Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 92:2 - ಕನ್ನಡ ಸತ್ಯವೇದವು C.L. Bible (BSI)

2 ಪ್ರಾತಃಕಾಲದಲೆ ನಿನ್ನ ಪ್ರೀತಿಯನು I ರಾತ್ರಿಕಾಲದಲೆ ನಿನ್ನ ಸತ್ಯತೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ವೀಣೆ, ಸ್ವರಮಂಡಲಗಳಿಂದಲೂ, ಕಿನ್ನರಿಯ ಘನಸ್ವರದಿಂದಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ವೀಣಾಸ್ವರಮಂಡಲಗಳಿಂದಲೂ ಕಿನ್ನರಿಯ ಘನಸ್ವರದಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2-3 ಹತ್ತು ತಂತಿವಾದ್ಯಗಳನ್ನೂ ಹಾರ್ಪ್ ಮತ್ತು ಲೈರ್ ವಾದ್ಯಗಳನ್ನೂ ನುಡಿಸುತ್ತಾ ನಿನ್ನ ಪ್ರೀತಿಯ ಕುರಿತು ಮುಂಜಾನೆಯಲ್ಲಿಯೂ ನಿನ್ನ ನಂಬಿಗಸ್ತಿಕೆಯ ಕುರಿತು ರಾತ್ರಿಯಲ್ಲಿಯೂ ಹಾಡುವುದು ಯುಕ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಬೆಳಿಗ್ಗೆ ನಿಮ್ಮ ಪ್ರೀತಿ ಕರುಣೆಯನ್ನೂ ಪ್ರತಿ ರಾತ್ರಿ ನಿಮ್ಮ ನಂಬಿಕೆಯನ್ನೂ ಸಾರುವುದು ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 92:2
14 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸು ಕ್ರಿಸ್ತರ ಮುಖಾಂತರ ಬಂದವು.


ಸ್ಮರಿಸುವೆನು ಸರ್ವೇಶ್ವರನ ಸ್ತುತ್ಯಕಾರ್ಯಗಳನು ಆತನ ಅಚಲಪ್ರೀತಿಯನು, ಕೃಪಾತಿಶಯಗಳನು. ಹೊಗಳುವೆನು ಆತನೆಮಗೆ ಅನುಗ್ರಹಿಸಿದ ಎಲ್ಲ ವರದಾನಗಳಿಗಾಗಿ ಇಸ್ರಯೇಲ್ ವಂಶಜರಿಗೆ ಮಾಡಿದ ಮಹೋಪಕಾರಗಳಿಗಾಗಿ.


ಹಗಲಲಿ ಪ್ರೀತಿಯನುಗ್ರಹಿಸಲಿ ದೇವನೆನಗೆ I ಇರುಳಲಿ ಎನ್ನಯ ಬಾಯಲ್ಲಿರಲಿ ಆತನ ಗೀತೆ I ಪ್ರಾರ್ಥನೆ ಸಲ್ಲಲಿ ಎನ್ನ ಜೀವಾಧಾರ ದೇವಗೆ II


ಸುಮಾರು ನಡುರಾತ್ರಿಯ ಸಮಯ. ಪೌಲ ಮತ್ತು ಸೀಲ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು.


ವರ್ಣಿಸುವೆನು ದಿನವೆಲ್ಲ ನಿನ್ನ ನ್ಯಾಯನೀತಿಯನು I ವಿವರಿಸಲು ಅಸದಳವಾದ ನಿನ್ನಗಣಿತ ರಕ್ಷಣೆಯನು II


ಹೊಗಳುವೆನು ನಾ ದಿನದಿನವೂ ನಿನ್ನನು I ಭಜಿಸುವೆನೆಂದೆಂದಿಗೂ ನಿನ್ನ ಹೆಸರನು II


ಆದರೆ ‘ನಮ್ಮನ್ನು ಸೃಷ್ಟಿಸಿದ ಕರ್ತನೆಲ್ಲಿ? ಕತ್ತಲಲ್ಲೂ ಕೀರ್ತನೆ ಹಾಡಬಲ್ಲವನೆಲ್ಲಿ?


ಸಂಕಟದ ವೇಳೆಯೊಳು ಸ್ವಾಮಿಯನು ನಾ ಕರೆದೆ I ಇರುಳೆಲ್ಲ ಆಯಾಸವರಿಯದೆ ಕೈಚಾಚಿದೆ I ಎನ್ನ ಮನಸ್ಸಿತ್ತು ದುಃಖಶಮನಗೊಳ್ಳದೆ II


ದಾವೀದನು ಹಾಗೂ ಆರಾಧಕ ಮಂಡಲಿಯ ಮುಖ್ಯಸ್ಥರು ಕಿನ್ನರಿ, ಸ್ವರಮಂಡಲ, ತಾಳ ಇವುಗಳನ್ನು ಬಾರಿಸುತ್ತಾ, ಪರವಶರಾಗಿ ಗಾಯನ ಸೇವೆ ಮಾಡುವುದಕ್ಕಾಗಿ ಆಸಾಫ್ಯರನ್ನೂ ಹೇಮಾನ್ಯರನ್ನೂ ಯೆದುತೂನ್ಯರನ್ನೂ ಆರಿಸಿದರು. ಈ ಸೇವೆಯನ್ನು ಮಾಡಬೇಕಾಗಿದ್ದ ಪುರುಷರ ಪಟ್ಟಿ:


ನಿನ್ನ ಕಂಡು ನನ್ನ ವೈರಿಗಳು ಗೈದರು ಪಲಾಯನ I ಎದ್ದು ಬಿದ್ದು ಅವರೆಲ್ಲರೂ ಹೊಂದಿದರು ವಿನಾಶನ II


ಪ್ರೀತಿನೀತಿಗಳ ಕುರಿತು ಹಾಡುವೆನು I ಹೇ‍ ಪ್ರಭೂ, ನಿನ್ನನೆ ಹಾಡಿಹೊಗಳುವೆನು II


ನಮ್ಮ ದೇವರನು ಹೊಗಳಿ ಹಾಡುವುದು ಉಚಿತ I ಆತನ ಸ್ತುತಿ ಮನೋಹರ, ಅದು ಬಲುಸೂಕ್ತ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು