Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 92:1 - ಕನ್ನಡ ಸತ್ಯವೇದವು C.L. Bible (BSI)

1 ಹೇ ಪ್ರಭೂ, ನಿನ್ನ ಗುಣಗಾನ ಮಂಗಳಕರ I ಪರಾತ್ಪರನೆ, ನಿನ್ನ ನಾಮಭಜನೆ ಹಿತಕರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನಿನ್ನನ್ನು ಕೊಂಡಾಡುವುದೂ, ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನಿನ್ನನ್ನು ಕೊಂಡಾಡುವದೂ ಪರಾತ್ಪರನೇ, ನಿನ್ನ ನಾಮವನ್ನು ಸಂಕೀರ್ತಿಸುವದೂ ಯುಕ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ನಿನ್ನನ್ನು ಸ್ತುತಿಸುವುದೂ ಮಹೋನ್ನತನಾದ ದೇವರೇ, ನಿನ್ನ ಹೆಸರನ್ನು ಕೊಂಡಾಡುವುದೂ ಯುಕ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನಿಮ್ಮನ್ನು ಕೊಂಡಾಡುವುದು ಒಳ್ಳೆಯದು. ಮಹೋನ್ನತರೇ, ನಿಮ್ಮ ಹೆಸರನ್ನು ಕೀರ್ತಿಸುವುದು ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 92:1
22 ತಿಳಿವುಗಳ ಹೋಲಿಕೆ  

ನಮ್ಮ ದೇವರನು ಹೊಗಳಿ ಹಾಡುವುದು ಉಚಿತ I ಆತನ ಸ್ತುತಿ ಮನೋಹರ, ಅದು ಬಲುಸೂಕ್ತ II


ಕೃತಜ್ಞತೆಯಿಂದ ಸಲ್ಲಿಸಿರಿ ಪ್ರಭುವಿಗೆ ಸ್ತುತಿಯನು I ಆತನ ಪ್ರೀತಿ ಶಾಶ್ವತ, ಆತನು ಒಳ್ಳೆಯವನು II


ಕೀರ್ತನೆ, ಹಾಡು, ಭಕ್ತಿಗೀತೆ ಇವುಗಳಿಂದ ನಿಮ್ಮ ಭಾವಗಳನ್ನು ಪರಸ್ಪರ ವ್ಯಕ್ತಪಡಿಸಿರಿ. ಹೃದಯಾಂತರಾಳದಿಂದ ಹಾಡಿ ಪ್ರಭುವಿಗೆ ಸ್ತುತಿಸಲ್ಲಿಸಿರಿ.


ಪ್ರಭು ಒಳ್ಳೆಯವನು, ಆತನಿಗೆ ಸ್ತುತಿಸ್ತೋತ್ರ I ಆತನ ನಾಮವನು ಸ್ತುತಿಸಿರಿ, ಅದು ಮನೋಹರ II


ಸಜ್ಜನರೇ, ಮಾಡಿರಿ ಪ್ರಭುವಿನ ಗುಣಗಾನ I ನೀತಿವಂತರೇ, ಆತನ ಸ್ತುತಿ ನಿಮಗೆ ಸುಗುಣ II


ನಿನ್ನ ಸಾನ್ನಿಧ್ಯ ಸ್ವಾಮಿದೇವಾ, ನನಗೆಂಥ ಸೌಭಾಗ್ಯ I ನಿನ್ನ ಸತ್ಕಾರ್ಯಗಳ ಸಾರಲೆಂದೆ ನಿನ್ನನಾಶ್ರಯಿಸಿಕೊಂಡೆನಯ್ಯಾ II


ಹೊಗಳಲಿ ಪ್ರಭುವಿನಚಲ ಪ್ರೀತಿಯನು I ಜನರಿಗೆ ಆತನೆಸಗಿದ ಅತಿಶಯಗಳನು II


ನಿನ್ನುಪಕಾರವನು ಹೇ ದೇವಾ, ನಾ ಸದಾ ಸ್ಮರಿಸುವೆನು I ನಿನ್ನ ಶ್ರೇಷ್ಠ ನಾಮವನು ಭಕ್ತರ ಮುಂದೆ ಸ್ತುತಿಸುವೆನು II


ಪರಾತ್ಪರ ದೇವರು ನಿಮ್ಮ ತಂದೆಯಾದ ನೆಬೂಕದ್ನೆಚ್ಚರ್ ಅವರಿಗೆ ರಾಜ್ಯ ಮಹತ್ವವನ್ನು ಹಾಗೂ ಮಾನ ಸನ್ಮಾನಗಳನ್ನು ದಯಪಾಲಿಸಿದ್ದರು.


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಹೊಗಳಲಿ ಪ್ರಭುವಿನಚಲ ಪ್ರೀತಿಯನು I ಜನರಿಗಾತ ಎಸಗಿದ ಅತಿಶಯಗಳನು II


ಸರ್ವಾಪತ್ತುಗಳಿಂದ ತಪ್ಪಿಸಿದೆ ಪ್ರಭು, ನನ್ನನು I ಕಂಡಿವೆ ನನ್ನ ಕಣ್ಗಳೇ ಶತ್ರುಗೊದಗಿದ ಸೋಲನು II


ನೀನಾದರೊ ಪ್ರಭು, ಸರ್ವದಾ ಇರುವೆ I ಮಹೋನ್ನತದೊಳು ವಿರಾಜಿಸುತ್ತಿರುವೆ II


ಧನ್ಯವಾದದ ಬಲಿಯನರ್ಪಿಸುವವನೇ ನನಗೆ ಸನ್ಮಾನಿತನು I ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ಧಾರವನು II


‘ನೀವು ದೇವರುಗಳು’, ‘ನೀವೆಲ್ಲರು ಪರಾತ್ಪರನ ಮಕ್ಕಳು’ ನಾನೆಂದೆ I ಆದರೂ ಅಳಿಯುವಿರಿ ಅರಸರಂತೆ, ಸಾಯುವಿರಿ ಬರಿ ಮಾನವರಂತೆ” II


ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ.


ಆದಕಾರಣ, ದೇವಜನರು ಅನುಭವಿಸುವುದಕ್ಕಿರುವ ಸಬ್ಬತ್ತೆಂಬ ವಿಶ್ರಾಂತಿ ಇನ್ನೂ ಉಳಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು