Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 94:21 - ಕನ್ನಡ ಸತ್ಯವೇದವು C.L. Bible (BSI)

21 ಹೊಂಚುಹಾಕುವರವರು ನೀತಿವಂತರ ಪ್ರಾಣಕೆ I ಮರಣಶಿಕ್ಷೆ ವಿಧಿಸುವರವರು ನಿರಪರಾಧಿಗಳಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಜೀವವನ್ನು ತೆಗೆಯಬೇಕೆಂದು ನೀತಿವಂತರ ಮೇಲೆ ಬೀಳುತ್ತಾರೆ; ನಿರಪರಾಧಿಗಳಿಗೆ ಮರಣಶಿಕ್ಷೆ ವಿಧಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಜೀವತೆಗೆಯಬೇಕೆಂದು ನೀತಿವಂತರ ಮೇಲೆ ಬೀಳುತ್ತಾರೆ; ನಿರಪರಾಧಿಗಳಿಗೆ ಮರಣಶಿಕ್ಷೆ ವಿಧಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವರು ನೀತಿವಂತರಿಗೆ ಎದುರಾಗಿ ನಿರಪರಾಧಿಗಳಿಗೆ ಮರಣದಂಡನೆ ವಿಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀತಿವಂತನ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ಅವರ ನಿರಪರಾಧಿಗಳನ್ನು ಮರಣಕ್ಕೆ ಒಪ್ಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 94:21
25 ತಿಳಿವುಗಳ ಹೋಲಿಕೆ  

ಬೆಳಗಾಯಿತು. ಎಲ್ಲ ಮುಖ್ಯಯಾಜಕರೂ ಜನರ ಪ್ರಮುಖರೂ ಸೇರಿ ಯೇಸುವನ್ನು ಕೊಲ್ಲಿಸುವುದಕ್ಕೆ ಸಮಾಲೋಚನೆಮಾಡಿದರು.


ದುರ್ಜನರನ್ನು ಸಜ್ಜನರೆಂದೂ, ಸಜ್ಜನರನ್ನು ದುರ್ಜನರೆಂದೂ ನಿರ್ಣಯಿಸುವ ಇಬ್ಬರೂ ಸರ್ವೇಶ್ವರನಿಗೆ ಅಸಹ್ಯರು.


ಇಗೋ ನನ್ನ ಪ್ರಾಣಕ್ಕವರು ಹೂಡಿರುವ ಹೊಂಚು I ನನ್ನ ಮೇಲೆರಗಲು ಹೂಡಿರುವ ಕ್ರೂರಿಗಳ ಸಂಚು II


ದೇವಜನರ ರಕ್ತವನ್ನು ಮತ್ತು ಕ್ರಿಸ್ತೇಸುವಿಗೋಸ್ಕರ ಹುತಾತ್ಮರಾದವರ ರಕ್ತವನ್ನು ಹೀರಿ ಮತ್ತಳಾಗಿದ್ದಳು ಅವಳು. ಇದನ್ನು ಕಂಡು ನನಗೆ ದಿಗ್ಭ್ರಮೆಯಾಯಿತು.


ನಿರಪರಾಧಿಯೂ ನೀತಿವಂತನೂ ಆದ ವ್ಯಕ್ತಿಗೆ ಮರಣದಂಡನೆ ವಿಧಿಸಲೇಕೂಡದು; ಅಂಥ ದುಷ್ಕೃತ್ಯ ಮಾಡಿದವನಿಗೆ ನಾನು ಶಿಕ್ಷೆ ವಿಧಿಸದೆ ಬಿಡುವುದಿಲ್ಲ.


ನಿಮ್ಮನ್ನು ವಿರೋಧಿಸಿದ ಸಜ್ಜನನನ್ನು ಖಂಡಿಸಿ ಕೊಲೆಮಾಡಿಸಿದ್ದೀರಿ.


“ನಾನು ನಿರ್ದೋಷಿಯನ್ನು ಹಿಡಿದುಕೊಟ್ಟು ಪಾಪಕಟ್ಟಿಕೊಂಡೆ,” ಎಂದು ಹೇಳಿದನು. ಅದಕ್ಕೆ ಅವರು, ಅದರಿಂದ ನಮಗೇನು? ಅದನ್ನು ನೀನೇ ನೋಡಿಕೋ,’ ಎಂದುಬಿಟ್ಟರು.


ಅಲ್ಲಿನ ಪ್ರಮುಖರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ಕಬಳಿಸುವ, ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


“ನಿನ್ನವರು ರಕ್ತ ಸುರಿಸುವುದಕ್ಕೆ ಲಂಚಪಡೆದಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ಸುಲಿಗೆಮಾಡಿ, ನನ್ನನ್ನು ಮರೆತೇಬಿಟ್ಟಿದ್ದಾರೆ; ಇದು ಸರ್ವೇಶ್ವರನಾದ ದೇವರ ನುಡಿ.


ಅವರು ನಿನಗೆ “ನಮ್ಮೊಡನೆ ಬಾ, ಹೊಂಚುಹಾಕಿ ಹತ್ಯೆಮಾಡೋಣ;


ಮುತ್ತಿದೆ ದುರುಳರ ಹಿಂಡು; ಸುತ್ತಿವೆ ಕುನ್ನಿಗಳು I ಕುತ್ತಿವೆ ನನ್ನ ಕೈಗಳು ಮೇಣ್ ಕಾಲುಗಳು II


ಅವನಿಗೆ, “ನೀನು ಕೊಲೆಮಾಡಿ, ಸೊತ್ತನ್ನು ಸಂಪಾದಿಸಿಕೊಂಡೆಯಲ್ಲವೇ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವುವು, ಎನ್ನುತ್ತಾರೆ ಸರ್ವೇಶ್ವರ’ ಎಂದು ಹೇಳು.”


ನಿಮ್ಮ ಪೂರ್ವಜರು ಹಿಂಸೆಗೆ ಗುರಿಪಡಿಸದ ಪ್ರವಾದಿ ಯಾರಾದರೂ ಇದ್ದಾರೆಯೆ? ಸತ್ಯಸ್ವರೂಪನು ಬರಲಿದ್ದಾನೆಂದು ಮುಂತಿಳಿಸಿದವರನ್ನು ಅವರು ಕೊಂದುಹಾಕಿದರು. ನೀವಾದರೋ, ಆ ಸತ್ಯಸ್ವರೂಪನನ್ನು ಹಿಡಿದುಕೊಟ್ಟು ಕೊಲೆಮಾಡಿಸಿದಿರಿ.


ಇಗೋ, ಇಸ್ರಯೇಲಿನ ಅರಸರು ತಮ್ಮ ತಮ್ಮ ಶಕ್ತ್ಯಾನುಸಾರ ನಿನ್ನಲ್ಲಿ ರಕ್ತ ಸುರಿಸುತ್ತಲೇ ಇದ್ದಾರೆ.


ಆದರೆ ಒಂದು ವಿಷಯ ನಿಮಗೆ ಚೆನ್ನಾಗಿ ತಿಳಿದಿರಲಿ - ನೀವು ನನ್ನನ್ನು ಕೊಂದುಹಾಕಿದ್ದೇ ಆದರೆ, ನಿರ್ದೋಷಿಯ ರಕ್ತ ಸುರಿಸಿದ ಅಪರಾಧಕ್ಕೆ ನೀವೂ ಈ ನಗರವೂ ಇದರ ನಿವಾಸಿಗಳೂ ಗುರಿಯಾಗುವಿರಿ. ಏಕೆಂದರೆ ಈ ಮಾತುಗಳನ್ನೆಲ್ಲ ನಿಮ್ಮ ಕಿವಿಗೆ ಮುಟ್ಟಿಸುವಂತೆ ನನ್ನನ್ನು ಕಳಿಸಿದವರು ಸರ್ವೇಶ್ವರ ಎಂಬುದು ಸತ್ಯ,” ಎಂದು ಹೇಳಿದನು.


ಅವರ ಕಾಲು ಕೇಡನ್ನು ಹಿಂಬಾಲಿಸಿ ಓಡುತ್ತವೆ ರಕ್ತಪಾತಕ್ಕಾಗಿ ಅವರು ತುಡಿಯುತ್ತಿರುತ್ತಾರೆ.


ಸುರಿಸಿದರು ತಮ್ಮ ಮಕ್ಕಳ ನಿರ್ದೋಷ ರಕ್ತವನು I ಬಲಿಕೊಟ್ಟರು ಕಾನಾನ್ಯರ ವಿಗ್ರಹಗಳಿಗೆ ಅವರನು I ಹೊಲೆಮಾಡಿದರಂಥ ಕೊಲೆಗಳಿಂದ ದೇಶವನು II


ಒಟ್ಟುಗೂಡಿ ಹೊಂಚುಹಾಕುತಿಹರು I ಹೆಜ್ಜೆಹಿಡಿದು ಕೊಲ್ಲ ಬರುತಿಹರು II


ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ,ಸರ್ವೇಶ್ವರನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.


ರಾಜರೇ, ಈ ಶಾಸನಕ್ಕೆ ನೀವು ಇದೀಗಲೇ ಹಸ್ತಾಕ್ಷರಗಳಿಂದ ರುಜುಹಾಕಬೇಕು. ಆಗ ಅದು ಮೇದ್ಯದ ಮತ್ತು ಪರ್ಷಿಯದ ಧರ್ಮವಿಧಿಗಳಂತೆ ಎಂದಿಗೂ ರದ್ದಾಗದೆ ಊರ್ಜಿತವಾಗುವುದು,” ಎಂದು ವಿನಂತಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು