Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 94:20 - ಕನ್ನಡ ಸತ್ಯವೇದವು C.L. Bible (BSI)

20 ಅನ್ಯಾಯಸ್ಥಾಪಕರಿಗೂ ನಿನಗೂ ಸಂಬಂಧವೆಲ್ಲಿ I ಕೇಡನು ಕಲ್ಪಿಸುತ್ತಾರವರು ಶಾಸನದ ಹೆಸರಿನಲ್ಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಧರ್ಮಶಾಸ್ತ್ರದ ನೆಪದಿಂದ ಕೇಡುಕಲ್ಪಿಸುವ ದುಷ್ಟ ಅಧಿಪತಿಗಳಿಗೂ, ನಿನಗೂ ಸಂಬಂಧವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಧರ್ಮಶಾಸ್ತ್ರದ ನೆವನದಿಂದ ಕೇಡುಕಲ್ಪಿಸುವ ನಾಶಕರನ್ಯಾಯಾಸನಕ್ಕೂ ನಿನಗೂ ಸಂಬಂಧವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದೇವರೇ, ಮೋಸಗಾರರಾದ ನ್ಯಾಯಾಧೀಶರಿಗೆ ಸಹಾಯಮಾಡಬೇಡ. ಅವರು ಕಾನೂನನ್ನು ಡೊಂಕು ಮಾಡಿ ಜನರನ್ನು ಹಿಂಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ತೀರ್ಪುಗಳಿಂದ ಕೇಡನ್ನು ಕಲ್ಪಿಸುವ ಅಪರಾಧದ ನ್ಯಾಯಾಸನವು ನಿಮ್ಮ ಸಂಗಡ ಅನ್ಯೋನ್ಯವಾಗಿರುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 94:20
23 ತಿಳಿವುಗಳ ಹೋಲಿಕೆ  

ಅನ್ಯಾಯವಾದ ನಿಬಂಧನೆಗಳನ್ನು ಕ್ರೂರವಾದ ಕಾನೂನುಗಳನ್ನು ರಚಿಸುವ ನಿಮಗೆ ಧಿಕ್ಕಾರ !


ಬದಲಿಗೆ ಕಲ್ಪಿಸುತ್ತೀರಿ ಅಕ್ರಮವನು ಮನದಲಿ I ಧರೆಗೀಯುತ್ತೀರಿ ಹಿಂಸಾಚಾರವನು ತೂಕದಲಿ II


ಯೇಸುವನ್ನು ಬಂಧಿಸುವ ಉದ್ದೇಶದಿಂದ ಮುಖ್ಯಯಾಜಕರೂ ಫರಿಸಾಯರೂ ಆತನ ಸುಳಿವು ಯಾರಿಗಾದರೂ ಸಿಕ್ಕಿದ್ದೇ ಆದರೆ ತಮಗೆ ತಿಳಿಸಬೇಕೆಂದು ಆಜ್ಞೆ ಹೊರಡಿಸಿದ್ದರು.


ಇದಲ್ಲದೆ, ನಾನು ಲೋಕವನ್ನು ದೃಷ್ಟಿಸಿನೋಡಿ ನ್ಯಾಯಸ್ಥಾನದಲ್ಲೂ ಧರ್ಮಸ್ಥಾನದಲ್ಲೂ ಅಧರ್ಮ ಇರುವುದನ್ನು ಗಮನಿಸಿದೆ.


“ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.”


ಆ ದುರ್ದಿನದಿಂದ ತಪ್ಪಿಸಿಕೊಳ್ಳಲು ಯತ್ನಿಸುವ ಮುಖಂಡರೇ, ಮತ್ತಷ್ಟು ಶೀಘ್ರವಾಗಿ ಹಿಂಸಾಕ್ರಮಣವನ್ನು ಬರಮಾಡಿಕೊಳ್ಳುತ್ತೀರಿ.


ಅವರು ಹೀಗೆ ಹೇಳಿದ್ದು ಯೆಹೂದ್ಯ ಅಧಿಕಾರಿಗಳ ಅಂಜಿಕೆಯಿಂದ. ಏಕೆಂದರೆ, ಯಾರಾದರೂ ಯೇಸುವನ್ನು ಲೋಕೋದ್ಧಾರಕ ಎಂದು ಒಪ್ಪಿಕೊಂಡರೆ ಅಂಥವರಿಗೆ ಪ್ರಾರ್ಥನಾಮಂದಿರದಿಂದ ಬಹಿಷ್ಕಾರ ಹಾಕಬೇಕೆಂದು ಅಧಿಕಾರಿಗಳು ಈ ಮೊದಲೇ ಗೊತ್ತುಮಾಡಿದ್ದರು.


ನಾಡಿನಲ್ಲಿ ಬಡವರ ಶೋಷಣೆಯನ್ನೂ ನ್ಯಾಯನೀತಿಯ ಉಲ್ಲಂಘನೆಯನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬ ಅಧಿಕಾರಿ ಉಸ್ತುವಾರಿ ನಡೆಸುತ್ತಾನೆ. ಆ ಇಬ್ಬರು ಅಧಿಕಾರಿಗಳ ಮೇಲೆ ಇನ್ನೂ ಉನ್ನತ ಅಧಿಕಾರಿಗಳು ಇದ್ದಾರೆ.


ದುರ್ಜನರಿಗೆ ದೇವ ಹೇಳುವನು ಇಂತೆಂದು I “ನನ್ನ ವಿಧಿಗಳ ಪಠಿಸುವ ಹಕ್ಕು ನಿಮಗೆಂತು? I ನನ್ನ ನಿಬಂಧನೆಗಳ ನೀವು ಜಪಿಸುವುದೆಂತು?” II


ಆಮೇಲೆ ಅವರು ಯೇಸುವನ್ನು ಕಾಯಫನ ಮನೆಯಿಂದ ರಾಜ್ಯಪಾಲನ ನಿವಾಸಕ್ಕೆ ಕೊಂಡೊಯ್ದರು. ಆಗ ಮುಂಜಾನೆ, ಅರಮನೆಯೊಳಗೆ ಹೋದರೆ ಮಡಿಗೆಟ್ಟು ಹಬ್ಬದೂಟಕ್ಕೆ ಅಡ್ಡಿಯಾದೀತೆಂದು ಅವರೆಲ್ಲರು ಹೊರಗೇ ನಿಂತರು.


ನೀಚಕಾರ್ಯವೆಸಗಿ ಹಿಗ್ಗುವ ಘನ ಮಾನವನೆ I ದೇವರ ಅನಂತ ಕೃಪೆಯನು ಪ್ರತಿಭಟಿಸುವವನೆ I ದೇವರ ದೃಷ್ಟಿಯಲಿ ನೀನು ಹೀನಾಯನೆ II


ಅವನು ಎಂಟನೆಯ ತಿಂಗಳ ಹದಿನೈದನೆಯ ದಿವಸ, ನಾಡಿನ ಜಾತ್ರೆಗೆ ಸಮನಾದ ಜಾತ್ರೆ ಬೇತೇಲಿನಲ್ಲಿ ನಡೆಯಬೇಕೆಂದು ಅಪ್ಪಣೆ ಮಾಡಿದನು. ತಾನೂ ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ್ದ ಹೋರಿಕರುಗಳ ಮೂರ್ತಿಗಳಿಗೆ, ಪೀಠದ ಮೇಲೆ ಬಲಿ ಅರ್ಪಿಸಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇಮಿಸಿದನು.


ಸ್ವರ್ಗಸಭೆಯಲಿ ದೇವ ಅಗ್ರಸ್ಥಾನ ವಹಿಸಿಹನು I ದೇವರುಗಳ ಸಮೂಹದಲಿ ನ್ಯಾಯವಿಚಾರಿಸುತಿಹನು II


ಅರಸನು, “ಅಹೀಟೂಬನ ಮಗನೇ, ನಾನು ಕೇಳುವ ಪ್ರಶ್ನೆಗೆ ಉತ್ತರಕೊಡು,” ಎಂದನು. ಅದಕ್ಕೆ ಅವನು, “ಒಡೆಯಾ, ಅಪ್ಪಣೆಯಾಗಲಿ,” ಎಂದನು.


ಧರ್ಮಶಾಸ್ತ್ರಕ್ಕೆ ಕಿವಿಮುಚ್ಚಿಕೊಳ್ಳುವವನ ಪ್ರಾರ್ಥನೆ, ದೇವರಿಂದ ತಿರಸ್ಕೃತವಾದ ಪ್ರಾರ್ಥನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು