Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 93:3 - ಕನ್ನಡ ಸತ್ಯವೇದವು C.L. Bible (BSI)

3 ಸಮುದ್ರಗಳು ಪ್ರಭು, ಮೊರೆಯುತಿಹವು I ಗರ್ಜನೆಗೈದು ಭೋರ್ಗರೆಯುತಿಹವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನೇ, ನದಿಗಳು ಮೊರೆದವು, ನದಿಗಳು ಭೋರ್ಗರೆದವು; ನದಿಗಳು ಘೋಷಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನೇ, ನದಿಗಳು ಮೊರೆದವು, ನದಿಗಳು ಭೋರಿಟ್ಟವು; ನದಿಗಳು ಘೋಷಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನೇ, ನದಿಗಳ ಶಬ್ದವು ಮೊರೆಯುತ್ತಿದೆ. ರಭಸದಿಂದ ಬಡಿಯುತ್ತಿರುವ ಅಲೆಗಳು ಭೋರ್ಗರೆಯುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರೇ, ಸಮುದ್ರಗಳಲ್ಲಿ ಪ್ರವಾಹಗಳು ಮೊರೆಯುತ್ತಿವೆ. ಸಮುದ್ರಗಳು ತಮ್ಮ ಧ್ವನಿಯನ್ನು ಎತ್ತಿವೆ. ಸಮುದ್ರಗಳು ತಮ್ಮ ಅಲೆಗಳ ಘೋಷವನ್ನು ಎತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 93:3
17 ತಿಳಿವುಗಳ ಹೋಲಿಕೆ  

ಹರ್ಷಿಸಲಿ ಆಕಾಶವು, ಸಂತೋಷಿಸಲಿ ಭೂಲೋಕವು I ಗರ್ಜಿಸಲಿ ಸಮುದ್ರವು ಮತ್ತು ಅದರೊಳಿರುವುದೆಲ್ಲವು II


ನನಗೆ ಸುತ್ತಿಕೊಂಡವು ಮೃತ್ಯುಪಾಶಗಳು I ನಡುಕ ಹುಟ್ಟಿಸಿದ್ದವು ವಿನಾಶಪ್ರವಾಹಗಳು II


ಆ ದೇವದೂತನು ಮುಂದುವರೆದು ಹೀಗೆ ನುಡಿದನು : “ಜಲರಾಶಿಗಳ ಮೇಲೆ ನಿಂತಿದ್ದ ಆ ವೇಶ್ಯೆಯನ್ನು ನೋಡಿದೆಯಲ್ಲಾ ! ಆ ಜಲರಾಶಿಯು ಜನಾಂಗಗಳನ್ನೂ ಜನಸಮೂಹವನ್ನೂ ರಾಷ್ಟ್ರಗಳನ್ನೂ ಭಾಷೆಗಳನ್ನೂ ಸೂಚಿಸುತ್ತದೆ.


ಹೊರಡುವಿರಿ ನೀವು ಆನಂದಭರಿತರಾಗಿ ಬರುವಿರಿ ನೆಮ್ಮದಿಯಿಂದ ಸಾಲಾಗಿ. ನಿಮ್ಮ ಮುಂದೆ ತಟ್ಟಾಡುವುವು ಬೆಟ್ಟಗುಡ್ಡಗಳು ಚಪ್ಪಾಳೆ ಹೊಡೆಯುವುವು ಅಡವಿಯ ಗಿಡಮರಗಳು.


ಆ ಘಟಸರ್ಪ ತನ್ನ ಬಾಯಿಂದ ನೀರನ್ನು ನದಿಯಂತೆ ಸುರಿಸುತ್ತಾ ಅದರಲ್ಲಿ ಆ ಮಹಿಳೆಯನ್ನು ಕೊಚ್ಚಿಕೊಂಡು ಹೋಗುವಂತೆ ಮಾಡಲು ಯತ್ನಿಸಿತು.


ಸಾಗರದ ಉದರಕೆ ನೀನೆನ್ನ ತಳ್ಳಿರುವೆ ಅಗಾಧ ಜಲದೊಳಗೆ ದೂಡಿರುವೆ. ಸುತ್ತಮುತ್ತಲಿದೆ ಪ್ರವಾಹದ ಹೊಡೆತ ಮೇಲ್ಗಡೆ ಅಬ್ಬರಿಪ ಅಲೆಗಳ ಭೋರ್ಗರೆತ!


ಸಮುದ್ರ ಭೋರ್ಗರೆದರೇನು? ನೊರೆಕಾರಿದರೇನು? I ಅದರೊಡನೆ ಪರ್ವತಗಳು ಅಲುಗಾಡಿದರೇನು? II ನಮ್ಮ ಕಡೆಗಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವನು ನಮಗಾಶ್ರಯ ದುರ್ಗವು II


ನದಿಯೊಂದು ಆನಂದಗೊಳಿಸುವುದು ದೇವನಗರವನು I ಪುನೀತಗೊಳಿಸುವುದು ಪರಾತ್ಪರನ ನಿವಾಸವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು