Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 90:14 - ಕನ್ನಡ ಸತ್ಯವೇದವು C.L. Bible (BSI)

14 ಉದಯದಲೆ ತೋಯಿಸೆಮ್ಮನು ನಿನ್ನ ಕೃಪೆಯಿಂದ I ಹರ್ಷಿಸಿ ಆನಂದಿಸುವೆವು ಆಗ ದಿನವಾದ್ಯಂತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮುಂಜಾನೆಯಲ್ಲಿ ನಿನ್ನ ಕೃಪೆಯಿಂದ ನಮ್ಮನ್ನು ಸಂತೃಪ್ತಿಪಡಿಸು; ಆಗ ಜೀವಮಾನದಲ್ಲೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಉದಯದಲ್ಲಿ ನಿನ್ನ ಕೃಪೆಯಿಂದ ನಮ್ಮನ್ನು ಸಂತೃಪ್ತಿಪಡಿಸು; ಆಗ ಜೀವಮಾನದಲ್ಲೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಪ್ರತಿ ಮುಂಜಾನೆ ನಿನ್ನ ಪ್ರೀತಿಯಿಂದ ನಮ್ಮನ್ನು ತುಂಬಿಸು. ಆಗ ಜೀವಮಾನವೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಬೆಳಿಗ್ಗೆ ನಿಮ್ಮ ಒಡಂಬಡಿಕೆಯ ಪ್ರೀತಿಯಿಂದ ನಮ್ಮನ್ನು ತೃಪ್ತಿಪಡಿಸಿರಿ. ಆಗ ನಮ್ಮ ದಿನಗಳೆಲ್ಲಾ ಉತ್ಸಾಹ ಧ್ವನಿಗೈದು ನಿಮ್ಮಲ್ಲಿ ಸಂತೋಷಪಡುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 90:14
13 ತಿಳಿವುಗಳ ಹೋಲಿಕೆ  

ಶುಭಶಾಂತಿಯಿಂದ ನಾ ಬಾಳುವೆ ಜೀವಮಾನವೆಲ್ಲ I ದೇವಮಂದಿರದಲಿ ನಾ ವಾಸಿಸುವೆ ಚಿರಕಾಲವೆಲ್ಲ II


ನಿನ್ನ ದಾಸನಿಗೆ ನೀಡು ಮನದಾನಂದವನು I ನಿನಗೆ ಅಭಿಮುಖವಾಗಿಸಿರುವೆ ಎನ್ನಾತ್ಮವನು II


ನವಜೀವವನು ತುಂಬಿಸಲಾರೆಯಾ ನಮ್ಮಲಿ? I ಆಗ ನಿನ್ನ ಜನರು ಆನಂದಿಸುವರು ನಿನ್ನಲಿ II


ಹರ್ಷಾನಂದಗೊಳ್ಳುವೆ ನೆನೆದು ನಿನ್ನ ಅನಂತ ಪ್ರೀತಿಯನು I ಈಕ್ಷಿಸಿದೆ ನೀ ಭಕ್ತನ ದೀನತೆಯನು, ಲಕ್ಷಿಸಿದೆ ಬಾಧೆಗಳನು II


ಪ್ರಭುವಿನಲ್ಲಿ ನೀವು ಸತತವೂ ಆನಂದಿಸಿರಿ. ಆನಂದಿಸಬೇಕೆಂದು ಮತ್ತೆ ಒತ್ತಿ ಹೇಳುತ್ತೇನೆ.


ಆನಂದಿಸಲಿ ತಮ್ಮ ಸೃಷ್ಟಿಕರ್ತನಲಿ ಇಸ್ರಯೇಲರು I ತಮ್ಮಾ ರಾಜನಿಗೆ ಜಯಕಾರ ಮಾಡಲಿ ಸಿಯೋನಿನವರು II


ನಿನ್ನ ಆಸ್ಥಾನದಲಿ ನೆಲೆಸಲು ನೀನಾಯ್ದು ತಂದ ದೈವಭಕ್ತ ಧನ್ಯ I ನಮಗೆ ತರಲಿ ತೃಪ್ತಿ ನೀ ವಾಸಿಸುವ ಪವಿತ್ರಾಲಯದ ಸೌಭಾಗ್ಯ II


ಆಹಾ! ಎಷ್ಟು ಸುಂದರ, ಎಷ್ಟು ಮನೋಹರ ಆ ನಾಡಿನ ದೃಶ್ಯ! ಪುಷ್ಟಿಗೊಳಿಸುವುವು ಯುವಕಯುವತಿಯರನು ದ್ರಾಕ್ಷೆ, ದವಸಧಾನ್ಯ!


ಸರ್ವೇಶ್ವರ ಹೀಗೆನ್ನುತ್ತಾರೆ: “ಕೇಳಿಬರುತ್ತಿದೆ ರಾಮಾ ಊರಿನೊಳು ರೋದನ ಗೋಳಾಟ, ಅಘೋರ ಆಕ್ರಂದನ. ಕಳೆದುಕೊಂಡ ಮಕ್ಕಳಿಗಾಗಿ ಗೋಳಾಡುತ್ತಿಹಳು ರಾಖೇಲಳು ಇನ್ನಿಲ್ಲದ ಅವುಗಳಿಗಾಗಿ ಉಪಶಮನ ಒಲ್ಲೆನೆನುತಿಹಳು.”


ಬೆಳಿಗ್ಗೆ ಸ್ಮರಿಸಮಾಡು ನಿನ್ನಚಲ ಪ್ರೀತಿಯನು I ನಿನ್ನಲ್ಲಿಯೆ ಇಟ್ಟಿರುವೆನು ನನ್ನ ನಂಬಿಕೆಯನು I ತೋರಿಸು ನನಗೆ ನಾ ಹಿಡಿಯಬೇಕಾದ ಮಾರ್ಗವನು I ನಿನ್ನ ಕಡೆಗೆ ಎತ್ತಿರುವೆನು ನನ್ನ ಹೃನ್ಮನಗಳನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು