Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 95:11 - ಕನ್ನಡ ಸತ್ಯವೇದವು C.L. Bible (BSI)

11 ಎಂತಲೆ ಸೇರರಿವರು ನನ್ನ ವಿಶ್ರಾಂತಿ ನೆಲೆ I ಎಂದು ಸಿಟ್ಟಿನಿಂದ ಕೆರಳಿ ನಾ ಶಪಥಮಾಡಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದುದರಿಂದ ಇವರು, “ನನ್ನ ವಿಶ್ರಾಂತಿಯಲ್ಲಿ ಸೇರಬಾರದು” ಎಂದು ಕೋಪಗೊಂಡು ಪ್ರಮಾಣಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆದದರಿಂದ ಇವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ಕೋಪಗೊಂಡು ಪ್ರಮಾಣಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ನಾನು ಕೋಪಗೊಂಡು ನನ್ನ ವಿಶ್ರಾಂತಿಯ ನಾಡನ್ನು ಅವರು ಪ್ರವೇಶಿಸಕೂಡದೆಂದು ನಾನು ಪ್ರಮಾಣ ಮಾಡಿದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದ್ದರಿಂದ, ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ,’ ” ಎಂದು ನಾನು ಅಸಂತೋಷದಿಂದ ಆಣೆ ಇಟ್ಟುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 95:11
14 ತಿಳಿವುಗಳ ಹೋಲಿಕೆ  

ಲೋಕಾದಿಯಲ್ಲೇ, ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿದ್ದರೂ ಅವರು, “ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ ಎಂದು ಸಿಟ್ಟುಗೊಂಡು ಶಪಥ ಮಾಡಿದೆನು,” ಎಂದು ಹೇಳಿದ್ದಾರೆ. ವಿಶ್ವಾಸಿಸುವ ನಾವಾದರೋ ಆ ವಿಶ್ರಾಂತಿಯ ನೆಲೆಯನ್ನು ಸೇರುತ್ತೇವೆ.


ಮೇಲೆ ಹೇಳಿದ ವಚನದಲ್ಲಾದರೋ, “ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ,” ಎಂದಿದೆ.


ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ ಎಂದು ಸಿಟ್ಟುಗೊಂಡು ಶಪಥ ಮಾಡಿದೆನು.”


ಆದ್ದರಿಂದ ಇವರ ಪೂರ್ವಜರಿಗೆ ಪ್ರಮಾಣಪೂರ್ವಕವಾಗಿ ನಾನು ವಾಗ್ದಾನ ಮಾಡಿದ ಆ ನಾಡನ್ನು ಇವರಾರು ನೋಡುವುದಿಲ್ಲ.


“ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ” ಎಂದು ಯಾರನ್ನು ಕುರಿತು ಶಪಥ ಮಾಡಿದರು? ತಮಗೆ ಅವಿಧೇಯರಾದ ಜನರನ್ನು ಕುರಿತಲ್ಲವೇ?


ಸರ್ವೇಶ್ವರ ಸ್ವಾಮಿ ತಮ್ಮ ಜನರಿಗೆ : “ನೀವು ದಾರಿಗಳು ಕೂಡುವ ಸ್ಥಳಗಳಲ್ಲಿ ನಿಂತು ನೋಡಿ. ಸನಾತನ ಮಾರ್ಗಗಳು ಯಾವುವು? ಸನ್ಮಾರ್ಗ ಎಲ್ಲಿದೆ? ಎಂದು ವಿಚಾರಿಸಿರಿ. ಅದರಲ್ಲೆ ಮುನ್ನಡೆಯಿರಿ. ಆಗ ನಿಮಗೆ ಮನನೆಮ್ಮದಿ ದೊರಕುವುದು.” ಆದರೆ ಆ ಜನರು : “ಇಲ್ಲ, ನಾವು ಅದರಲ್ಲಿ ನಡೆಯುವುದೇ ಇಲ್ಲ” ಎಂದರು.


ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ, ನೀವು ಇನ್ನು ವಿಶ್ರಾಂತಿಹೊಂದಿಲ್ಲ.


ಇದಾದ ಮೇಲೆ ಸ್ವರ್ಗದಿಂದ ಬಂದ ಧ್ವನಿಯೊಂದು ಕೇಳಿಸಿತು. ಅದು ನನಗೆ, “ನೀನಿದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿ ಸಾಯುವವರು ಭಾಗ್ಯವಂತರು,” ಎಂದು ತಿಳಿಸಿತು. ಆಗ ದೇವರ ಆತ್ಮ, “ಹೌದು, ಅವರೇ ಭಾಗ್ಯವಂತರು. ಇನ್ನು ಅವರ ಸಂಕಷ್ಟಗಳು ಮುಗಿದು ಅವರಿಗೆ ವಿಶ್ರಾಂತಿ ದೊರಕುವುದು; ಅವರ ಸುಕೃತ್ಯಗಳಿಗೆ ತಕ್ಕ ಪ್ರತಿಫಲ ದೊರಕುವುದು,” ಎಂದು ಹೇಳಿತು.


ಮಿಥ್ಯದರ್ಶನ ಹೊಂದಿ ಸುಳ್ಳು ಭವಿಷ್ಯ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರಿಯ ಸಭೆಯಲ್ಲಿ ಸೇರಕೂಡದು, ಇಸ್ರಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರು ಲಿಖಿತವಾಗಬಾರದು, ಅವರು ಇಸ್ರಯೇಲ್ ನಾಡನ್ನು ಪ್ರವೇಶಿಸಲೂಬಾರದು. ನಾನೇ ಸರ್ವೇಶ್ವರನಾದ ದೇವರು ಎಂದು ನಿಮಗೆ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು