Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 91:13 - ಕನ್ನಡ ಸತ್ಯವೇದವು C.L. Bible (BSI)

13 ಸಿಂಹಗಳ ಮೇಲೂ, ಸರ್ಪಗಳ ಮೇಲೂ ನಡೆಯುವೆ I ಪ್ರಾಯದ ಸಿಂಹವನು, ಘಟಸರ್ಪವನು ತುಳಿದುಬಿಡುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸಿಂಹ ಮತ್ತು ಸರ್ಪಗಳ ಮೇಲೆ ನಡೆಯುವಿ; ಪ್ರಾಯದ ಸಿಂಹವನ್ನೂ, ಘಟಸರ್ಪವನ್ನೂ ತುಳಿದುಬಿಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸಿಂಹಸರ್ಪಗಳ ಮೇಲೆ ನಡೆಯುವಿ; ಪ್ರಾಯದ ಸಿಂಹವನ್ನೂ ಘಟಸರ್ಪವನ್ನೂ ತುಳಿದು ಬಿಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸಿಂಹಗಳ ಮೇಲೆಯೂ ಮತ್ತು ವಿಷಸರ್ಪಗಳ ಮೇಲೆಯೂ ನಡೆಯಲು ನೀನು ಶಕ್ತನಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸಿಂಹದ ಮೇಲೆಯೂ ಸರ್ಪದ ಮೇಲೆಯೂ ನಡೆಯುವೆ. ಪ್ರಾಯದ ಸಿಂಹವನ್ನೂ ಘಟಸರ್ಪವನ್ನೂ ತುಳಿದುಬಿಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 91:13
14 ತಿಳಿವುಗಳ ಹೋಲಿಕೆ  

ಇಗೋ, ಸರ್ಪಗಳನ್ನು ಹಾಗೂ ಚೇಳುಗಳನ್ನು ತುಳಿಯುವುದಕ್ಕೂ ಶತ್ರುವಿನ ಸಮಸ್ತ ಶಕ್ತಿಯನ್ನು ಜಯಿಸುವುದಕ್ಕೂ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಹಾನಿಮಾಡದು.


ನನ್ನ ದೇವರು ತಮ್ಮ ದೂತನನ್ನು ಕಳಿಸಿ, ಸಿಂಹಗಳ ಬಾಯನ್ನು ಬಂಧಿಸಿದರು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆ ದೇವರ ದೃಷ್ಟಿಯಲ್ಲಿ ನಾನು ನಿರ್ಮಲನು. ರಾಜರಾದ ತಮಗೂ ನಾನು ಯಾವ ದ್ರೋಹವನ್ನೂ ಮಾಡಲಿಲ್ಲ,” ಎಂದು ಹೇಳಿದನು.


ಕೈಗಳಿಂದ ಸರ್ಪಗಳನ್ನು ಎತ್ತಿದರೂ ವಿಷಪದಾರ್ಥಗಳನ್ನೇನಾದರು ಕುಡಿದರೂ ಯಾವ ಹಾನಿಯೂ ಅವರಿಗಾಗದು. ಅವರು ರೋಗಿಗಳ ಮೇಲೆ ಕೈ ಇಟ್ಟರೆ ರೋಗಿಗಳು ಗುಣಹೊಂದುವರು,” ಎಂದರು.


ನನ್ನನ್ನು ಅಂಥ ಕರಡಿ-ಸಿಂಹಗಳ ಉಗುರುಗಳಿಂದ ತಪ್ಪಿಸಿದ ಸರ್ವೇಶ್ವರ ಈ ಫಿಲಿಷ್ಟಿಯನ ಕೈಯಿಂದಲೂ ತಪ್ಪಿಸುವರು,” ಎಂದು ಹೇಳಿದನು. ಅದಕ್ಕೆ ಸೌಲನು, “ಹೋಗು, ಸರ್ವೇಶ್ವರ ನಿನ್ನೊಂದಿಗೆ ಇರಲಿ!” ಎಂದನು.


ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು.


ಆಗ ಶಾಂತಿದಾತ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದದಡಿಯಲ್ಲಿ ನಸುಕಿಬಿಡುವರು. ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೊಡನೆ ಇರಲಿ!


ಆ ದಿನದಂದು ಸರ್ವೇಶ್ವರ ಸ್ವಾಮಿ ತಮ್ಮ ಘೋರವಾದ, ಕ್ರೂರವಾದ, ಮಾರಕವಾದ ಖಡ್ಗದಿಂದ ವೇಗವಾಗಿ ಧಾವಿಸುವ ಹಾಗೂ ಡೊಂಕಾಗಿ ಹರಿಯುವ ಸರ್ಪವನ್ನು ಹೊಡೆಯುವರು. ಮಹಾನದಿಯಲ್ಲಿನ ಘಟಸರ್ಪವನ್ನು ಸಹ ಕೊಂದುಹಾಕುವರು.


ಸಮಸ್ತ ಜಗತ್ತನ್ನೂ ವಂಚಿಸುತ್ತಿದ್ದ ಆ ಮಹಾಘಟಸರ್ಪವನ್ನು ಭೂಮಿಗೆ ತಳ್ಳಲಾಯಿತು. ಈ ಪುರಾತನ ಸರ್ಪಕ್ಕೆ ‘ಪಿಶಾಚಿ’ ಎಂತಲೂ ‘ಸೈತಾನ’ ಎಂತಲೂ ಹೆಸರು. ಅದರ ದೂತರನ್ನು ಅದರೊಡನೆ ತಳ್ಳಲಾಯಿತು.


ಸರ್ಪಗಳಂತಾ ಜನ ವಿಷಭರಿತ I ನಾಗರದಂತೆ ಅವರ ಕಿವಿ ಮಂದ II


ಅವರ ಗಂಟಲೇ ತೆರೆದ ಸಮಾಧಿಯಾಗಿದೆ ನಾಲಗೆಗಳಲಿ ಮರೆಮೋಸ ತುಂಬಿತುಳುಕುತಿದೆ. ತುಟಿಯ ಕಂಪನದಲಿ ಘೋರ ವಿಷವಿದೆ.


ಹೊಲದ ಕಲ್ಲುಬಂಡೆಗಳೊಡನೆ ಒಪ್ಪಂದಮಾಡಿಕೊಳ್ಳುವೆ ಆ ಕಾಡುಪ್ರಾಣಿಗಳೊಂದಿಗೆ ನೆಮ್ಮದಿಯಿಂದ ಬಾಳುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು