Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 94:23 - ಕನ್ನಡ ಸತ್ಯವೇದವು C.L. Bible (BSI)

23 ದಂಡಿಸುವನಾ ಕೆಡುಕರನು ಅವರ ಕೆಟ್ಟತನಕ್ಕಾಗಿ I ನಿರ್ಮೂಲ ಮಾಡುವನಾ ಜನರ ದುಷ್ಟತನಕ್ಕಾಗಿ I ನಮ್ಮೊಡೆಯ ದೇವನು ಸಂಹರಿಸಿಬಿಡುವನು ಈ ಕಾರಣಕ್ಕಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರ ಕೆಟ್ಟತನವನ್ನು ಅವರಿಗೇ ತಿರುಗಿಸುವನು; ಅವರ ದುಷ್ಟತನದಿಂದಲೇ ಅವರನ್ನು ನಿರ್ಮೂಲಮಾಡುವನು. ನಮ್ಮ ಯೆಹೋವ ದೇವರು ಅವರನ್ನು ಸಂಹರಿಸಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವರ ಕೆಟ್ಟತನವನ್ನು ಅವರಿಗೇ ತಿರುಗಿಸುವನು; ಅವರ ದುಷ್ಟತನದಿಂದಲೇ ಅವರನ್ನು ನಿರ್ಮೂಲ ಮಾಡುವನು. ನಮ್ಮ ಯೆಹೋವದೇವರು ಅವರನ್ನು ಸಂಹರಿಸಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆತನು ಆ ದುಷ್ಟ ನ್ಯಾಯಾಧೀಶರನ್ನು ಅವರ ದುಷ್ಕೃತ್ಯಗಳ ನಿಮಿತ್ತ ದಂಡಿಸುವನು. ಅವರ ಪಾಪಗಳ ನಿಮಿತ್ತ ದೇವರು ಅವರನ್ನು ನಾಶಮಾಡುವನು. ನಮ್ಮ ದೇವರಾದ ಯೆಹೋವನು ಆ ದುಷ್ಟ ನ್ಯಾಯಾಧೀಶರನ್ನು ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ವೈರಿಯ ಅಪರಾಧವು ಅವರ ಮೇಲೆಯೇ ತಿರುಗಿ ಬೀಳಲಿ; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಯೆಹೋವ ದೇವರು ಅವರನ್ನು ಸಂಹರಿಸಿ ಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 94:23
20 ತಿಳಿವುಗಳ ಹೋಲಿಕೆ  

ತಾನು ಮಾಡಿದ ಕುತಂತ್ರ ತನ್ನ ತಲೆಗೆ ಗಂಡಾಂತರ I ತಾನು ಕೊಟ್ಟ ಉಪದ್ರವ ತನ್ನ ಬುರುಡೆಗೆ ಅವಾಂತರ II


ಆಪತ್ಕಾಲ ಬಂದಾಗ ದುಷ್ಟನು ಹಾಳಾಗುತ್ತಾನೆ; ಮರಣವೇಳೆಯಲ್ಲೂ ನೀತಿವಂತ ನಂಬಿಕೆಯಿಂದಿರುತ್ತಾನೆ.


ದುರುಳರಾದರೋ ನಾಡಿನಿಂದ ಬೇರ್ಪಡುವರು, ದ್ರೋಹಿಗಳು ಅಲ್ಲಿಂದ ಅಳಿದು ನಾಶವಾಗುವರು.


ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II


ದುರುಳನನ್ನು ಅವನ ದ್ರೋಹಗಳೆ ಆಕ್ರಮಿಸುತ್ತವೆ; ಅವನ ಪಾಪಪಾಶಗಳೇ ಅವನನ್ನು ಬಂಧಿಸುತ್ತವೆ.


ನಾಲಿಗೆ ನಿಮಿತ್ತ ಅವರು ಅವನತಿಗೀಡಾಗುವರು I ನೋಡುವವರೆಲ್ಲರು ತಲೆಯಾಡಿಸಿ ಅಣಕಿಸುವರು II


ಆ ಏಳುಸಾರಿ ಅರವತ್ತೆರಡು ವರ್ಷಗಳು ಮುಗಿದ ಮೇಲೆ ಅಭಿಷಿಕ್ತನನ್ನು ಅನ್ಯಾಯವಾಗಿ ಕೊಲ್ಲುವರು. ದಂಡೆತ್ತಿಬರುವ ರಾಜನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಪ್ರಳಯದಿಂದಲೋ ಎಂಬಂತೆ ನಗರವು ನಾಶವಾಗುವುದು. ಅಂತ್ಯದವರೆಗೆ ಯುದ್ಧವೂ ನಿಶ್ಚಿತ ವಿನಾಶವೂ ಸಂಭವಿಸುವುವು.


ಆ ಹತ್ತು ಕೊಂಬುಗಳು ಅದೇ ರಾಜ್ಯವನ್ನು ಆಳುವ ಹತ್ತುಮಂದಿ ಅರಸರು. ಅವರ ತರುವಾಯ ಮತ್ತೊಬ್ಬನು ತಲೆದೋರುವನು. ಅವನು ಮುಂಚಿನ ಅರಸರಿಗಿಂತ ವಿಲಕ್ಷಣವಾಗಿರುವನು, ಆ ಮೂವರು ಅರಸರನ್ನು ಸದೆಬಡಿದುಬಿಡುವನು.


ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ, ಅವನು ಜೀವಿಸುವನೇ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.


ಈ ಕಾರಣ, ತಮ್ಮ ನಡತೆಗೆ ತಕ್ಕ ಫಲವನ್ನು ಅನುಭವಿಸುವರು, ತಮ್ಮ ಕುಯುಕ್ತಿಗಳ ಪರಿಣಾಮದಿಂದ ಹೊಟ್ಟೆ ತುಂಬಿಸಿಕೊಳ್ಳುವರು.


ಕಪಟವಾಡುವ ತುಟಿಗಳನು ಪ್ರಭು ಕಡಿದುಬಿಡಲಿ I ಬಡಾಯಿಕೊಚ್ಚುವ ಜಿಹ್ವೆಯನು ಕತ್ತರಿಸಿಬಿಡಲಿ II


ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲಿಗೆ ಅವನನ್ನು ಏರಿಸಿದರು. ಅರಸನ ಕೋಪವು ಶಾಂತವಾಯಿತು.


ಶೆಕೆಮಿನವರಿಗಾದರೋ ಅವರ ದುಷ್ಟತ್ವವು ಅವರ ತಲೆಯ ಮೇಲೆಯೇ ಬರುವಂತೆಮಾಡಿದರು. ಹೀಗೆ ಯೆರುಬ್ಬಾಳನ ಮಗ ಯೋತಾಮನು ಇವರ ಬಗ್ಗೆ ನುಡಿದ ಶಾಪ ನೆರವೇರಿತು.


ಅವನ ಮೇಲೆ ಭಯಾತ್ಮನನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಅಲ್ಲೇ ಕತ್ತಿಗೆ ತುತ್ತಾಗುವಂತೆ ಮಾಡುವೆನು, ಇದು ಸರ್ವೇಶ್ವರನ ನುಡಿ, ಎಂದು ತಿಳಿಸಿರಿ,” ಎಂದು ಉತ್ತರಕೊಟ್ಟನು.


ಈ ವಿಷಯ ಅರಸನ ಕಿವಿಗೆ ಬಿದ್ದಾಗ, ಅವನು, ‘ಹಾಮಾನನು ಯೆಹೂದ್ಯರ ವಿರುದ್ಧ ಯೋಚಿಸಿದ ಕೇಡು ಅವನ ತಲೆಯ ಮೇಲೆಯೇ ಬರಲಿ. ಅವನನ್ನು ಅವನ ಮಕ್ಕಳನ್ನೂ ಗಲ್ಲಿಗೇರಿಸಿರಿ,’ ಎಂದು ಅಪ್ಪಣೆಮಾಡಿದ್ದನು.


ನನಗೆದುರಾಡಿ ತಪ್ಪು ಹೊರಿಸುವವರಿಗೆ I ಅದುವೇ ಪ್ರಭುವಿನಿಂದ ಗಿಟ್ಟುವ ಕೊಡುಗೆ II


ಅವನು ಶಿಸ್ತುಪಾಲನೆಯಿಲ್ಲದೆ ನಾಶವಾಗುತ್ತಾನೆ; ಅತಿ ಮೂರ್ಖತನದಿಂದಲೇ ಮೋಸಹೋಗುತ್ತಾನೆ.


ಅರಸನನ್ನೂ ಅವನ ಸಂತತಿ ಹಾಗೂ ಸೇವಕರನ್ನೂ ಅವರು ಮಾಡಿದ ಅಧರ್ಮಕ್ಕಾಗಿ ದಂಡಿಸುವೆನು. ನಾನು ಇವರನ್ನು, ಜೆರುಸಲೇಮಿನವರನ್ನು ಹಾಗೂ ಯೆಹೂದ್ಯರನ್ನು ‘ನಿಮಗೆ ದೊಡ್ಡ ಕೇಡಾಗಲಿದೆ’ ಎಂದು ಎಚ್ಚರಿಸಿದರೂ ಅವರು ಕೇಳಲಿಲ್ಲ. ಆದ್ದರಿಂದ ಆ ಕೇಡನ್ನೆಲ್ಲಾ ಇವರೆಲ್ಲರ ಮೇಲೆ ಬರಮಾಡುವೆನು’.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು