Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 92:4 - ಕನ್ನಡ ಸತ್ಯವೇದವು C.L. Bible (BSI)

4 ನಿನ್ನ ಕಾರ್ಯಗಳಿಂದ ಪ್ರಭು, ನನ್ನನ್ನು ಆನಂದಗೊಳಿಸಿರುವೆ I ನಿನ್ನಾ ಕಾರ್ಯಗಳ ನೋಡಿ, ನಾನು ಉಲ್ಲಾಸದಿಂದ ಹಾಡುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದಿ; ನಿನ್ನ ಕೆಲಸಗಳಿಗಾಗಿ ಉತ್ಸಾಹಧ್ವನಿ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದೀ; ನಿನ್ನ ಕೆಲಸಗಳ ದೆಸೆಯಿಂದ ಉತ್ಸಾಹಧ್ವನಿ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನೇ, ನಿನ್ನ ಕಾರ್ಯಗಳಿಂದ ನಮ್ಮನ್ನು ನಿಜವಾಗಿಯೂ ಸಂತೋಷಗೊಳಿಸಿರುವೆ. ಅವುಗಳ ಕುರಿತು ನಾವು ಹರ್ಷದಿಂದ ಹಾಡುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರೇ, ನಿಮ್ಮ ಕ್ರಿಯೆಯಿಂದ ನನ್ನನ್ನು ಸಂತೋಷಪಡಿಸಿದ್ದೀರಿ. ನಿಮ್ಮ ಕೈಕೆಲಸಗಳಲ್ಲಿ ಜಯಧ್ವನಿಗೈಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 92:4
20 ತಿಳಿವುಗಳ ಹೋಲಿಕೆ  

ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನಮ್ಮನ್ನು ಸದಾ ವಿಜಯೋತ್ಸವದತ್ತ ನಡೆಸುವ ಹಾಗು ಕ್ರಿಸ್ತಜ್ಞಾನವೆಂಬ ಪರಿಮಳವನ್ನು ಎಲ್ಲೆಡೆಯಲ್ಲೂ ನಮ್ಮ ಮೂಲಕ ಪಸರಿಸುವ ದೇವರಿಗೆ ವಂದನೆಗಳು.


ಒಡೆಯನಾಗಿಸಿದೆ ನಿನ್ನಯ ಕರಕೃತಿಗಳಿಗೆ I ಒಳಪಡಿಸಿದೆ ಸಕಲವನು ಅವನ ಪಾದದಡಿಗೆ II


“ಎನ್ನ ಮನ ಮಾಡುತ್ತಿದೆ ಸರ್ವೇಶ್ವರನ ಸ್ತುತಿ I ಉಲ್ಲಾಸಿಸುತ್ತಿದೆ ಮುಕ್ತಿದಾತ ದೇವನಲಿ II


ಪ್ರಭು ನಮಗೆ ಮಹತ್ಕಾರ್ಯ ಮಾಡಿದುದು ಖಚಿತ I ಎಂತಲೆ ನಾವಾನಂದಭರಿತರಾಗುವುದು ಉಚಿತ II


ನಿಮಗೆ ಈಗ ದುಃಖವಿದೆ; ನಾನು ನಿಮ್ಮನ್ನು ಮರಳಿ ಕಂಡಾಗ, ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳುವುದಿಲ್ಲ.


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ನೆನಸಿಕೊಳ್ಳುತಿಹೆನು ಹಳೆಯ ಕಾಲವನು I ಧ್ಯಾನಿಸುತಿಹೆನು ನಿನ್ನ ಕಾರ್ಯಗಳನು I ಸ್ಮರಿಸುತಿಹೆನು ನಿನ್ನ ಕೈಕೆಲಸಗಳನು II


ಸರ್ವೇಶ್ವರ ಹೀಗೆನ್ನುತ್ತಾರೆ: “ಯಕೋಬನನ್ನು ಕುರಿತು ಹರ್ಷಧ್ವನಿಗೈಯಿರಿ ಜನಾಂಗಗಳಾ ಶಿರೋಮಣಿಗೆ ಜೈಕಾರಮಾಡಿರಿ. ‘ಸರ್ವೇಶ್ವರ ಆಳಿದುಳಿದಾ ಇಸ್ರಯೇಲರನ್ನು ರಕ್ಷಿಸಿಹನು’ ಎಂದು ಘೋಷಿಸುತ್ತಾ ಸ್ತುತಿಸಿರಿ.


ಸ್ವಾಮಿದೇವನ ಮಹಿಮೆಯಿರಲಿ ಶಾಶ್ವತವಾಗಿ I ಆತ ಸಂತೋಷಿಸಲಿ ತನ್ನ ಸುಕೃತ್ಯಗಳಿಗಾಗಿ II


ಪ್ರಕಟವಾಗಲಿ ನಿನ್ನ ರಕ್ಷಾಕಾರ್ಯ ಭಕ್ತರಿಗೆ I ನಿನ್ನ ಮಹಿಮಾಶಕ್ತಿ ಅವರ ಸಂತಾನಕೆ II


ಹರ್ಷಿಸಲಿ ಸಜ್ಜನರು ಪ್ರಭುವಿನಲಿ I ಆಶ್ರಯ ಪಡೆಯಲೀಗಲೆ ಆತನಲಿ I ನೇರ ಹೃದಯಿಗಳೆಲ್ಲರು ಹಿಗ್ಗಲಿ II


ಆತನಿಗೊಲಿಯಲಿ ನನ್ನ ಧ್ಯಾನ I ಆತನಲೇ ಹರ್ಷಿಸಲಿ ನನ್ನ ಮನ II


ಪ್ರಭುವನು ಕೊಂಡಾಡಿ ಕಿನ್ನರಿಯನು ನುಡಿಸುತ I ಕೀರ್ತಿಸಿ ದಶತಂತಿ ವೀಣೆಯನು ಬಾರಿಸುತ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು