Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 90:16 - ಕನ್ನಡ ಸತ್ಯವೇದವು C.L. Bible (BSI)

16 ಪ್ರಕಟವಾಗಲಿ ನಿನ್ನ ರಕ್ಷಾಕಾರ್ಯ ಭಕ್ತರಿಗೆ I ನಿನ್ನ ಮಹಿಮಾಶಕ್ತಿ ಅವರ ಸಂತಾನಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿನ್ನ ಸೇವಕರಿಗೆ ನಿನ್ನ ರಕ್ಷಣಾ ಕಾರ್ಯವೂ, ಅವರ ಮಕ್ಕಳಿಗೋಸ್ಕರ ನಿನ್ನ ಮಹತ್ತೂ ಪ್ರಕಟವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿನ್ನ ಸೇವಕರಿಗೆ ನಿನ್ನ ರಕ್ಷಾಕಾರ್ಯವೂ ಅವರ ಮಕ್ಕಳಿಗೋಸ್ಕರ ನಿನ್ನ ಮಹತ್ತೂ ಪ್ರಕಟವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನೀನು ನಿನ್ನ ಸೇವಕರುಗಳಿಗಾಗಿ ಮಾಡಬಲ್ಲ ಅದ್ಭುತಕಾರ್ಯಗಳನ್ನು ನಾವು ನೋಡುವಂತಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಿಮ್ಮ ಸೇವಕರಿಗೆ ನಿಮ್ಮ ಕೃತ್ಯಗಳನ್ನು ಪ್ರಕಟಿಸಿರಿ. ಅವರ ಮಕ್ಕಳಿಗೆ ನಿಮ್ಮ ಪ್ರಭೆಯೂ ತೋರಿ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 90:16
10 ತಿಳಿವುಗಳ ಹೋಲಿಕೆ  

ಮರಳಿ ಮಾಡು ನಮ್ಮೀಕಾಲದಲಿ ಅವುಗಳನು ಪ್ರಚುರಪಡಿಸು ಪ್ರಸ್ತುತಕಾಲದಲಿ ಅವುಗಳನು ರೋಷಗೊಂಡರೂ ಮರೆಯದಿರು ಕರುಣೆಯನು


ಕೇಳಿದೆವು ಕಿವಿಯಾರೆ ದೇವಾ, ನೀ ಎಸಗಿದ ಘನಕಾರ್ಯಗಳನು I ವಿವರಿಸಿಹರು ನಮ್ಮ ಪೂರ್ವಜರು ನಿನ್ನಾ ಮಹತ್ಕಾರ್ಯಗಳನು II


“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ನಿನ್ನ ಕಾರ್ಯಗಳಿಂದ ಪ್ರಭು, ನನ್ನನ್ನು ಆನಂದಗೊಳಿಸಿರುವೆ I ನಿನ್ನಾ ಕಾರ್ಯಗಳ ನೋಡಿ, ನಾನು ಉಲ್ಲಾಸದಿಂದ ಹಾಡುವೆ II


ಧ್ಯಾನಿಸುವೆ ನಾನಿನ್ನ ಕಾರ್ಯಗಳನೆಲ್ಲ I ಮಾಡುವೆ ಮನನ ನಿನ್ನ ಪವಾಡಗಳನೆಲ್ಲ II


ಈಗ ನಾನು, ಭೂನಿವಾಸಿಗಳೆಲ್ಲರು ಹಿಡಿಯುವ ಹಾದಿಯನ್ನು ಹಿಡಿಯಬೆಕಾಗಿದೆ. ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ವಿಷಯದಲ್ಲಿ ನುಡಿದ ಆಶೀರ್ವಚನಗಳಲ್ಲಿ ಒಂದೂ ವ್ಯರ್ಥವಾಗಲಿಲ್ಲ. ಎಲ್ಲವೂ ತಪ್ಪದೆ ನೆರವೇರಿವೆ ಎಂಬುದು ನಿಮಗೆ ಮನದಟ್ಟಾಗಿರಲಿ.


ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಮನೆಯವರು ಹಾಗು ಒಳ್ಳೆಯದು, ಕೆಟ್ಟದು ಎಂಬುದನ್ನು ಅರಿಯದ ನಿಮ್ಮ ಹಸುಳೆಗಳು ಅಲ್ಲಿಗೆ ಸೇರುವರು; ಅವರಿಗೇ ಆ ನಾಡನ್ನು ಕೊಡುವೆನು; ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು