Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 94:10 - ಕನ್ನಡ ಸತ್ಯವೇದವು C.L. Bible (BSI)

10 ರಾಷ್ಟ್ರಗಳನು ಖಂಡಿಸುವವನು ದಂಡಿಸದಿರುವನೋ? I ಮನುಜರಿಗೆ ಬುದ್ಧಿಕಲಿಸುವವನು ಬುದ್ಧಿಹೀನನೋ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಜನಾಂಗಗಳನ್ನು ಶಿಕ್ಷಿಸುವವನೂ, ಮನುಷ್ಯರಿಗೆ ಬುದ್ಧಿಕಲಿಸುವವನೂ ಗದರಿಸನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಜನಾಂಗಗಳನ್ನು ಶಿಕ್ಷಿಸುವವನೂ ಮನುಷ್ಯರಿಗೆ ಬುದ್ಧಿಕಲಿಸುವವನೂ ಗದರಿಸನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಜನಾಂಗಗಳನ್ನು ಶಿಕ್ಷಿಸುವಾತನು ದೇವರೇ. ಜನರಿಗೆ ಉಪದೇಶಿಸುವವನೂ ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ರಾಷ್ಟ್ರಗಳಿಗೆ ಶಿಕ್ಷಣ ಕೊಡುವ ದೇವರು ಶಿಕ್ಷಿಸುವುದಿಲ್ಲವೋ? ಮಾನವನಿಗೆ ಕಲಿಸುವ ದೇವರಲ್ಲಿ ಜ್ಞಾನದ ಕೊರತೆಯಿದೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 94:10
23 ತಿಳಿವುಗಳ ಹೋಲಿಕೆ  

ಕಾಡುಮೃಗಗಳಿಗಿಂತ ನಮಗೆ ಹೆಚ್ಚು ಜ್ಞಾನವನ್ನೀಯುವವನೆಲ್ಲಿ? ಆಕಾಶದ ಪಕ್ಷಿಗಳಿಗಿಂತ ಹೆಚ್ಚು ಬುದ್ದಿಕಲಿಸುವನೆಲ್ಲಿ? ಎನ್ನುವುದೇ ಇಲ್ಲ.


ಅವನ ದೇವರು ಇದನ್ನೆಲ್ಲಾ ಸರಿಯಾಗಿ ತಿಳಿಸಿ ಕಲಿಸಿಕೊಡುತ್ತಾರೆ.


ಸರ್ವೇಶ್ವರಾ, ನಿಮ್ಮನ್ನು ಅರಿತುಕೊಳ್ಳದವರ ಮೇಲೆ ನಿಮ್ಮ ನಾಮವನ್ನು ಉಚ್ಚರಿಸದವರ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿದುಬಿಡಿ. ಅವರು ಯಕೋಬ್ಯರನ್ನು ಕಬಳಿಸಿದ್ದಾರೆ ಹೌದು, ಪೂರ್ತಿಯಾಗಿ ಕಬಳಿಸಿಬಿಟ್ಟಿದ್ದಾರೆ ಅವರ ನಿವಾಸಗಳನ್ನು ನಾಶಮಾಡಿದ್ದಾರೆ.


ಹೊರಗಟ್ಟಿದೆ ಪರಕೀಯರನು, ನಮ್ಮ ಪೂರ್ವಜರ ನೆಲೆಗೊಳಿಸಲು I ವಿನಾಶಗೊಳಿಸಿದೆ ಅನ್ಯರನು, ನಮ್ಮವರನು ವಿಕಾಸಗೊಳಿಸಲು II


‘ದೇವರಿಂದಲೇ ಅವರೆಲ್ಲರೂ ಬೋಧನೆ ಪಡೆಯುವರು,’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ಪಿತನಿಗೆ ಕಿವಿಕೊಟ್ಟು ಅವರಿಂದಲೇ ಕಲಿತುಕೊಂಡ ಪ್ರತಿ ಒಬ್ಬನೂ ನನ್ನ ಬಳಿಗೆ ಬರುತ್ತಾನೆ.


ಧರೆಯನು ನೀ ಹಾದುಹೋಗುವೆ ರೌದ್ರದಿಂದ ರಾಷ್ಟ್ರಗಳನು ತುಳಿದುಹಾಕುವೆ ರೋಷದಿಂದ.


ಸರ್ವೇಶ್ವರಾ, ನನ್ನ ದೇವರೇ, ಪರಮಪಾವನ ಸ್ವಾಮಿಯೇ, ಅನಾದಿಯಿಂದ ಇರುವಂಥವರು ನೀವು. ನಾವು ಖಂಡಿತ ಸಾಯುವುದಿಲ್ಲ. ನಮ್ಮನ್ನು ದಂಡಿಸುವಂತೆ ಆ ಬಾಬಿಲೋನಿನವರನ್ನು ನೇಮಿಸಿದವರು ನೀವು; ಅವರನ್ನು ಪ್ರಬಲಗೊಳಿಸಿದವರು ನೀವು. ನಮಗೆ ಪೊರೆಬಂಡೆ ನೀವೇ.


“ಜಗದ ಜನಾಂಗಗಳಲ್ಲಿ ನನಗೆ ಆಪ್ತರಾದವರೆಂದರೆ ನೀವು. ಆದಕಾರಣ ನೀವು ಮಾಡಿರುವ ಎಲ್ಲಾ ಪಾಪಗಳಿಗೆ ತಕ್ಕ ಪ್ರಾಯಶ್ಚಿತ್ತವನ್ನು ಸವಿಯುವಂತೆ ಮಾಡುವೆನು.”


“ಹೀಗೆ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸುವೆನು. ಆಗ ಆ ಸೈನಿಕರ ಮೇಲೆ ಕೈಮಾಡಿ ನ್ಯಾಯದಂಡನೆ ನಡೆಸಿದವನು ನಾನೇ ಎಂದು ಆ ಜನಾಂಗಗಳಿಗೆಲ್ಲಾ ಗೋಚರವಾಗುವುದು,


ನಿನ್ನ ಮಕ್ಕಳು ಶಿಕ್ಷಿತರಾಗುವರು ನನ್ನಿಂದ ಸಮೃದ್ಧವಾಗಿ ಬಾಳುವರು ಅವರು ಸುಖಶಾಂತಿಯಿಂದ.


ಆಗ ಸರ್ವೇಶ್ವರ ಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಬೆಳಿಗ್ಗೆ ಎದ್ದುನೋಡುವಾಗ ಅವರೆಲ್ಲರೂ ಹೆಣಗಳಾಗಿದ್ದರು.


ಆದರೆ ಸರ್ವೇಶ್ವರನಾದ ನಾನು ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ನನ್ನ ಗುರಿಯನ್ನು ಸಾಧಿಸಿದ ಮೇಲೆ ಆ ಅಸ್ಸೀರಿಯದ ಅರಸನನ್ನು ಅವನ ದುರಹಂಕಾರಕ್ಕಾಗಿ, ಗರ್ವದ ಭಾವನೆಗಳಿಗಾಗಿ ಸರಿಯಾಗಿ ದಂಡಿಸುವೆನು.


ದೇಶವಿದೇಶಗಳವರು ಬಂದು ಹೇಳುವರು ಹೀಗೆ : “ಬನ್ನಿ, ಹೋಗೋಣ ಸರ್ವೇಶ್ವರಸ್ವಾಮಿಯ ಪರ್ವತಕ್ಕೆ ಇಸ್ರಯೇಲರ ದೇವರ ಮಂದಿರಕ್ಕೆ. ಬೋಧಿಸುವನಾತ ನಮಗೆ ತನ್ನ ಮಾರ್ಗಗಳನು ನಾವು ಹಿಡಿದು ನಡೆವಂತೆ ಆತನ ಪಥವನು ಹೊರಡುವುದು ಧರ್ಮಶಾಸ್ತ್ರ ಸಿಯೋನಿನಿಂದ ಸ್ವಾಮಿಯ ದಿವ್ಯವಾಣಿ ಜೆರುಸಲೇಮಿನಿಂದ.


ಜ್ಞಾನವನ್ನು ನೀಡುವಾತ ಸರ್ವೇಶ್ವರನೇ; ತಿಳುವಳಿಕೆ, ವಿವೇಕ ಹೊರಡುವುದು ಆತನ ಬಾಯಿಂದಲೇ.


ಸುಜ್ಞಾನ ವಿವೇಕಗಳನು ಕಲಿಸೆನಗೆ I ನಿನ್ನಾಜ್ಞೆಗಳಲಿ ನನಗಿದೆ ನಂಬಿಕೆ II


ಪ್ರಭುವಿನ ಶ್ರೀಸಾಮ್ರಾಜ್ಯವು ಅನವರತ I ಆತನ ನಾಡಲಿ ಮುಗಿಯಿತು ಅನ್ಯಜನರ ಉಳಿತ II


ಭ್ರಷ್ಟರನು ದಂಡಿಸಿದೆ, ರಾಷ್ಟ್ರಗಳನು ಖಂಡಿಸಿದೆ I ಎಂದೆಂದೂ ಹೆಸರಿಲ್ಲದಂತೆ ಅವರನು ಅಳಿಸಿಹಾಕಿದೆ II


ಈ ಪರಿ ಮುಯ್ಯಿತೀರಿಸಲಿ ಜನಾಂಗಗಳಿಗೆ I ವಿಧಿಸಲಿ ದಂಡನೆಯನು ಅನ್ಯರಾಷ್ಟ್ರಗಳಿಗೆ II


ಬಳಿಕ ಮಾನವನಿಗೆ ಇಂತೆಂದನು: ‘ಸರ್ವೇಶ್ವರನಲ್ಲಿ ಭಯಭಕ್ತಿ ಇಡುವುದೇ ಸುಜ್ಞಾನ ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ’.”


ವ್ಯಕ್ತಿಯಾಗಿರಲಿ, ರಾಷ್ಟ್ರವಾಗಿರಲಿ, ಯಾರಾಗಿದ್ದರೇನು? ದೇವರು ಸುಮ್ಮನಿದ್ದರೆ ತಪ್ಪುಹೊರಿಸುವವರಾರು? ವಿಮುಖನಾದರೆ ಆತನ ದರ್ಶನ ಪಡೆಯಬಲ್ಲವರಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು