Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 90:17 - ಕನ್ನಡ ಸತ್ಯವೇದವು C.L. Bible (BSI)

17 ಸ್ವಾಮಿದೇವರ ಆಶೀರ್ವಾದ ನಮ್ಮ ಮೇಲಿರಲಿ I ನಾವು ಕೈಗೊಳ್ಳುವ ಕಾರ್ಯಗಳು ಸಫಲವಾಗಲಿ I ಅಹುದು, ನಮ್ಮ ಕಾರ್ಯಗಳೆಲ್ಲಾ ಸಫಲವಾಗಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಮ್ಮ ಯೆಹೋವ ದೇವರ ಪ್ರಸನ್ನತೆಯು ನಮ್ಮ ಮೇಲೆ ಇರಲಿ. ನಾವು ಕೈ ಹಾಕಿದ ಕೆಲಸವನ್ನು ನಮಗೆ ಸಫಲಪಡಿಸು; ನಾವು ಕೈಹಾಕಿದ ಕೆಲಸವನ್ನು ಸಫಲ ವಾಗುವಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಮ್ಮ ಯೆಹೋವದೇವರ ಪ್ರಸನ್ನತೆಯು ನಮ್ಮ ಮೇಲೆ ಇರಲಿ. ನಾವು ಕೈಹಾಕಿದ ಕೆಲಸವನ್ನು ನಮಗೆ ಸಫಲಪಡಿಸು; ನಾವು ಕೈಹಾಕಿದ ಕೆಲಸವನ್ನು ಸಫಲಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಮ್ಮ ದೇವರಾದ ಯೆಹೋವನೇ, ನಮಗೆ ಕರುಣೆತೋರು. ನಮ್ಮ ಕೆಲಸಕಾರ್ಯಗಳು ನಮಗೆ ಫಲ ನೀಡಲಿ; ನಮ್ಮ ಕಾರ್ಯಗಳನ್ನು ಆತನು ಸಫಲಪಡಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಮ್ಮ ದೇವರಾದ ಯೆಹೋವ ದೇವರ ಮೆಚ್ಚುಗೆಯು ನಮ್ಮ ಮೇಲೆ ಇರಲಿ. ನಮ್ಮ ಕೈಗಳ ಕೆಲಸವನ್ನು ಸ್ಥಿರಪಡಿಸಿರಿ. ಹೌದು, ನಮ್ಮ ಕೈಗಳ ಕೆಲಸವನ್ನು ಸ್ಥಾಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 90:17
15 ತಿಳಿವುಗಳ ಹೋಲಿಕೆ  

ನಿನ್ನ ಕಾರ್ಯಭಾರವನ್ನು ಸರ್ವೇಶ್ವರನಿಗೆ ವಹಿಸು; ಆಗ ಸಫಲವಾಗುವುದು ನಿನ್ನ ಯೋಜನೆಯು.


ಆದ್ದರಿಂದ ನೆಡುವವನಾಗಲಿ, ನೀರೆರೆಯುವವನಾಗಲಿ ಪ್ರಮುಖನಲ್ಲ; ಬೆಳವಣಿಗೆ ನೀಡುವ ದೇವರೇ ದೊಡ್ಡವರು.


ನಮ್ಮನ್ನು ಪ್ರೀತಿಸಿ ನಿತ್ಯಾದರಣೆಯನ್ನೂ ಉತ್ತಮ ನಿರೀಕ್ಷೆಯನ್ನೂ ಅನುಗ್ರಹವಾಗಿ ಕೊಟ್ಟಿರುವ ನಮ್ಮ ಪ್ರಭುವಾದ ಯೇಸುಕ್ರಿಸ್ತರು ಹಾಗೂ ಪಿತನಾದ ದೇವರು ನಿಮ್ಮ ಹೃನ್ಮನಗಳನ್ನು ಉತ್ತೇಜನಗೊಳಿಸಲಿ.


ಸರ್ವೇಶ್ವರಾ, ನೀಡೆಮಗೆ ಶಾಂತಿ ಸಮಾಧಾನ ನಮ್ಮ ಸತ್ಕಾರ್ಯಗಳೆಲ್ಲವೂ ನಿನ್ನ ಕೃಪಾಸಾಧನ.


ರಕ್ಷಿಸು ಪ್ರಭೂ, ರಕ್ಷಿಸು ದಯವಿಟ್ಟು I ಸುಕ್ಷೇಮ ನೀಡು ಪ್ರಭು ಕರುಣೆಯಿಟ್ಟು II


ನಿನ್ನ ಯೋಜನೆಗಳು ಸಫಲವಾಗುವುವು ನಿನ್ನ ಮಾರ್ಗಗಳು ಪ್ರಜ್ವಲಿಸುವುವು.


ಎಲೈ ದೇವನೇ, ಪುನರುದ್ಧಾರ ಮಾಡೆಮ್ಮನು I ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು II


ನಿನ್ನ ಶಕ್ತಿಸಾಮರ್ಥ್ಯವನು ಹೇ ದೇವಾ, ಪ್ರದರ್ಶಿಸು I ನಮ್ಮ ಪರ ಪ್ರಯೋಗಿಸಿದ ಬಲವನು ಮರಳಿ ತೋರ್ಪಡಿಸು II


ಸರ್ವಶಕ್ತನಾದ ದೇವನೆ, ಉದ್ಧರಿಸೆಮ್ಮನು I ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು II


ಮುಸುಕು ತೆರೆದ ಮುಖವುಳ್ಳ ನಾವೆಲ್ಲರೂ ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಆ ಪ್ರಭುವಿನಿಂದ ಹೊರಹೊಮ್ಮುವ ಮಹಿಮೆ ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಅವರನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮವಾಗಿರುವ ಪ್ರಭುವಿನ ಕಾರ್ಯವೇ ಸರಿ.


ಸೇನೆಯನು ನೀ ಅಣಿಗೊಳಿಸುವ ದಿನದೊಳು I ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I ಉದಯಕಾಲದಿಬ್ಬನಿಯಂತೆ ಇಳಿದು ಬರುವರು II


ಸುರಸುಂದರವಾದ ಸಿಯೋನಿನಿಂದ I ಉದಯಸಿಹನು ದೇವನು ಶೋಭೆಯಿಂದ II


ನಾನೊಂದನು ಕೋರಿದೆ ಪ್ರಭುವಿನಿಂದ I ನಾನದನ್ನೇ ನಿರೀಕ್ಷಿಸಿದೆ ಆತನಿಂದ : I ವಾಸಿಸಬೇಕು ಜೀವಮಾನವೆಲ್ಲ ನಾನಾತನ ಮಂದಿರದಲಿ I ನಾ ತಲ್ಲೀನನಾಗಬೇಕು ಅಲ್ಲಾತನ ಪ್ರಸನ್ನತೆಯಲಿ II


ಪ್ರಿಯರೇ, ನಾವೀಗ ದೇವರ ಮಕ್ಕಳು. ಮುಂದೆ ನಾವು ಎಂಥವರಾಗುತ್ತೇವೆ ಎಂಬುದು ಇನ್ನೂ ವಿಷದವಾಗಿಲ್ಲ. ಆದರೆ ಕ್ರಿಸ್ತಯೇಸು ಪ್ರತ್ಯಕ್ಷವಾಗುವಾಗ ನಾವೂ ಅವರಂತೆಯೇ ಇರುತ್ತೇವೆಂದು ಬಲ್ಲೆವು. ಏಕೆಂದರೆ, ಅವರನ್ನು ನಾವು ಅವರ ಯಥಾರ್ಥರೂಪದಲ್ಲೇ ಕಾಣುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು