Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 94:8 - ಕನ್ನಡ ಸತ್ಯವೇದವು C.L. Bible (BSI)

8 ಮೂರ್ಖರೇ, ನಿಮಗೆ ಜ್ಞಾನೋದಯವಾಗುವುದಾವಾಗ? I ಪಶುಪ್ರಾಯರಾದ ಪ್ರಜೆಗಳು ಗಮನಿಸುವುದಾವಾಗ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಪಶುಪ್ರಾಯರಾದ ಪ್ರಜೆಗಳಿರಾ, ಲಕ್ಷಿಸಿರಿ; ಮೂರ್ಖರೇ, ನಿಮಗೆ ಬುದ್ಧಿಬರುವುದು ಯಾವಾಗ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪಶುಪ್ರಾಯರಾದ ಪ್ರಜೆಗಳಿರಾ, ಲಕ್ಷಿಸಿರಿ; ಹುಚ್ಚರೇ, ನಿಮಗೆ ಬುದ್ಧಿಬರುವದು ಯಾವಾಗ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದುಷ್ಟರೇ, ನೀವು ಮೂಢರಾಗಿದ್ದೀರಿ! ನೀವು ಪಾಠವನ್ನು ಕಲಿತುಕೊಳ್ಳುವುದು ಯಾವಾಗ? ದುಷ್ಟರೇ, ನೀವು ಬಹು ದಡ್ಡರಾಗಿದ್ದೀರಿ! ಅರ್ಥಮಾಡಿಕೊಳ್ಳಲು ನೀವು ಪ್ರಯತ್ನಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಜನರಲ್ಲಿ ಬುದ್ಧಿಹೀನರೇ, ನೀವು ಗ್ರಹಿಸಿರಿ. ಮೂರ್ಖರೇ, ಯಾವಾಗ ಬುದ್ಧಿವಂತರಾಗುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 94:8
12 ತಿಳಿವುಗಳ ಹೋಲಿಕೆ  

ಇದನರಿಯನು ಪಶುಪ್ರಾಯನು I ಇದ ತಿಳಿಯನು ಬುದ್ಧಿಹೀನನು II


ಹಿಂದೆ ನಾವು ಅವಿವೇಕಿಗಳೂ ಅವಿಧೇಯರೂ ಆಗಿ ದಾರಿ ತಪ್ಪಿಹೋಗಿದ್ದೆವು. ಅನೇಕ ಪ್ರಲೋಭನೆಗಳಿಗೂ ದುರಿಚ್ಛೆಗಳಿಗೂ ಗುಲಾಮರಾಗಿದ್ದೆವು. ದುಷ್ಟತನ ಹಾಗೂ ಮತ್ಸರಗಳಲ್ಲಿ ಕಾಲ ಕಳೆಯುತ್ತಾ ಅಸಹ್ಯರೂ ಪರಸ್ಪರ ದ್ವೇಷಿಗಳೂ ಆಗಿದ್ದೆವು.


ಬುದ್ಧಿಜೀವಿಗಳೂ ಸಾಯುವುದು ಖಂಡಿತ I ಮೂರ್ಖ, ಮಂದಗತಿಗಳ ಅಳಿವೂ ನಿಶ್ಚಿತ I ಅವರ ಸೊತ್ತು ಪರರ ಪಾಲು, ಇದೂ ಖಚಿತ II


ದೇವರೊಡನೆ ಸತ್ಸಂಬಂಧಿತರಾರೂ ಇಲ್ಲ ಸನ್ಮತಿಗಳು ಒರ್ವರೂ ಇಲ್ಲ ಆತನನ್ನು ಅರಸುವವರಂತೂ ಇಲ್ಲವೇ ಇಲ್ಲ.


ಶಿಸ್ತನ್ನು ಹಾರೈಸುವವನು ಶಿಕ್ಷಣ ಪ್ರಿಯನು; ತಿದ್ದುವಿಕೆಯನ್ನು ಹಗೆಮಾಡುವವನು ಪಶುಪ್ರಾಯನು.


ಜ್ಞಾನವಿದ್ದಿದ್ದರೆ ಗ್ರಹಿಸುತ್ತಿದ್ದರು ಈ ಸಂಗತಿಗಳನು ತಿಳಿಯುತ್ತಿದ್ದರು, ಅಂತ್ಯದೊಳು ತಮಗಾಗುವ ದುರವಸ್ಥೆಯನು.


ಕೇವಲ ಪಶುಪ್ರಾಯರು, ಮಂದಮತಿಗಳು, ಅವರೆಲ್ಲರು ಬೊಂಬೆ ಪೂಜೆಯಿಂದ ಬರುವ ಜ್ಞಾನ ಮರದಂತೆ ಮೊದ್ದು.


ಮರಗಳ ರೆಂಬೆಕೊಂಬೆಗಳು ಒಣಗಿ ಮುರಿದುಹೋಗಿವೆ. ಹೆಂಗಸರ ಕೈಗೆ ಒಲೆಪಾಲಾಗುವ ಸೌದೆಯಾಗಿವೆ. ಈ ಪ್ರಜೆಗಳು ಮಂದಮತಿಗಳೇ ಸರಿ. ಈ ಕಾರಣ, ಸೃಷ್ಟಿಕರ್ತನು ಇವರನ್ನು ಕರುಣಿಸನು. ನಿರ್ಮಿಸಿದಾತನು ಇವರಿಗೆ ದಯೆ ತೋರಿಸನು.


ಮೂಢರೇ, ಕಲಿತುಕೊಳ್ಳಿ ಜಾಣತನವನ್ನು ಬುದ್ಧಿಹೀನರೇ, ಗ್ರಹಿಸಿರಿ ಸನ್ಮತಿಯನ್ನು.


ನಾ ಮಂದಮತಿಯಾಗಿದ್ದೆ ಅರಿವಿಲ್ಲದೆ I ನಾ ವನ್ಯಮೃಗನಂತಿದ್ದೆ ನಿನ್ನ ಮುಂದೆ II


“ಮೂಢರೇ, ಎಂದಿನ ತನಕ ಮೂಢರಾಗಿರಲಾಶಿಸುವಿರಿ? ಕುಚೋದ್ಯಗಾರರೇ, ಎಷ್ಟುಕಾಲ ಕುಚೋದ್ಯಗಾರರಾಗಿರಲಿಚ್ಚಿಸುವಿರಿ? ಮೂರ್ಖರೇ, ಎಷ್ಟರವರೆಗೆ ತಿಳುವಳಿಕೆಯನ್ನು ಹಗೆಮಾಡುವಿರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು