Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 92:10 - ಕನ್ನಡ ಸತ್ಯವೇದವು C.L. Bible (BSI)

10 ನಿನ್ನ ಶತ್ರುಗಳ ವಿನಾಶ ನಿಶ್ಚಿತ I ಕೆಡುಕರೆಲ್ಲ ಚದರಿ ಪೋಪುದು ಖಚಿತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಂತೆ ಎತ್ತಿದ್ದಿ; ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದರೆ ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಂತೆ ಎತ್ತಿದ್ದೀ; ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನನ್ನಾದರೋ ನೀನು ಕಾಡುಕೋಣ ಬಲಿಷ್ಠನನ್ನಾಗಿ ಮಾಡಿರುವೆ. ನಿನ್ನ ಚೈತನ್ಯ ತೈಲವನ್ನು ನನ್ನ ಮೇಲೆ ಸುರಿದಾತನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ನೀವು ನನ್ನ ಬಲವನ್ನು ಕಾಡುಕೋಣದ ಕೊಂಬಿನ ಹಾಗೆ ಬಲಪಡಿಸುವಿರಿ. ನಾನು ನೂತನ ತೈಲದಿಂದ ಅಭಿಷಿಕ್ತನಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 92:10
19 ತಿಳಿವುಗಳ ಹೋಲಿಕೆ  

ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಮುಂದೆಯೆ ನನಗೌತಣವನು I ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು II


ಅವರ ಶಕ್ತಿಸಾಮರ್ಥ್ಯದ ಪ್ರತಿಭೆ ನಿನ್ನದೆ I ನಿನ್ನ ದಯೆಯಿಂದ ನಮಗೆ ಕೋಡುಮೂಡಿದೆ II


ಪ್ರೀತಿಸಿದೆ ನೀನು ಧರ್ಮವನು ದ್ವೇಷಿಸಿದೆ ಅಧರ್ಮವನು I ಆನಂದ ತೈಲದಿಂದಭಿಷೇಕಿಸಿಹನು ನಿನ್ನ, ದೇವನು I ಮಿತ್ರರಿಗಿಂತ ಮಿಗಿಲಾಗಿ ಅಭಿಷೇಕಿಸಿಹನು ಆತನು ನಿನ್ನನು II


ನಿಮ್ಮನ್ನೂ ನಮ್ಮನ್ನೂ ಕ್ರಿಸ್ತಯೇಸುವಿನಲ್ಲಿ ಒಂದಾಗಿಸಿ ಸ್ಥಿರಪಡಿಸಿದವರು ದೇವರೇ. ನಮ್ಮನ್ನು ಅಭಿಷೇಕಿಸಿದವರೂ ಮೀಸಲಾಗಿಟ್ಟವರೂ ದೇವರೇ.


ಕತ್ತರಿಸುವನು ಕೆಡುಕರ ಕೋರೆಕೋಡುಗಳನು I ಎತ್ತರಿಸುವನು ಸಜ್ಜನರ ಕೋರೆಕೊಂಬುಗಳನು II


ನೀವಾದರೋ ಪರಿಶುದ್ಧವಾದವರಿಂದ ಅಭಿಷಿಕ್ತರಾಗಿದ್ದೀರಿ. ಸತ್ಯವನ್ನು ಅರಿತವರಾಗಿದ್ದೀರಿ.


ಉದಾರತೆಯಿಂದ ಕೊಡುವನು ಬಡವರಿಗೆ I ಫಲಿಸುವುದು ಅವನಾ ನೀತಿ ಸದಾಕಾಲಕೆ I ಮಹಿಮೆತರುವ ಕೋಡುಮೂಡುವುದು ಅವನಿಗೆ II


ಚದರಿಹೋಗುವರು ಸರ್ವೇಶ್ವರನ ವಿರೋಧಿಗಳು ಆಗಸದಿಂದಾತ ಅವರ ವಿರುದ್ಧ ಗರ್ಜಿಸಲು! ನ್ಯಾಯ ತೀರಿಸುವನಾತ ಜಗದ ಕಟ್ಟಕಡೆಯವರೆಗೆ ಶಕ್ತಿಸಾಮರ್ಥ್ಯವನೀವನು ತಾ ನೇಮಿಸಿದರಸನಿಗೆ ಏರಿಸುವನು ತನ್ನಭಿಷಿಕ್ತನ ಒಲುಮೆಯನು ಉನ್ನತಿಗೆ.


ನಿನ್ನ ಪ್ರೀತಿಸತ್ಯತೆಗಳು ಇರುವುವು ಅವನೊಂದಿಗೆ I ನನ್ನ ನಾಮ ಪ್ರಯುಕ್ತ ಕೋಡು ಮೂಡುವುದವನಿಗೆ II


ಹನ್ನಳು ಹೀಗೆಂದು ಭಜಿಸಿದಳು: “ಆನಂದಿಸುತ್ತಿದೆ ನನ್ನ ಮನ ಸರ್ವೇಶ್ವರನಲಿ ಉನ್ನತೋನ್ನತವಾಗಿದೆ ನನ್ನ ಶಕ್ತಿ ಆ ದೇವನಲಿ ನನಗಿದೆ ಶತ್ರುಗಳನ್ನೂ ಧಿಕ್ಕರಿಸುವ ಶಕ್ತಿ ನನಗಿತ್ತಿರುವನಾ ಸಂತಸದಾಯಕ ಮುಕ್ತಿ.


ಅವರನ್ನು ದೇವರೇ ಕರೆದು ತಂದರು ಈಜಿಪ್ಟಿನಿಂದ ಅವರಿಗಿದೆ ಕಾಡುಕೋಣದಂಥ ಶಕ್ತಿಸಾಮರ್ಥ್ಯ. ನಿರ್ಮೂಲ ಮಾಡುವರವರು ಶತ್ರುಗಳನ್ನು ಮುರಿದು ಹಾಕುವರು ವೈರಿಗಳ ಎಲುಬುಗಳನ್ನು; ನುಚ್ಚುನೂರು ಮಾಡುವರು ಅವರ ಬಿಲ್ಲುಬಾಣಗಳನ್ನು.


ಕೋಡೊಂದು ಮೂಡುವಂತೆ ಮಾಡುವೆ ದಾವೀದನಿಗಿಲ್ಲೆ I ನಂದಾದೀಪ ಬೆಳಗುವಂತೆ ಮಾಡುವೆ ನನ್ನ ಅಭಿಷಿಕ್ತನಿಗಿಲ್ಲೆ II


ಅವರನ್ನು ದೇವರೇ ಕರೆದು ತಂದ ಈಜಿಪ್ಟಿನಿಂದ ಅವರಿಗಿದೆ ಕಾಡುಕೋಣದಂಥ ಶಕ್ತಿಸಾಮರ್ಥ್ಯ!


ಕೋಡು ಮೂಡಿಸಿಹನು ಪ್ರಭು ತನ್ನ ಪ್ರಜೆಗೆ I ಖ್ಯಾತಿ ತಂದಿಹನು ತನ್ನ ಭಕ್ತಾದಿಗಳಿಗೆ I ತನ್ನ ಆಪ್ತಜನರಾದ ಇಸ್ರಯೇಲರಿಗೆ I ಅಲ್ಲೆಲೂಯ! II


ಉದಯಗೊಳಿಸಿರುವನಾತ ತನ್ನ ದಾಸ ದಾವೀದನ ವಂಶದೊಳು I ನಮಗೊಬ್ಬ ಶಕ್ತಿಯುತ ಮುಕ್ತಿದಾತನನು II


ಸರ್ವೇಶ್ವರನ ಶತ್ರುಗಳೆಲ್ಲರು ನಾಶವಾಗಲಿ ಇವರಂತೆ ಆತನ ಭಕ್ತರು ಬೆಳಗಲಿ ಉದಯಕಾಲದ ಸೂರ್ಯನಂತೆ! ನಾಡಿನಲಿ ನಾಲ್ವತ್ತು ವರ್ಷಕಾಲ ಶಾಂತಿ ನೆಲಸಿತ್ತು!


ಪ್ರಭು, ನಿನ್ನ ಗದರಿಕೆಯಿಂದ, ನಿನ್ನಾ ಶ್ವಾಸಭರದಿಂದ I ಕಾಣಿಸಿಕೊಂಡಿತು ಇಂಗಿಹೋದ ಸಮುದ್ರದ ತಳ I ತೋರಿಬಂದಿತು ಭೂಲೋಕದ ಅಸ್ತಿಭಾರ II


ಇಲ್ಲಮಾಡುವೆನು ಕೆಡುಕರನು ಪ್ರಭುವಿನಾ ನಗರದೊಳಗೆ I ನಾಶಮಾಡುವೆನು ನಾಡಿನ ದುರುಳರನು ದಿನದಿನಗಳೊಳಗೆ II


ಅಕ್ರಮಿಗಳ ದುರ್ಗತಿ ದುರ್ಮಾರ್ಗಿಗಳಿಗೆ I ಶುಭವಾಗಲಿ ಪ್ರಭೂ, ಇಸ್ರಯೇಲರಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು