Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 90:7 - ಕನ್ನಡ ಸತ್ಯವೇದವು C.L. Bible (BSI)

7 ಇಲ್ಲವಾಗುವೆವು ನಿನ್ನ ಕೋಪದಿಂದ I ತಲ್ಲಣಗೊಳ್ವೆವು ನಿನ್ನ ರೌದ್ರದಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿನ್ನ ಕೋಪದಿಂದ ನಾವು ಇಲ್ಲವಾದೆವು; ನಿನ್ನ ರೌದ್ರದಿಂದ ತಲ್ಲಣಗೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿನ್ನ ಕೋಪದಿಂದ ಇಲ್ಲವಾದೆವು; ನಿನ್ನ ರೌದ್ರದಿಂದ ತಲ್ಲಣಗೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರೇ, ನಿನ್ನ ಕೋಪದಿಂದ ನಾವು ನಾಶವಾದೆವು. ನಿನ್ನ ರೌದ್ರವು ನಮ್ಮನ್ನು ತಲ್ಲಣಗೊಳಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾವು ನಿಮ್ಮ ಬೇಸರದಿಂದ ಬಾಧಿತರಾಗಿದ್ದೇವೆ. ನಿಮ್ಮ ಖಂಡನೆಯಿಂದ ತಲ್ಲಣಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 90:7
13 ತಿಳಿವುಗಳ ಹೋಲಿಕೆ  

ಪಾಪದ ಪ್ರಯುಕ್ತ ಮಾನವನು ಶಿಕ್ಷಿಸುವಾಗ I ನುಸಿಹತ್ತಿದಂತೆ ನಾಶಪಡಿಸುವೆ ಅವನಾಸ್ಥೆಯನಾಗ I ಮಾನವ ಜೀವನ ಕೇವಲ ಉಸಿರಿಗೆ ಸರಿಸಮಾನ II


ನಲವತ್ತು ವರ್ಷಗಳು ದೇವರು ಸಿಟ್ಟುಗೊಂಡದ್ದು ಯಾರ ಮೇಲೆ? ಪಾಪಮಾಡಿದವರ ಮೇಲಲ್ಲವೇ? ಅವರ ಶವಗಳು ಬಿದ್ದುದು ಮರುಭೂಮಿಯಲ್ಲಲ್ಲವೇ?


ನಿನ್ನ ಕೋಪದಾ ಪ್ರತಾಪವನು ಬಲ್ಲವನಾರು? I ಭಯಂಕರ ರೌದ್ರವನು ಅನುಭವಿಸುವವರಾರು? II


ನಿನ್ನ ಕನಲಿನಲೇ ಕಳೆದಿವೆ ನಮ್ಮ ದಿನಗಳು I ನಿಟ್ಟುಸಿರಿನಂತೆ ಮುಗಿವುದೆಮ್ಮ ಬದುಕುಬಾಳು II


ಸುಟ್ಟು ನೀ ಭಸ್ಮಮಾಡು ಕೋಪಾಗ್ನಿಯಿಂದ I ಸ್ಪಷ್ಟವಾಗಲಿ ಇಡೀ ಲೋಕಕ್ಕಿದರಿಂದ I ದೇವನಾಳುತಿಹನೆಂದು ಇಸ್ರಯೇಲಿನಿಂದ II


ಬೆಳಗಿನ ಜಾವದಲ್ಲಿ ಸರ್ವೇಶ್ವರ ಆ ಅಗ್ನಿಸ್ತಂಭದಿಂದ ಈಜಿಪ್ಟಿನವರ ದಂಡಿನ ಕಡೆಗೆ ನೋಡಿ ಅದನ್ನು ಗಲಿಬಿಲಿ ಮಾಡಿದರು.


ಆರಿಸಿದನು ಊದಿ ಅವರ ಬಾಳ ಹಣತೆಯನು I ಬರಮಾಡಿದನು ಅವರಿಗೆ ಭೀಕರ ಮರಣವನು II


ಧರೆಯನು ನೀ ಹಾದುಹೋಗುವೆ ರೌದ್ರದಿಂದ ರಾಷ್ಟ್ರಗಳನು ತುಳಿದುಹಾಕುವೆ ರೋಷದಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು