೆಯದು ಕೆಟ್ಟದು ಇವುಗಳ ಭೇದ ನನಗಿನ್ನು ತಿಳಿಯುವುದೇ? ನಿಮ್ಮ ಸೇವಕನಾದ ನನಗೆ ಇನ್ನು ಅನ್ನಪಾನಗಳ ರುಚಿ ಗೊತ್ತಾಗುವುದೇ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೆಯೇ? ನಾನು ನನ್ನ ಒಡೆಯರಾದ ಅರಸರಿಗೆ ಸುಮ್ಮನೆ ಏಕೆ ಹೊರೆಯಾಗಿರಬೇಕು?


ಯಕೋಬನು, “ನನ್ನ ಬಾಳಿನ ಪಯಣದ ದಿನಗಳು ನೂರ ಮೂವತ್ತು ವರ್ಷಗಳಷ್ಟೇ. ಎಣಿಕೆಯಲ್ಲಿ ಅವು ಕಮ್ಮಿ; ಕಷ್ಟದುಃಖದಲ್ಲಿ ಜಾಸ್ತಿ; ನನ್ನ ಪೂರ್ವಜರು ಬಾಳಿದಷ್ಟು ವರ್ಷಗಳು ನನಗಾಗಿಲ್ಲ,” ಎಂದು ಹೇಳಿ


ಮೋಶೆ ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ, ಅವನ ಜೀವಕಳೆ ಕುಂದಿಹೋಗಿರಲಿಲ್ಲ.


ಅರಸ ದಾವೀದನು ಹಣ್ಣು ಹಣ್ಣು ಮುದುಕನಾದ; ಎಷ್ಟು ಕಂಬಳಿಗಳನ್ನು ಹೊದಿಸಿದರೂ ಅವನಿಗೆ ಬೆಚ್ಚಗಾಗುತ್ತಿರಲಿಲ್ಲ.


ಅವರು ಮೇಲೇರಿ ಮಾಯವಾಗುತ್ತಾರೆ ಕೊಂಚಕಾಲದ ಮೇಲೆ ಕೊಯ್ಯಲ್ಪಡುತ್ತಾರೆ ಸುಗ್ಗಿಯ ತೆನೆಗಳಂತೆ ಕೂಡಿಸಲ್ಪಡುತ್ತಾರೆ ಕೆಳಗೆ ಬಿದ್ದ ಕಾಳಿನಂತೆ.


ಮನುಜನೋ ಬಿದ್ದಿರುತ್ತಾನೆ ಸತ್ತು ಕೊನೆಯುಸಿರೆಳೆದಾಗ ಎಲ್ಲವು ಮುಗಿಯಿತು.


ಕುರುಬನು ತನ್ನ ಗುಡಿಸಲನ್ನು ಕಿತ್ತುಹಾಕುವಂತೆ ನೇಯಿಗೆಯವನು ತನ್ನ ಹಾಸನ್ನು ಸುತ್ತುವಂತೆ ಮಗ್ಗದಿಂದ ಅವನು ದಾರವನ್ನು ಕತ್ತರಿಸುವಂತೆ ಬೆಳಗುಬೈಗಿನೊಳಗೆ ನನ್ನ ಆಯುಷ್ಯವನ್ನು ನೀ ಮುಗಿಸುತ್ತಿರುವೆನೆಂದೆ.


ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು.


ಸ್ವಪ್ನದಂತೆ ಅವನು ಸಿಗದೆ ಹಾರಿಹೋಗುವನು ರಾತ್ರಿಯ ಕನಸಿನಂತೆ ಓಡಿಹೋಗುವನು.


ಆಗ ಸರ್ವೇಶ್ವರ ಸ್ಸ್ವಾಮಿ, “ನನ್ನ ಆತ್ಮವು ಮನುಷ್ಯನಿಗೆ ಶಾಶ್ವತವಾಗಿ ಹೊಣೆಯಾಗಿರಲಾರದು. ಭ್ರಷ್ಟರಾದ ಅವರು ಮರ್ತ್ಯರು. ಅವರ ಆಯುಷ್ಯ ಕೇವಲ ನೂರಿಪ್ಪತ್ತು ವರ್ಷ ಇರಲಿ” ಎಂದರು.


ಅರವತ್ತು ವರ್ಷ ವಯಸ್ಸು ದಾಟಿದ ಪುರುಷನ ಪರವಾಗಿ ಹದಿನೈದು ಬೆಳ್ಳಿನಾಣ್ಯಗಳನ್ನು ಸ್ತ್ರೀಯ ಪರವಾಗಿ ಹತ್ತು ಬೆಳ್ಳಿನಾಣ್ಯಗಳನ್ನು ಕೊಡಿಸಬೇಕು.


ಮೋಶೆ ನನ್ನನ್ನು ಕಳಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟೇ ಬಲವಿದೆ. ಯುದ್ಧಮಾಡುವುದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವುದಕ್ಕೂ ನನಗೆ ಮುಂಚಿನಂತೆಯೇ ಶಕ್ತಿಯಿದೆ.


ನದಿ ದಾಟಿ ಸ್ವಲ್ಪ ದೂರಕ್ಕೆ ನಿಮ್ಮ ಸಂಗಡ ಬರುತ್ತೇನೆ. ಅರಸರಾದ ನೀವು ನನಗೇಕೆ ಇಂಥ ಉಪಕಾರ ಮಾಡಬೇಕು?


ಜ್ವಾಲೆಗಳು ಏರುವುದು ಮೇಲಕೆ ಜನರು ಹುಟ್ಟಿರುವುದು ದುಃಖಕೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು