Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 90:6 - ಕನ್ನಡ ಸತ್ಯವೇದವು C.L. Bible (BSI)

6 ಚಿಗುರಿ ಹೂಬಿಡುವುದದು ಬೆಳಗಿನಲಿ I ಸೊರಗಿ ತರಗಾಗುವುದು ಬೈಗಿನಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದು ಮುಂಜಾನೆಯಲ್ಲಿ ಬೆಳೆದು ಹೂಬಿಡುತ್ತದೆ; ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗಿಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದು ಉದಯದಲ್ಲಿ ಬೆಳೆದು ಹೂಬಿಡುತ್ತದೆ; ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗಿಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹೊತ್ತಾರೆಯಲ್ಲಿ ಹುಲ್ಲು ಚಿಗುರತೊಡಗಿದರೂ ಸಾಯಂಕಾಲದೊಳಗೆ ಒಣಗಿಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅದು ಬೆಳಿಗ್ಗೆ ಅರಳಿ ಬೆಳೆಯುತ್ತದೆ. ಸಂಜೆಯಲ್ಲಿ ಒಣಗಿ ಬಿದ್ದು ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 90:6
7 ತಿಳಿವುಗಳ ಹೋಲಿಕೆ  

ಅರಳಿ ಬಾಡುವನು ಹೂವಿನಂತೆ ನಿಲ್ಲದೆ ಓಡುವನು ನೆರಳಿನಂತೆ.


ದುರುಳರು ಚಿಗುರಬಹುದು ಹುಲ್ಲಿನಂತೆ I ಕೆಡುಕರು ಅರಳಬಹುದು ಹೂವಿನಂತೆ I ಅವರ ಅಳಿವಂತೂ ಕಟ್ಟಿಟ್ಟ ಬುತ್ತಿಯಂತೆ II


ಏಕೆಂದರೆ, ಧನಿಕರು ಹುಲ್ಲಿನ ಹೂವಿನಂತೆ ಗತಿಸಿಹೋಗುತ್ತಾರೆ. ಸೂರ್ಯನ ಸುಡುಬಿಸಿಲಿಗೆ ಹುಲ್ಲು ಒಣಗಿಹೋಗುತ್ತದೆ. ಅದರ ಹೂವು ಉದುರಿಹೋಗುವುದು, ಅದರ ಅಂದಚೆಂದವೂ ಹಾಳಾಗಿ ಹೋಗುತ್ತದೆ. ಅಂತೆಯೇ ಧನಿಕನು ತನ್ನ ವ್ಯವಹಾರಗಳಲ್ಲಿಯೇ ಕುಂದಿಹೋಗುತ್ತಾನೆ.


ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಪಾಲಾಗುವ ಬಯಲಿನ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ, ನಿಮಗೆ ಮತ್ತಷ್ಟೂ ಮಾಡಲಾರರೇ?


ಕೂಗಿ ನಾ ನಿಟ್ಟುಸಿರಿಟ್ಟೆ I ಎಲುಬು ತೊಗಲು ಆಗಿಬಿಟ್ಟೆ II


ನೀನಾದರೋ ಪ್ರಭು, ಸದಾ ಸಿಂಹಾಸನಾರೂಢ I ಮಾಳ್ಪರು ತಲತಲಾಂತರಕು ನಿನ್ನ ನಾಮಸ್ಮರಣ II


ಆ ವಾಣಿ ಮತ್ತೆ ಕೇಳಿಸಿತು : ‘ಗಟ್ಟಿಯಾಗಿ ಕೂಗು’ ಎಂದಿತು ನಾನೇನೆಂದು ಕೂಗಲಿ ಎನ್ನಲು ಈ ಪರಿಯಾಗಿ ಉತ್ತರಿಸಿತು : “ನರಮಾನವರೆಲ್ಲ ಬರೀ ಹುಲ್ಲಿನಂತೆ ಅವರ ಸೊಬಗೆಲ್ಲಾ ಬಯಲಿನ ಕುಸುಮದಂತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು