Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 92:15 - ಕನ್ನಡ ಸತ್ಯವೇದವು C.L. Bible (BSI)

15 ಈ ಪರಿ ಪಡೆವುದು ಸಾಕ್ಷ್ಯ ಪ್ರಭುವಿನಾ ಸತ್ಯಸಂಧತೆ I ಆತನೇ ನನಗೆ ಪೊರೆಬಂಡೆ, ಆತನಲ್ಲಿಲ್ಲ ವಕ್ರತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು. ಆತನೇ ನನ್ನ ಬಂಡೆಯು; ಆತನು ನಿರ್ವಂಚಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು. ಆತನೇ ನನ್ನ ಬಂಡೆಯು; ಆತನು ನಿರ್ವಂಚಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋವನು ಒಳ್ಳೆಯವನೆಂಬುವುದಕ್ಕೆ ಅವರು ದೃಷ್ಟಾಂತವಾಗಿರುವರು. ಆತನೇ ನನ್ನ ಬಂಡೆ. ಆತನು ಎಂದಿಗೂ ತಪ್ಪು ಮಾಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಯೆಹೋವ ದೇವರು ಯಥಾರ್ಥವಂತರೂ ನನ್ನ ಬಂಡೆಯೂ ಆಗಿದ್ದಾರೆ. ಅವರಲ್ಲಿ ಅನೀತಿ ಇರುವುದಿಲ್ಲ,” ಎಂದು ನೀತಿವಂತರು ಘೋಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 92:15
17 ತಿಳಿವುಗಳ ಹೋಲಿಕೆ  

ಪ್ರಭುವೇ ನನ್ನ ಕಲ್ಲುಕೋಟೆ, ನನಗೆ ವಿಮೋಚಕ I ಆತನೇ ನನ್ನ ದೇವ, ನನ್ನಾಶ್ರಯ ದುರ್ಗ I ಆತನೆನಗೆ ಗುರಾಣಿ, ಗಿರಿ, ರಕ್ಷಣಾಶೃಂಗ II


ಹೀಗಿರಲಾಗಿ, ನಾವು ಏನೆಂದು ಹೇಳೋಣ? ದೇವರಲ್ಲಿ ಅನ್ಯಾಯವಿದೆಯೆಂದು ಹೇಳೋಣವೆ? ಎಂದಿಗೂ ಅಲ್ಲ.


ಆತನೆನಗೆ ದುರ್ಗ, ರಕ್ಷಕ, ಶರಣು I ನಾನೆಂದಿಗೂ ಕದಲಿ ಬೀಳೆನು II


ಎಲ್ಲ ಜೀವಿಗಳಿಗೆ ನೀ ಕೈ ನೀಡುವವನು I ಎಲ್ಲರ ಕೋರಿಕೆಗಳನು ಈಡೇರಿಸುವವನು II


ಹೀಗಿರಲು ಬುದ್ದಿವಂತರೇ, ನನ್ನ ಮಾತುಗಳಿಗೆ ಕಿವಿಗೊಡಿ ದೇವರು ಕೆಟ್ಟದ್ದನ್ನು ಮಾಡಿಯಾನೆಂಬ ಯೋಚನೆ ದೂರವಿರಲಿ ಸರ್ವಶಕ್ತನು ಅನ್ಯಾಯವನು ಎಸಗಿಯಾನೆಂಬ ಭಾವನೆ ಬಾರದಿರಲಿ.


“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ಆದರೆ ಅದರ ಮಧ್ಯೆಯಿರುವ ಸರ್ವೇಶ್ವರ ನ್ಯಾಯಸ್ವರೂಪಿ, ಎಂದಿಗೂ ಅನ್ಯಾಯ ಮಾಡುವುದಿಲ್ಲ. ದಿನದಿನವೂ ತಪ್ಪದೆ ನ್ಯಾಯ ದೊರಕಿಸುತ್ತಾರೆ. ಅವರಿಗೆ ಗುಟ್ಟಾಗಿರುವುದು ಯಾವುದೂ ಇಲ್ಲ. ಅನ್ಯಾಯಮಾಡುವವನಿಗಾದರೋ ನಾಚಿಕೆ ಎಂಬುದೇ ಇಲ್ಲ.


ಮೋಶೆ ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ, ಅವನ ಜೀವಕಳೆ ಕುಂದಿಹೋಗಿರಲಿಲ್ಲ.


ನದಿಯ ಬದಿಯಲೇ ಬೆಳೆದಿಹ ಮರದಂತೆ I ಸಕಾಲಕೆ ಫಲವೀವ ವೃಕ್ಷದಂತೆ I ಎಲೆಬಾಡದೆ ಪಸಿರಿರುವ ತರುವಂತೆ I ಸಿಗುವುದು ಅವನ ಕಾರ್ಯಗಳಿಗೆ ಸಫಲತೆ II


ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರು ಬಾಳುವರು ದೀರ್ಘಕಾಲ; ದುರುಳ ಜನರ ಜೀವಮಾನವೋ ಅಲ್ಪಕಾಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು