Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 92:11 - ಕನ್ನಡ ಸತ್ಯವೇದವು C.L. Bible (BSI)

11 ನಾ ಕಣ್ಣಾರೆ ಕಂಡಿರುವೆ ಶತ್ರುಗಳಿಗಾದ ದುರ್ಗತಿಯನು I ಕಿವಿಯಾರೆ ಕೇಳಿರುವೆ ನನ್ನ ವಿರೋಧಿಗಳಿಗಾದ ವಿಪತ್ತನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನ ಶತ್ರುಗಳಿಗುಂಟಾದ ದುರ್ಗತಿಯನ್ನು ಕಣ್ಣಾರೆ ಕಂಡಿದ್ದೇನೆ; ನನಗೆ ವಿರುದ್ಧವಾಗಿ ಎದ್ದವರ ವಿಪತ್ತನ್ನು ಕಿವಿಯಾರೆ ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನನ್ನ ಶತ್ರುಗಳಿಗುಂಟಾದ ದುರ್ಗತಿಯನ್ನು ಕಣ್ಣಾರೆ ಕಂಡಿದ್ದೇನೆ; ನನಗೆ ವಿರೋಧವಾಗಿ ಎದ್ದವರ ವಿಪತ್ತನ್ನು ಕಿವಿಯಾರೆ ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ವೈರಿಗಳು ನನ್ನ ಸುತ್ತಲೂ ಸೇರಿಬಂದಿದ್ದಾರೆ. ಅವರು ಆಕ್ರಮಣಕ್ಕೆ ಸಿದ್ಧವಾಗಿರುವ ಬಲಿಷ್ಠವಾದ ಹೋರಿಗಳಂತಿದ್ದಾರೆ. ಅವರು ನನ್ನ ಬಗ್ಗೆ ಹೇಳುತ್ತಿರುವುದೂ ನನಗೆ ಕೇಳುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನನ್ನ ಕಣ್ಣು ನನ್ನ ವಿರೋಧಿಗಳ ಸೋಲನ್ನು ದೃಷ್ಟಿಸುವುದು. ನನಗೆ ವಿರೋಧವಾಗಿ ಏಳುವ ದುರ್ಮಾರ್ಗಿಗಳ ವಿಪತ್ತನ್ನು ಕುರಿತು ನಾನು ಕೇಳಿಸಿಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 92:11
7 ತಿಳಿವುಗಳ ಹೋಲಿಕೆ  

ನೀನಿದನು ಕಣ್ಣಾರೆ ಕಾಣುವೆ I ದುರುಳರ ದಂಡನೆಯನು ನೋಡುವೆ II


ಎಂತಲೆ ಸ್ವಂತ ಇಚ್ಛೆಯಿಂದ ಬಲಿಯನರ್ಪಿಸುವೆ ನಿನಗೆ I ಧನ್ಯವಾದ ಪ್ರಭು, ನಿನ್ನ ಸರ್ವೋತ್ತಮ ನಾಮಕೆ II


ದೃಢವಿದೆ ಅವನ ಮನ, ಎದೆಗುಂದನವನು I ಕಾಣುವನು ದುರುಳರಿಗಾಗುವ ದಂಡನೆಯನು II


ಪ್ರೀತಿಯಿಂದ ನೆರವಾಗುವನು ದೇವನೆನಗೆ I ಶತ್ರುಗಳಿಗಾದ ಸೋಲನು ತೋರಿಸುವನೆನಗೆ II


ಪ್ರಭುವನು ನಂಬಿ ನಡೆ ಆತನ ಪಥದಲೇ I ಉದ್ಧಾರವಾಗುವೆ, ನಾಡಿಗೊಡೆಯನಾಗುವೆ I ದುಷ್ಟರ ವಿನಾಶವನು ಕಣ್ಣಾರೆ ಕಾಣುವೆ II


ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಮುಂದೆಯೆ ನನಗೌತಣವನು I ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು II


ಉದಾರತೆಯಿಂದ ಕೊಡುವನು ಬಡವರಿಗೆ I ಫಲಿಸುವುದು ಅವನಾ ನೀತಿ ಸದಾಕಾಲಕೆ I ಮಹಿಮೆತರುವ ಕೋಡುಮೂಡುವುದು ಅವನಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು