Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 90:12 - ಕನ್ನಡ ಸತ್ಯವೇದವು C.L. Bible (BSI)

12 ಜೀವನಾವಧಿಯನು ಲೆಕ್ಕಿಸುವುದನು ನಮಗೆ ಕಲಿಸು I ಈ ಪರಿಜ್ಞಾನವುಳ್ಳಂಥ ಹೃದಯವನು ನೀ ಕರುಣಿಸು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಮ್ಮ ದಿನಗಳು ಕೊಂಚವೇ ಎಂದು ಎಣಿಸಿಕೊಳ್ಳುವ ಹಾಗೆ ನಮಗೆ ಕಲಿಸು; ಆಗ ಜ್ಞಾನದ ಹೃದಯವನ್ನು ಪಡೆದುಕೊಳ್ಳುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಮ್ಮ ದಿನಗಳು ಕೊಂಚವೇ ಎಂದು ಎಣಿಸಿಕೊಳ್ಳುವ ಹಾಗೆ ನಮಗೆ ಕಲಿಸು; ಆಗ ಜ್ಞಾನದ ಹೃದಯವನ್ನು ಪಡಕೊಳ್ಳುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಮ್ಮ ಜೀವಿತಗಳು ಕೊಂಚವೇ ಎಂಬುದನ್ನು ನಮಗೆ ಕಲಿಸು. ಆಗ ನಾವು ವಿವೇಕಿಗಳಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ, ನಮ್ಮ ದಿನಗಳನ್ನು ಲೆಕ್ಕಿಸುವುದಕ್ಕೆ ನಮಗೆ ಕಲಿಸಿಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 90:12
20 ತಿಳಿವುಗಳ ಹೋಲಿಕೆ  

“ನನ್ನ ಜೀವಾಯುಸ್ಸು ಎನಿತು? ನನ್ನ ಬಾಳಿನ ಮುಗಿವೆಂದು? I ತಿಳಿಯಪಡಿಸು ನನಗೆ ಪ್ರಭು, ನಾನು ಬಲು ಅಸ್ಥಿರನೆಂದು” II


ಹಗಲಿರುವಾಗಲೇ ನನ್ನನ್ನು ಕಳುಹಿಸಿದಾತನ ಕೆಲಸವನ್ನು ನಾನು ಮಾಡುತ್ತಿರಬೇಕು. ರಾತ್ರಿ ಆದಮೇಲೆ ಯಾರೂ ಕೆಲಸ ಮಾಡಲಾಗದು.


ಜ್ಞಾನವಿದ್ದಿದ್ದರೆ ಗ್ರಹಿಸುತ್ತಿದ್ದರು ಈ ಸಂಗತಿಗಳನು ತಿಳಿಯುತ್ತಿದ್ದರು, ಅಂತ್ಯದೊಳು ತಮಗಾಗುವ ದುರವಸ್ಥೆಯನು.


ಜ್ಞಾನ ಪಡೆಯಬೇಕೆಂಬುದೇ ಜ್ಞಾನಬೋಧೆಯ ಮೂಲಾಂಶ; ನಿನ್ನ ಸರ್ವಸಂಪತ್ತಿನಿಂದ ವಿವೇಕವನ್ನು ಗಳಿಸಿಕೊ.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಉಪದೇಶವನ್ನು ಕೇಳುವುದರತ್ತ ಮನಸ್ಸಿಡು; ತಿಳುವಳಿಕೆಯ ಮಾತುಗಳಿಗೆ ಕಿವಿಗೊಡು.


ಜ್ಞಾನಿಗಳ ನುಡಿಗಳನ್ನು ಕಿವಿಗೊಟ್ಟು ಕೇಳು; ನನ್ನ ಬೋಧನೆಯನ್ನು ಮನಸ್ಸಿನಲ್ಲಿಡು.


ಬಂಗಾರಕ್ಕಿಂತ ಜ್ಞಾನಾರ್ಜನೆ ಎಷ್ಟೋ ಮೇಲು; ಬೆಳ್ಳಿಗಿಂತ ವಿವೇಕಾರ್ಜನೆ ಎಷ್ಟೋ ಲೇಸು.


ಮರೆಯಬೇಡ, ನನ್ನ ಮಾತಿಗೆ ಓರೆಯಾಗಬೇಡ, ಜ್ಞಾನವನ್ನು ಪಡೆ. ವಿವೇಕವನ್ನು ಗಳಿಸಿಕೊ.


ಬಳಿಕ ಮಾನವನಿಗೆ ಇಂತೆಂದನು: ‘ಸರ್ವೇಶ್ವರನಲ್ಲಿ ಭಯಭಕ್ತಿ ಇಡುವುದೇ ಸುಜ್ಞಾನ ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ’.”


ಸತ್ಯವನ್ನು, ಅಂದರೆ ಜ್ಞಾನ, ಸುಶಿಕ್ಷೆ, ವಿವೇಕ ಇವನ್ನು ಬೆಲೆಕೊಟ್ಟಾದರೂ ಕೊಂಡುಕೊ, ಮಾರಿಬಿಡಬೇಡ!


ನನ್ನಾಯುಸ್ಸು ಗೇಣುದ್ದ, ನಿನ್ನೆಣಿಕೆಗದು ಶೂನ್ಯ I ಮಾನವ ಜೀವನ ಕೇವಲ ಉಸಿರಿಗೆ ಸರಿಸಮಾನ! II


ಔತಣ ನಡೆವ ಮನೆಗೆ ಹೋಗುವುದಕ್ಕಿಂತ ಗೋಳಾಟವಿರುವ ಮನೆಗೆ ಹೋಗುವುದು ಲೇಸು, ಎಲ್ಲಾ ಮಾನವರ ಅಂತಿಮ ಗತಿ ಸಾವೇ. ಜೀವಂತರು ಇದನ್ನು ಮನಸ್ಸಿನಲ್ಲಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು