Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 90:11 - ಕನ್ನಡ ಸತ್ಯವೇದವು C.L. Bible (BSI)

11 ನಿನ್ನ ಕೋಪದಾ ಪ್ರತಾಪವನು ಬಲ್ಲವನಾರು? I ಭಯಂಕರ ರೌದ್ರವನು ಅನುಭವಿಸುವವರಾರು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಿನ್ನ ಕೋಪದ ಬಲವನ್ನೂ, ಭಯಭಕ್ತಿಗೆ ಕಾರಣವಾಗಿರತಕ್ಕ ನಿನ್ನ ರೌದ್ರವನ್ನೂ ಗ್ರಹಿಸುವವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಿನ್ನ ಕೋಪದ ಬಲವನ್ನೂ ಭಯಭಕ್ತಿಗೆ ಕಾರಣವಾಗಿರತಕ್ಕ ನಿನ್ನ ರೌದ್ರವನ್ನೂ ಗ್ರಹಿಸುವವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೇವರೇ, ನಿನ್ನ ಕೋಪದ ಪೂರ್ಣ ಬಲವನ್ನು ಯಾರೂ ತಿಳಿಯರು. ನಿನ್ನಲ್ಲಿ ನಮಗಿರುವ ಭಯಭಕ್ತಿಯು ನಿನ್ನ ಕೋಪದಷ್ಟೇ ದೊಡ್ಡದಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಿಮ್ಮ ಕೋಪದ ಶಕ್ತಿಯನ್ನು ತಿಳಿದವರ‍್ಯಾರು? ನಿಮ್ಮ ಮೇಲಿನ ಭಯಭಕ್ತಿಗೆ ಕಾರಣವಾಗಿರುವ ನಿಮ್ಮ ಖಂಡನೆಯನ್ನು ಗ್ರಹಿಸುವವರ‍್ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 90:11
12 ತಿಳಿವುಗಳ ಹೋಲಿಕೆ  

ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.


ಸಿಯೋನಿನಲ್ಲಿರುವ ಪಾಪಾತ್ಮರು ಭಯಪಡುತ್ತಾರೆ. ಭಕ್ತಿಹೀನರು ಗಡಗಡನೆ ನಡುಗುತ್ತಾರೆ. ‘ನಮ್ಮಲ್ಲಿ ಯಾರು ತಾನೇ ಕಬಳಿಸುವ ಕಿಚ್ಚಿನ ಬಳಿ ವಾಸಿಸಬಲ್ಲರು?’ ಎಂದು ಹೇಳಿಕೊಳ್ಳುತ್ತಾರೆ.


ನಾನೇ ನಿಮಗೆ ವಿರೋಧವಾಗಿ ನಡೆಯುವೆನು. ನಿಮ್ಮ ಪಾಪಗಳ ಕಾರಣ ನಾನೇ ನಿಮ್ಮನ್ನು ಏಳರಷ್ಟು ದಂಡಿಸುವೆನು.


ಏಕೆಂದರೆ, ಅವರ ಕೋಪಾಗ್ನಿಯ ಘೋರ ದಿನವು ಬಂದಿದೆ. ಅದರ ಮುಂದೆ ನಿಲ್ಲುವುದಕ್ಕೆ ಯಾರು ತಾನೇ ಶಕ್ತರು?” ಎಂದು ಹಲುಬಿದರು.


ಪ್ರಭುವಿನ ಭಯಭಕ್ತಿ ನಮಗಿರುವುದರಿಂದ ನಾವು ಮಾನವರ ಮನವೊಲಿಸಲು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲರು. ಅದು ನಿಮ್ಮ ಮನಸ್ಸಾಕ್ಷಿಗೂ ಅರಿವಾಗಿದೆಯೆಂದು ನಂಬುತ್ತೇವೆ.


ಅವರು ನಿಮಗೂ ನಿಮ್ಮ ಸಂತತಿಯವರಿಗೂ ದೀರ್ಘಕಾಲವಿರುವ ಬಹುಭಯಂಕರವಾದ ಉಪದ್ರವಗಳನ್ನು ಬರಮಾಡುವರು. ದೀರ್ಘಕಾಲ ವಾಸಿಯಾಗದ ಘೋರವ್ಯಾಧಿಗಳಿಂದ ನಿಮ್ಮನ್ನು ಬಾಧಿಸುವರು.


“ನೀವು ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧವಾಗಿ ನಡೆದರೆ ನಿಮ್ಮ ಪಾಪದ ನಿಮಿತ್ತ ಇನ್ನೂ ಏಳುಪಟ್ಟು ಹೆಚ್ಚಾಗಿ ಬಾಧಿಸುವೆನು.


“ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಗೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ದಂಡಿಸುವೆನು; ನಿಮ್ಮ ಗರ್ವವನ್ನು ಅಡಗಿಸುವೆನು.


ನೀವು ಯಾರಿಗೆ ಭಯಪಡಬೇಕೆಂದು ಹೇಳುತ್ತೇನೆ, ಕೇಳಿ: ಸತ್ತಮೇಲೆ ನರಕದೊಳಕ್ಕೆ ದಬ್ಬಲು ಅಧಿಕಾರವುಳ್ಳಾತನಿಗೆ ಭಯಪಡಿ. ಹೌದು, ಆತನಿಗೆ ಭಯಪಡಿರೆಂದು ನಿಮಗೆ ಒತ್ತಿಹೇಳುತ್ತೇನೆ.


ನೀನಾದರೋ ದೇವಾ, ಮಹಾಭಯಂಕರನು I ಸಿಟ್ಟೇರಿದ ನಿನ್ನ ಮುಂದೆ ಯಾವನು ನಿಂತಾನು? II


ನಾನು ನಿಮಗೆ ವಿರುದ್ಧ ಕೋಪದಿಂದ ವರ್ತಿಸುವೆನು. ನಿಮ್ಮ ಪಾಪಗಳ ಕಾರಣ ಏಳ್ಮಡಿಯಾಗಿ ಶಿಕ್ಷಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು