Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 94:7 - ಕನ್ನಡ ಸತ್ಯವೇದವು C.L. Bible (BSI)

7 ಅವರಾಡಿಕೊಳ್ಳುತಿಹರು ಪ್ರಭು ನೋಡನೆಂದು I ಯಕೋಬ್ಯರ ಸ್ವಾಮಿದೇವ ವಿಚಾರಿಸನೆಂದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು, “ಯಾಹುವು ನೋಡುವುದೇ ಇಲ್ಲ; ಯಾಕೋಬ್ಯರ ದೇವರು ಲಕ್ಷಿಸುವುದೇ ಇಲ್ಲ” ಅನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾಹು ನೋಡುವದೇ ಇಲ್ಲ; ಯಾಕೋಬ್ಯರ ದೇವರು ಲಕ್ಷಿಸುವದೇ ಇಲ್ಲ ಅನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ದುಷ್ಕೃತ್ಯಗಳು ಯೆಹೋವನಿಗೆ ಕಾಣದೆಂದು ಅವರು ಹೇಳಿಕೊಳ್ಳುತ್ತಾರೆ. ಅವುಗಳು ಇಸ್ರೇಲಿನ ದೇವರಿಗೆ ತಿಳಿಯದೆಂದು ಅವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಯೆಹೋವ ದೇವರು ನೋಡುವುದಿಲ್ಲ, ಯಾಕೋಬನ ದೇವರು ಗ್ರಹಿಸುವುದಿಲ್ಲ,” ಎಂದು ಅವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 94:7
9 ತಿಳಿವುಗಳ ಹೋಲಿಕೆ  

“ಆಗ ದೀಪವನ್ನು ಹಿಡಿದುಕೊಂಡು ಜೆರುಸಲೇಮನ್ನೆಲ್ಲಾ ಹುಡುಕಿಬಿಡುವೆನು. ‘ಸರ್ವೇಶ್ವರ ಮೇಲನ್ನಾಗಲಿ, ಕೇಡನ್ನಾಗಲಿ ಏನನ್ನೂ ಮಾಡುವುದಿಲ್ಲ’ ಎಂದುಕೊಳ್ಳುವ ಮದ್ಯದ ಮಡ್ಡಿಯಂಥ ಜಡ ಮನಸ್ಕರನ್ನು ದಂಡಿಸುವೆನು.


ತಮ್ಮ ಆಲೋಚನೆಯನ್ನು ಸರ್ವೇಶ್ವರ ಸ್ವಾಮಿಯಿಂದ ಬಚ್ಚಿಡುವುದಕ್ಕಾಗಿ ಒಳಸಂಚುಮಾಡುವವರಿಗೆ ಧಿಕ್ಕಾರ ! ಇವರು, “ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ಗಮನಿಸಿಯಾರು?” ಎಂದುಕೊಂಡು ಕತ್ತಲಲ್ಲೇ ತಮ್ಮ ಕೃತ್ಯಗಳನ್ನು ನಡೆಸುತ್ತಾರೆ.


ಆಗ ಅವರು ನನಗೆ, “ಇಸ್ರಯೇಲ್ ಮತ್ತು ಯೆಹೂದ ವಂಶದವರ ಅಧರ್ಮ ತುಂಬಿಹೋಗಿದೆ; ನಾಡು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ನಾಡನ್ನು ಸರ್ವೇಶ್ವರ ತೊರೆದುಬಿಟ್ಟಿದ್ದಾರೆ, ಸರ್ವೇಶ್ವರ ನಮ್ಮನ್ನು ನೋಡುವುದಿಲ್ಲ’ ಎಂದು ಮಾತಾಡಿಕೊಳ್ಳುತ್ತಿದ್ದಾರೆ;


ಆಗ ದೇವರು ನನಗೆ, “ನರಪುತ್ರನೇ, ಇಸ್ರಯೇಲ್ ವಂಶದ ಹಿರಿಯರೆಲ್ಲರು ನಾನಾ ರೂಪಗಳಿಂದ ಚಿತ್ರಿತವಾದ ತಮ್ಮ ತಮ್ಮ ಕೊಠಡಿಗಳೊಳಗೆ, ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಸರ್ವೇಶ್ವರ ನಮ್ಮನ್ನು ನೋಡನು, ಸರ್ವೇಶ್ವರ ನಾಡನ್ನು ತೊರೆದುಬಿಟ್ಟಿದ್ದಾನೆ,’ ಎಂದು ಮಾತಾಡಿಕೊಳ್ಳುತ್ತಾರಷ್ಟೆ,” ಎಂಬುದಾಗಿ ಹೇಳಿದರು.


ಅವರ ಬಾಯಿ ಬೊಗಳುವ ಮಾತುಗಳನು ಕೇಳು I ಅವರ ತುಟಿಗಳು ಹರಿತ ಕತ್ತಿಕಠಾರಿಗಳು I ನಮಗಾರು ಕಿವಿಗೊಡರೆಂಬುದೆ ಅವರ ಗೋಳು II


ಕೇಡನು ನೀ ಮಾಡಿದೆ ಭಯಪಡದೆ ನೋಡರಾರೂ ಎಂದುಕೊಂಡಿದ್ದೆ, ನೀನು ಜ್ಞಾನಿ ವಿವೇಕಿಯೆಂದು ತಿಳಿದುಕೊಂಡೇ ಮರುಳಾದೆ; ‘ಏಕೈಕಳು ನಾನೇ, ಇನ್ನಾರೂ ಇಲ್ಲ’ ಎಂದುಕೊಂಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು