Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 94:15 - ಕನ್ನಡ ಸತ್ಯವೇದವು C.L. Bible (BSI)

15 ನ್ಯಾಯತೀರ್ಪು ಮರಳಿ ತಿರುಗುವುದು ನೀತಿಯತ್ತ I ನೇರಮನಸ್ಕರೆಲ್ಲ ಮಾಡುವರು ಅದನು ಸಮರ್ಥ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನ್ಯಾಯತೀರ್ಪು ನೀತಿಗೆ ತಿರುಗಿಕೊಳ್ಳುವುದು; ಯಥಾರ್ಥಚಿತ್ತರೆಲ್ಲರೂ ಅದನ್ನೇ ಅನುಸರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನ್ಯಾಯತೀರ್ಪು ನೀತಿಗೆ ತಿರುಗಿಕೊಳ್ಳುವದು; ಯಥಾರ್ಥಚಿತ್ತರೆಲ್ಲರೂ ಅದನ್ನೇ ಅನುಸರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನ್ಯಾಯವು ನೀತಿಯೊಂದಿಗೆ ಮರಳಿ ಬರುವುದು. ಆಗ ಜನರು ಒಳ್ಳೆಯವರೂ ಯಥಾರ್ಥವಂತರೂ ಆಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನ್ಯಾಯ ನಿಯಮವು ನೀತಿಯ ಮೇಲೆ ಅವಲಂಬಿಸಿರುವುದು; ಯಥಾರ್ಥ ಹೃದಯದವರೆಲ್ಲರೂ ಅದನ್ನು ಹಿಂಬಾಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 94:15
19 ತಿಳಿವುಗಳ ಹೋಲಿಕೆ  

ಆ ಸ್ವಾಮಿಗೆ ವಿರುದ್ಧ ನಾನು ಪಾಪಮಾಡಿದ್ದರಿಂದ ಅವರ ಕೋಪವನ್ನು ನಾನು ಸಹಿಸಿಕೊಳ್ಳಬೇಕಾಗುತ್ತದೆ. ಅವರು ನನ್ನ ಪರವಾಗಿ ವಾದಿಸಿ ನನಗಾದ ಅನ್ಯಾಯವನ್ನು ನೀಗಿಸುವರು; ನನ್ನನ್ನು ಕತ್ತಲೆಯಿಂದ ಬೆಳಕಿಗೆ ತರುವರು. ಅವರಿಂದ ಬರುವ ರಕ್ಷಣಾನೀತಿಯನ್ನು ಆಗ ಸವಿಯುವೆನು.


ಇವೇ ಮುಗಿಲೂ ಕಾರ್ಮುಗಿಲೂ ಆತನ ಸುತ್ತಲು I ನ್ಯಾಯ-ನೀತಿ ಆತನ ಗದ್ದುಗೆಯಸ್ತಿವಾರಗಳು II


ಪ್ರಭುವನು ನಂಬಿ ನಡೆ ಆತನ ಪಥದಲೇ I ಉದ್ಧಾರವಾಗುವೆ, ನಾಡಿಗೊಡೆಯನಾಗುವೆ I ದುಷ್ಟರ ವಿನಾಶವನು ಕಣ್ಣಾರೆ ಕಾಣುವೆ II


ಈ ಕ್ರಿಸ್ತವಿರೋಧಿಗಳು ನಮ್ಮವರಾಗಿರಲಿಲ್ಲ. ಆದಕಾರಣ, ಅವರು ನಮ್ಮನ್ನು ತೊರೆದರು. ಅವರು ನಮ್ಮವರೇ ಆಗಿದ್ದರೆ, ನಮ್ಮೊಂದಿಗೇ ಇರುತ್ತಿದ್ದರು. ಆದರೆ ಅವರು ನಮ್ಮನ್ನು ತೊರೆದು ಹೋದರು. ಇದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲ ಎಂಬುದು ಸ್ಪಷ್ಟವಾಗಿ ಕಂಡುಬರುತ್ತದೆ.


ಆಗ ಸಜ್ಜನರಿಗೂ ದುರ್ಜನರಿಗೂ, ದೇವರಸೇವೆ ಮಾಡುವವರಿಗೂ ಮಾಡದವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ನೀವು ಮನಗಾಣುವಿರಿ.


“ನ್ಯಾಯ ನಿರ್ಣಯಿಸುವಂಥ ದೇವನಿಹನು ಜಗದಲಿ I ಸಜ್ಜನರಿಗೆ ಸತ್ಫಲ ಕಟ್ಟಿಟ್ಟ ಬುತ್ತಿ,” ಇದು ನಾಣ್ನುಡಿ II


ಪ್ರಭುವಿತ್ತ ನ್ಯಾಯತೀರ್ಪೇ ಆತನಿಗೆ ಪ್ರಚಾರಕ I ದುಷ್ಟರು ಗೈದ ಕುಯುಕ್ತಿಯೇ ಅವರಿಗೆ ಸಂಹಾರಕ II


ಇಂತಿರಲು ನೀನು, ‘ಆತ ಕಾಣನು, ನನ್ನ ವ್ಯಾಜ್ಯ ಆತನ ಮುಂದಿದೆ ಆತನಿಗಾಗಿ ಕಾದಿರುವೆ’ ಎಂದುಕೊಂಡರೂ ಆತ ಕೇಳಿಯಾನೆ?


ಮುರಿಯುವುದಿಲ್ಲ ಆತ, ಜಜ್ಜಿದ ದಂಟನು ನಂದಿಸುವುದಿಲ್ಲ ಆತ, ಕಳೆಗುಂದಿದ ದೀಪವನು ತಪ್ಪದೆ ಸಿದ್ಧಿಗೆ ತರುವನಾತ ಸದ್ಧರ್ಮವನು.


ಸನ್ಮಾರ್ಗದಲ್ಲಿ ಮುಂದುವರೆವವನು ಸಜ್ಜನನು ಬಲಗೊಳ್ಳುತ್ತಲೇ ಇರುವನು ಶುದ್ಧಹಸ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು