Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 91:7 - ಕನ್ನಡ ಸತ್ಯವೇದವು C.L. Bible (BSI)

7 ಬೀಳಬಹುದು ಸಾವಿರ ಹೆಣಗಳು ಪಕ್ಕದಲೆ I ಹತ್ತುಸಾವಿರ ಹೆಣಗಳು ನಿನ್ನ ಬಲಗಡೆಯಲೆ I ಅಂಥ ಕೇಡೊಂದೂ ಬಾರದು ನಿನ್ನ ಪಾಲಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿನ್ನ ಮಗ್ಗುಲಲ್ಲಿ ಸಾವಿರ ಜನರು, ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರು ಸತ್ತು ಬಿದ್ದರೂ ನಿನಗೇನೂ ತಟ್ಟದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿನ್ನ ಮಗ್ಗುಲಲ್ಲಿ ಸಾವಿರ ಜನರು, ನಿನ್ನ ಬಲಗಡೆಯಲ್ಲಿ ಹತ್ತುಸಾವಿರ ಜನರು ಸತ್ತುಬಿದ್ದರೂ ನಿನಗೇನೂ ತಟ್ಟದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀನು ಸಾವಿರ ವೈರಿಗಳನ್ನು ಸೋಲಿಸುವೆ. ನಿನ್ನ ಬಲಗೈ ಹತ್ತುಸಾವಿರ ಶತ್ರು ಸೈನಿಕರನ್ನು ಸೋಲಿಸುವುದು. ನಿನ್ನ ಶತ್ರುಗಳಿಗೆ ನಿನ್ನನ್ನು ಮುಟ್ಟಲೂ ಸಾಧ್ಯವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ಪಕ್ಕದಲ್ಲಿ ಸಾವಿರ ಜನರು ಬಿದ್ದರೂ ನಿಮ್ಮ ಬಲಗಡೆಯಲ್ಲಿ ಹತ್ತು ಸಾವಿರ ಜನರು ಬಿದ್ದಾಗ್ಯೂ, ನಿಮ್ಮ ಸಮೀಪಕ್ಕೆ ಅದು ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 91:7
6 ತಿಳಿವುಗಳ ಹೋಲಿಕೆ  

ಮನುಷ್ಯರು ಮೊದಲ್ಗೊಂಡು ಪ್ರಾಣಿಪಕ್ಷಿ, ಕ್ರಿಮಿಕೀಟದವರೆಗೆ ಭೂಮಿಯ ಮೇಲಿನದೆಲ್ಲವೂ ನಾಶವಾಯಿತು. ಭೂಮಿಯಿಂದ ಎಲ್ಲವೂ ನಿರ್ಮೂಲವಾಯಿತು. ನೋಹನು ಹಾಗೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳು ಮಾತ್ರ ಉಳಿದುಕೊಂಡವು.


ಎಂತಲೇ ಭಕ್ತರೆಲ್ಲರು ನಿನ್ನ ಪ್ರಾರ್ಥಿಸಲಿ ಸಕಾಲದಲಿ I ಹುಚ್ಚುಹೊಳೆ ಉಕ್ಕಿಬಂದಾಗ ನೀ ಸಿಕ್ಕಲಿಲ್ಲವೆನ್ನದಿರಲಿ II


ಸರ್ವೇಶ್ವರ ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಯೇಲರು ಅರಣ್ಯದಲ್ಲಿ ಅಲೆಯುತ್ತಿದ್ದ ವರ್ಷಗಳೂ ಸೇರಿ ನಾಲ್ವತ್ತೈದು ವರ್ಷಗಳು ದಾಟಿದವು. ಸರ್ವೇಶ್ವರ ತಾವು ನುಡಿದಂತೆಯೇ ಈ ಕಾಲವೆಲ್ಲ ನನ್ನನ್ನು ಜೀವದಿಂದುಳಿಸಿದ್ದಾರೆ. ಈಗ ನನಗೆ ಎಂಬತ್ತೈದು ವರ್ಷ.


ನೀನು ನನ್ನಲ್ಲಿ ಭರವಸೆಯಿಟ್ಟ ಕಾರಣ ನಿನ್ನನ್ನು ರಕ್ಷಿಸಿಯೇ ರಕ್ಷಿಸುವೆನು. ನೀನು ಕತ್ತಿಗೆ ತುತ್ತಾಗಲಾರೆ. ಅದರ ಬಾಯಿಂದ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ. ಇದು ಸರ್ವೇಶ್ವರನಾದ ನನ್ನ ವಾಣಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು