Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 92:5 - ಕನ್ನಡ ಸತ್ಯವೇದವು C.L. Bible (BSI)

5 ಪ್ರಭು, ನಿನ್ನ ಕೃತ್ಯಗಳೆನಿತೋ ಅಮೂಲ್ಯ I ನಿನ್ನಾಲೋಚನೆಗಳು ಎನಿತೋ ಅಶೋಧ್ಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ; ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ; ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನೇ, ನೀನು ಅಂತಹ ಮಹಾಕಾರ್ಯಗಳನ್ನು ಮಾಡಿರುವೆ. ನಿನ್ನ ಆಲೋಚನೆಗಳನ್ನು ಗ್ರಹಿಸಿಕೊಳ್ಳಲು ನಮ್ಮಿಂದಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರೇ, ನಿಮ್ಮ ಕೃತ್ಯಗಳು ಎಷ್ಟೋ ಮಹತ್ತಾದದ್ದು. ನಿಮ್ಮ ಯೋಚನೆಗಳು ಬಹು ಆಳವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 92:5
15 ತಿಳಿವುಗಳ ಹೋಲಿಕೆ  

ಪ್ರಭು, ಎನ್ನ ದೇವ, ನಿನಗೆ ಸಮಾನತೆ ಎಲ್ಲಿಯದು I ನೀನೆಸಗಿದ ಪವಾಡ ಪ್ರಯೋಜನಗಳೆನಿತು I ಅಗಣಿತವಾದವುಗಳ ವಿವರ ಅಸದಳವಾದುದು II


ದೇವಾ, ನಿನ್ನ ಯೋಚನೆಗಳೆಷ್ಟು ಅಮೂಲ್ಯ I ಅವುಗಳೆಷ್ಟು ಅಸಂಖ್ಯ, ನನಗದೆಷ್ಟು ಅಗಣ್ಯ II


ನಮಗಾದರೋ ದೇವರು ಪವಿತ್ರಾತ್ಮ ಅವರ ಮುಖಾಂತರ ಇವುಗಳನ್ನು ಪ್ರಕಟಿಸಿದ್ದಾರೆ. ಸಕಲವನ್ನು ಹಾಗೂ ದೇವರ ಅಂತರಾಳವನ್ನು ಅವಲೋಕಿಸುವವರು ಈ ಪವಿತ್ರಾತ್ಮರೇ.


ಮಹತ್ತಾದವು ಪ್ರಭುವಿನಾ ಕಾರ್ಯಗಳು I ಕೊಂಡಾಡುವರು ಅವುಗಳನು ಭಕ್ತಾದಿಗಳು II


ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.


ಈ ವಿವೇಕವು ಕೂಡ ಸೇನಾಧೀಶ್ವರ ಸರ್ವೇಶ್ವರನಿಂದಲೇ ಬರುತ್ತದೆ. ಅವರ ಆಲೋಚನೆ ಅತಿಶಯವಾದುದು. ಅವರ ಜ್ಞಾನ ಸರ್ವಶ್ರೇಷ್ಠವಾದುದು.


ಸೃಜಿಸಿರುವೆ ಎಲ್ಲವನು ಸುಜ್ಞಾನದಿಂದ I ಜಗವೆಲ್ಲ ತುಂಬಿದೆ ನಿನ್ನ ಸೃಷ್ಟಿಯಿಂದ II


“ನಿನ್ನ ಕಾರ್ಯಗಳೆನಿತೋ ಚೇತೋಹಾರಿ I ನಿನ್ನ ಪರಾಕ್ರಮಕೆ ಶತ್ರುಗಳು ಪರಾರಿ II


ಸರ್ವೇಶ್ವರ ತಮ್ಮ ಅಂತರಾಳದ ಸಂಕಲ್ಪಗಳನ್ನು ನಡೆಸಿ ನೆರವೇರಿಸುವ ತನಕ ಅವರ ಆ ಕೋಪವು ಹಿಂದಿರುಗದು. ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸಿಕೊಳ್ಳುವಿರಿ.


ಮಹೋನ್ನತವೂ ನಿಗೂಢವೂ ಆದ ತತ್ವವನ್ನು ಅರಿತುಕೊಳ್ಳಬಲ್ಲವರಾರು?


ನಿನ್ನ ನೀತಿ ಸುರಗಿರಿಯಂತೆ, ನಿನ್ನ ನ್ಯಾಯ ಮಹಾಸಾಗರದಂತೆ I ಮಾನವರನು, ಪಶುಪ್ರಾಣಿಗಳನು ಪ್ರಭು, ಸಲಹುವೆ ರಕ್ಷಕನಂತೆ II


ಅವರು ಹೂಡಿರುವುದು ಕುತಂತ್ರವನು I ಕೊಚ್ಚಿಕೊಳ್ವುದು ಚತುರೋಪಾಯವನು I ಅಶೋಧ್ಯ ಮಾನವನ ಹೃನ್ಮನಗಳು! II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು