Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 93:5 - ಕನ್ನಡ ಸತ್ಯವೇದವು C.L. Bible (BSI)

5 ನಿನ್ನ ಆಜ್ಞೆಗಳು ಪ್ರಭು, ಸುಸ್ಥಿರ I ನಿನ್ನ ಆಲಯಕೆ ಪವಿತ್ರತೆ ಅರ್ಹ I ಯುಗಯುಗಾಂತರಕೂ ಅದು ಅರ್ಹ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನೇ, ನಿನ್ನ ಕಟ್ಟಳೆಗಳು ಬಹುಖಂಡಿತವಾಗಿವೆ; ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನೇ, ನಿನ್ನ ಆಜ್ಞೆಗಳು ಬಹುಖಂಡಿತವಾಗಿವೆ; ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನೇ, ನಿನ್ನ ಕಟ್ಟಳೆಗಳು ಶಾಶ್ವತವಾಗಿವೆ. ನಿನ್ನ ಪವಿತ್ರಾಲಯವು ಬಹುಕಾಲದವರೆಗೆ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದೇವರೇ, ನಿಮ್ಮ ಶಾಸನಗಳು ಬಹಳ ನಿಶ್ಚಯವಾದವುಗಳು. ಯೆಹೋವ ದೇವರೇ, ಪರಿಶುದ್ಧತೆಯು ಸದಾಕಾಲ ನಿಮ್ಮ ಆಲಯವನ್ನು ಅಲಂಕರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 93:5
24 ತಿಳಿವುಗಳ ಹೋಲಿಕೆ  

ಹೃದಯಾನಂದಕರ ನಿನ್ನ ಕಟ್ಟಳೆಗಳು I ನನಗಮರ ಸ್ವಾಸ್ತ್ಯವಾದುವುವು ಅವುಗಳು II


ಅಪೂರ್ವವಾದ ನಿನ್ನ ಕಟ್ಟಳೆಗಳನು I ಹೃತ್ಪೂರ್ವಕವಾಗಿ ನಾ ಪಾಲಿಪೆನು II


ಸ್ತುತಿಸಿರಿ ಆತನ ಶ್ರೀನಾಮ ಮಹಿಮೆಯನು I ಪೂಜಿಸಿರಿ ಪವಿತ್ರಾಂಬರರಾಗಿ ಆತನನು II


“ನಿಮ್ಮ ದೇವರಾದ ಸರ್ವೇಶ್ವರನೆಂಬ ನಾನು ಪರಿಶುದ್ಧ ನಾಗಿರುವಂತೆ ನೀವು ಕೂಡ ಪರಿಶುದ್ಧ ರಾಗಿರಬೇಕು .


ನೀತಿಯುತ ಹಾಗೂ ಶಾಶ್ವತ ನಿನ್ನಾ ಶಾಸನ I ನಾ ಜೀವಿಸುವಂತೆ ದಯಪಾಲಿಸೆನಗೆ ಸುಜ್ಞಾನ II


ಸತ್ಯವಾದುವು ನೀನಿತ್ತ ಕಟ್ಟಳೆಗಳು I ಪೂರ್ಣವಿಶ್ವಾಸನೀಯವಾದುವು ಅವುಗಳು II


ಎಲ್ಲರೊಂದಿಗೂ ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ; ಪರಿಶುದ್ಧತೆಯನ್ನು ಅರಸಿರಿ; ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವಂತಿಲ್ಲ.


‘ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸೋಣ’ ಎಂದು ಅವರು ಹೇಳುವತನಕ ಅವರಿಗೆ ಜ್ಞಾನೋದಯವಾಗುವುದಿಲ್ಲ.


ಘನಪಡಿಸಿರೆಮ್ಮ ಸ್ವಾಮಿ ದೇವನನು I ಶ್ರೀಪರ್ವತದಲಿ ವಂದಿಸಿ ಆತನನು I ಪರಮಪವಿತ್ರನು ಆ ನಮ್ಮ ದೇವನು II


ಪರಮ ಪಾವನನು ನಮ್ಮೀ ಸ್ವಾಮಿ ದೇವನು I ಹೊಗಳಿರಿ, ಆತನ ಪಾದಪೀಠಕೆ ಅಡ್ಡಬೀಳಿರಿ ನೀವೆಲ್ಲರು II


ಆದರೆ ಅಶುದ್ಧವಾದುದು ಯಾವುದೂ ಅದನ್ನು ಸೇರಲಾರದು. ಅಂತೆಯೇ, ಹೇಯ ಕೃತ್ಯಗಳನ್ನೆಸಗುವವನೂ ಅಸತ್ಯವನ್ನು ಆಡುವವನೂ ಅದನ್ನು ಸೇರಲಾರನು. ಯಜ್ಞದ ಕುರಿಮರಿಯ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳು ಲಿಖಿತವಾಗಿವೆಯೋ ಅಂಥವರು ಮಾತ್ರ ಅದನ್ನು ಪ್ರವೇಶಿಸಬಲ್ಲರು.


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ಆಗ ಮೋಶೆ ಆರೋನನಿಗೆ: “’ನನ್ನ ಬಳಿಯಿರುವವರ ಮುಖಾಂತರವೆ ನನ್ನ ಪರಿಶುದ್ಧತೆಯನ್ನು ತೋರ್ಪಡಿಸುವೆ ಜನರೆಲ್ಲರ ಸಮ್ಮುಖದಲೆ ನನ್ನ ಮಹಿಮೆಯನು ಶೃತಪಡಿಸುವೆ, ಎಂಬ ಸರ್ವೇಶ್ವರನ ನುಡಿಗೆ ಇದೊಂದು ದೃಷ್ಟಾಂತವೇ ಸರಿ,” ಎಂದನು. ಅದಕ್ಕೆ ಆರೋನನು ಮೌನವಾಗಿದ್ದನು.


ದೇವರು ಆತ್ಮಸ್ವರೂಪಿ, ಅವರನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸತಕ್ಕದ್ದು,” ಎಂದು ಹೇಳಿದರು.


ಹೊರಡಿರಿ, ನೀವು ಹೊರಡಿರಿ ಬಾಬಿಲೋನಿನಿಂದ ಅಶುದ್ಧವಾದುವನ್ನು ಮುಟ್ಟದೆ ತೆರಳಿ ಅಲ್ಲಿಂದ. ಸರ್ವೇಶ್ವರನ ಆರಾಧನಾ ಉಪಕರಣಗಳನು ಹೊರುವವರೇ, ನಿಮ್ಮನು ನೀವೆ ಪರಿಶುದ್ಧವಾಗಿಸಿರಿಕೊಂಡು ತೆರಳಿ ಹೊರಗೆ.


“ಚೊಕ್ಕ ಬಂಗಾರದ ಪಟ್ಟಿಯೊಂದನ್ನು ಮಾಡಿಸಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರ ಮೇಲೆ ‘ಸರ್ವೇಶ್ವರನಿಗೆ ಮೀಸಲು’ ಎಂಬ ಲಿಪಿಯನ್ನು ಕೆತ್ತಿಸಬೇಕು.


“ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನೇ ಶುದ್ಧಪಡಿಸಿಕೊಂಡು, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನ ಪವಿತ್ರಾಲಯದಿಂದ ಹೊಲಸನ್ನೆಲ್ಲಾ ಹೊರಗೆ ಹಾಕಿ, ಆಲಯವನ್ನು ಶುದ್ಧೀಕರಿಸಿರಿ.


ಇದೇ ದೇವಸ್ಥಾನದ ನಿಯಮ. ಪರ್ವತಾಗ್ರದಲ್ಲಿನ ಅದರ ಪ್ರದೇಶವೆಲ್ಲ ಸುತ್ತುಮುತ್ತಲು ಅತಿಪರಿಶುದ್ಧವಾಗಿರಬೇಕು. ಇಗೋ, ದೇವಸ್ಥಾನದ ನಿಯಮ ಇದೇ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು