Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 95:1 - ಕನ್ನಡ ಸತ್ಯವೇದವು C.L. Bible (BSI)

1 ಬನ್ನಿ, ಸ್ತುತಿಗೀತೆ ಹಾಡೋಣ ಬನ್ನಿ, ಪ್ರಭುವಿಗೆ I ಜಯಘೋಷ ಮಾಡೋಣ ನಮ್ಮ ರಕ್ಷಕ ದೇವನಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬನ್ನಿರಿ, ಯೆಹೋವನಿಗೆ ಉತ್ಸಾಹದಿಂದ ಹಾಡೋಣ; ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬನ್ನಿರಿ, ಯೆಹೋವನಿಗೆ ಉತ್ಸಾಹ ಧ್ವನಿಗೈಯುವಾ; ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬನ್ನಿರಿ, ನಾವು ಯೆಹೋವನನ್ನು ಸ್ತುತಿಸೋಣ! ನಮಗೆ ಬಂಡೆಯಾಗಿರುವಾತನನ್ನು ಕೊಂಡಾಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬನ್ನಿರಿ, ಯೆಹೋವ ದೇವರಿಗೆ ಉತ್ಸಾಹ ಗೀತೆಯನ್ನು ಹಾಡೋಣ; ನಮ್ಮ ರಕ್ಷಣೆಯ ಬಂಡೆಯಾಗಿರುವ ದೇವರಿಗೆ ಜಯಧ್ವನಿ ಮಾಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 95:1
36 ತಿಳಿವುಗಳ ಹೋಲಿಕೆ  

ಅದೂ ತಮ್ಮೊಡನೆ ಬರುತ್ತಿದ್ದ ದೈವಿಕ ಬಂಡೆಯಿಂದ ಕುಡಿದರು. ಕ್ರಿಸ್ತಯೇಸುವೇ ಆ ಬಂಡೆ.


ಹಾಡಿರಿ ಶುಭಗೀತೆಯನು ಬಲಪ್ರದನಾದ ದೇವನಿಗೆ I ಮಾಡಿರಿ ಜಯಜಯಕಾರವನು ಯಕೋಬ ಕುಲದೇವನಿಗೆ II


ಪ್ರಭುವನು ಸ್ತುತಿಸಲಿ ಉಸಿರಿರುವುದೆಲ್ಲವೂ I ಪ್ರಭುವಿಗೆ ಸ್ತೋತ್ರವಾಗಲಿ ಅಲ್ಲೆಲೂಯ! II


ಸರ್ವೇಶ್ವರನು ಚೈತನ್ಯಸ್ವರೂಪನು ನನ್ನುದ್ಧಾರಕನವಗೆ ಸ್ತುತಿಸ್ತೋತ್ರವು ನನ್ನಾಶ್ರಯಸಿರಿ ದೇವಗೆ ಜಯಕಾರವು.


ಮಿರ್ಯಾಮಳು ಅವರ ಹಾಡಿಗೆ ಈ ಪಲ್ಲವಿಯನ್ನು ಕೂಡಿಸಿದಳು: ಮಾಡಿರಿ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ ಕಡಲಲ್ಲಿ ಕೆಡವಿ ನಾಶಮಾಡಿಹನು ಕುದುರೆಗಳನು, ರಾಹುತರನು


ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.


ಭೂನಿವಾಸಿಗಳೇ, ಜಯಘೋಷ ಮಾಡಿ ಪ್ರಭುವಿಗೆ I


ಬನ್ನಿ, ಕೊಂಡಾಡುವ ಪ್ರಭು ದೇವನನು II ಘನಪಡಿಸೋಣ ಅವನ ಶ್ರೀನಾಮವನು II


ಹಾಡಿ ಪಾಡಿ ಹೊಗಳಿರಿ ಆತನನು I ಧ್ಯಾನಿಸಿ ಆತನ ಪವಾಡಗಳನು II


ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.


ಜನಾಂಗಗಳೇ, ನಮಿಸಿರಿ ನಮ್ಮ ದೇವನನು I ಗಟ್ಟಿಯಾಗಿ ಮಾಡಿರಿ ಅವನ ಗುಣಗಾನವನು II


“ತೃಪ್ತಿಯಾಗಿ ತಿಂದನು ಯಕೋಬನು, ಕೊಬ್ಬಿಹೋದನು ಆ ಯೆಶೂರನು; ತೊರೆದುಬಿಟ್ಟನು ತನ್ನ ಪೊರೆಬಂಡೆಯನು ಮರೆತುಬಿಟ್ಟನು ತನ್ನ ಸೃಷ್ಟಿಕರ್ತನನು.


ತರುವಾಯ ನನಗೆ ಮತ್ತೊಂದು ಧ್ವನಿ ಕೇಳಿಸಿತು. ಅದು ದೊಡ್ಡ, ಜನಸಮೂಹದ ಆರ್ಭಟದಂತೆಯೂ ಭೋರ್ಗರೆಯುವ ಜಲಪ್ರವಾಹದ ಮೊರೆತದಂತೆಯೂ ಭಾರಿ ಗುಡುಗಿನ ಗರ್ಜನೆಯಂತೆಯೂ ಇತ್ತು. ಅದು ಇಂತೆಂದಿತು : “ಅಲ್ಲೆಲೂಯ ! ಸರ್ವಶಕ್ತ ನಮ್ಮ ಪ್ರಭು ದೇವ ರಾಜ್ಯವಾಳುತಿಹನಾತ.


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ಕೀರ್ತನೆ, ಹಾಡು, ಭಕ್ತಿಗೀತೆ ಇವುಗಳಿಂದ ನಿಮ್ಮ ಭಾವಗಳನ್ನು ಪರಸ್ಪರ ವ್ಯಕ್ತಪಡಿಸಿರಿ. ಹೃದಯಾಂತರಾಳದಿಂದ ಹಾಡಿ ಪ್ರಭುವಿಗೆ ಸ್ತುತಿಸಲ್ಲಿಸಿರಿ.


ಯೇಸುವಿನ ಹಿಂದೆಯೂ ಮುಂದೆಯೂ ಗುಂಪುಗುಂಪಾಗಿ ಹೋಗುತ್ತಿದ್ದ ಜನರು : “ದಾವೀದ ಕುಲಪುತ್ರನಿಗೆ ಜಯವಾಗಲಿ! ಸರ್ವೇಶ್ವರನ ನಾಮದಲಿ ಬರುವವನಿಗೆ ಮಂಗಳವಾಗಲಿ! ಮಹೋನ್ನತದಲ್ಲಿ ದೇವರಿಗೆ ಜಯವಾಗಲಿ!” ಎಂದು ಹರ್ಷೋದ್ಗಾರ ಮಾಡುತ್ತಿದ್ದರು.


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ, ಇವು ಮತ್ತೆ ಕೇಳಿಬರುವುವು. ‘ಸೇನಾಧೀಶ್ವರ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರ ಮಾಡಿ; ಆತ ಒಳ್ಳೆಯವನು, ಆತನ ಪ್ರೀತಿ ಶಾಶ್ವತ’ ಎಂದು ಹಾಡುತ್ತಾ ಕೃತಜ್ಞತಾಬಲಿಯನ್ನು ದೇವಾಲಯಕ್ಕೆ ತರುವರು. ಅವರ ಗಾನ ನಿಮ್ಮ ಕಿವಿಗೆ ಬೀಳುವುದು. ನಾಡನ್ನು ಬಿಡುಗಡೆಮಾಡಿ ಹಿಂದಿನ ಸುಸ್ಥಿತಿಗೆ ಏರಿಸುವೆನು.


ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ I ಆತ ಒಳ್ಳೆಯವ, ಆತನ ಪ್ರೀತಿ ಶಾಶ್ವತ II


ಸ್ತುತಿ ಮಾಡಿ ಪ್ರಭುವನು ಸಮಸ್ತ ರಾಷ್ಟ್ರಗಳೇ I ಆತನನು ಹೊಗಳಿ ಹಾಡಿ ಸರ್ವಜನಾಂಗಗಳೇ II


ಆಗ ಮೋಶೆ ಮತ್ತು ಇಸ್ರಯೇಲರು ಸರ್ವೇಶ್ವರ ಸ್ವಾಮಿಗೆ ಸ್ತೋತ್ರವಾಗಿ ಈ ಕೀರ್ತನೆಯನ್ನು ಹಾಡಿದರು: “ಮಾಡೋಣ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ ಕುದುರೆಗಳನು ರಾಹುತರನು ಕಡಲಲ್ಲಿ ಕೆಡವಿ ನಾಶಮಾಡಿಹನು


ಹೊಗಳಲಿ ಪ್ರಭುವಿನಚಲ ಪ್ರೀತಿಯನು I ಜನರಿಗಾತ ಎಸಗಿದ ಅತಿಶಯಗಳನು II


ಹೊಗಳಲಿ ಪ್ರಭುವಿನಚಲ ಪ್ರೀತಿಯನು I ಜನರಿಗಾತ ಎಸಗಿದ ಅತಿಶಯಗಳನು II


ಹೊಗಳಲಿ ಪ್ರಭುವಿನಚಲ ಪ್ರೀತಿಯನು I ಜನರಿಗೆ ಆತನೆಸಗಿದ ಅತಿಶಯಗಳನು II


ಪ್ರೀತಿನೀತಿಗಳ ಕುರಿತು ಹಾಡುವೆನು I ಹೇ‍ ಪ್ರಭೂ, ನಿನ್ನನೆ ಹಾಡಿಹೊಗಳುವೆನು II


‘ನನಗೆ ಪಿತ, ದೈವ, ದುರ್ಗ, ಉದ್ಧಾರಕ, ನೀನು’ I ಇಂತೆಂದೇ ನನ್ನನು ಸಂಬೋಧಿಸುವನವನು II


ಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಜನರು ಸಿಂಹಾಸನದ ಸಾನ್ನಿಧ್ಯದಲ್ಲಿಯೂ ನಾಲ್ಕು ಜೀವಿಗಳ ಮುಂದೆಯೂ ಸಭಾಪ್ರಮುಖರ ಎದುರಿನಲ್ಲಿಯೂ ನಿಂತು ಒಂದು ಹೊಸಗೀತೆಯನ್ನು ಹಾಡುತ್ತಿದ್ದರು. ಇಡೀ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರೇ. ಇವರನ್ನುಳಿದು ಬೇರೆ ಯಾರಿಂದಲೂ ಆ ಹಾಡನ್ನು ಕಲಿಯಲಾಗಲಿಲ್ಲ.


ಸ್ವರಮಂಡಲ, ಕಿನ್ನರಿ, ತುತೂರಿ ಇವುಗಳೊಡನೆ ಜೆರುಸಲೇಮಿನಲ್ಲಿರುವ ಸರ್ವೇಶ್ವರನಾಲಯಕ್ಕೆ ಬಂದರು.


ನನ್ನ ಶತ್ರುಗಳಿಗೆ ವಿಧಿಸುವನಾದೇವ ಪ್ರತಿದಂಡನೆ I ಜನಾಂಗಗಳನು ಅಧೀನಪಡಿಸುವನಾತ ನನಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು